ನಿಗಮ ಮಂಡಳಿಗಳಿಗೆ ನಿರ್ದೇಶಕರ, ಸದಸ್ಯರ ಪಟ್ಟಿ ತಿಂಗಳೊಳಗಾಗಿ ನೀಡುವೆ: ಸಚಿವ ಪರಮೇಶ್ವರ್

Date:

ನಿಗಮ ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರುಗಳನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟುವರೆ ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿ, “ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಅನುಭವವಿದೆ. ಆದ್ದರಿಂದ ಯಾವ ತೊಂದರೆಯಾಗುವುದಿಲ್ಲ. ಒಂದು ತಿಂಗಳೊಳಗಾಗಿ ಆಯ್ಕೆ ಮಾಡಿ, ಪಟ್ಟಿ ನೀಡುತ್ತೇನೆ” ಎಂದು ಹೇಳಿದರು.

ತುರ್ತುಪರಿಸ್ಥಿತಿ 49 ವರ್ಷ ಆದ ಹಿನ್ನೆಲೆಯಲ್ಲಿ ಬಿಜೆಪಿಯವರ ಹೇಳಿಕೆಗಳ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ದೇಶದಲ್ಲಿ ಜ್ವಲಂತ ಸಮಸ್ಯೆಗಳಿವೆ. ಜನರ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು. ದೇಶದಲ್ಲಿ ಬಡತನ ಇನ್ನೂ ಇದೆ. ಮತ್ತಷ್ಟು ಅಭಿವೃದ್ಧಿಯಾಗಬೇಕು, ಉದ್ಯೋಗ ಸಿಗಬೇಕಿದೆ. ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಳ್ಳಲು ನೀಟ್ ಸಂಸ್ಥೆಗಳನ್ನು ಮಾಡಿ ಸರಿಯಾಗಿ ಕೆಲಸ ಮಾಡದಿರುವುದು, ಮಕ್ಕಳ ಭವಿಷ್ಯ ಹಾಳು ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಇದನ್ನೆಲ್ಲ ಬಿಟ್ಟು 49 ವರ್ಷದ ಹಿಂದೆ ತುರ್ತು ಪರಿಸ್ಥಿತಿ ಹೇರಿರುವುದನ್ನು ಮಾತನಾಡಲು ಹೊರಟಿರುವ ಬಿಜೆಪಿಯವರಿಗೆ ದೇಶದ ಅಭಿವೃದ್ಧಿ, ಭವಿಷ್ಯ, ಜನರ ಬಗ್ಗೆ ಕಾಳಜಿ ಇಲ್ಲದಿರುವುದನ್ನು ತೋರಿಸುತ್ತದೆ” ಎಂದು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರದ ಕುರಿತು ಮಾತನಾಡಿ, “ಎಲ್ಲರು ಒಂದೇ ಜೈಲಿನಲ್ಲಿ ಇರುವುದು ಸೂಕ್ತವಲ್ಲ ಎಂಬ ಕಾರಣದಿಂದ ಬಂಧಿಖಾನೆ ಅಧಿಕಾರಿಗಳು ಮತ್ತು ಪೊಲೀಸರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಹೀಗಾಗಿ ತುಮಕೂರು ಜೈಲಿಗೆ ಸ್ಥಳಾಂತರಿಸಿದ್ದಾರೆ” ಎಂದರು.

ಯುವತಿ ಪ್ರಬುದ್ಧ ಕೊಲೆ‌ ಪ್ರಕರಣ ಸಿಐಡಿಗೆ ವಹಿಸಿರುವ ಕುರಿತು ಪ್ರತಿಕ್ರಿಯಿಸಿ,‌ “ಈವರೆಗಿನ ತನಿಖೆ ಕೊಲೆಯಾದ ಯುವತಿಯ ಪಾಲಕರಿಗೆ ಸಮಾಧಾನ ತಂದಿಲ್ಲ. ಸಿಐಡಿಗೆ ವಹಿಸುವಂತೆ ಕೋರಿ ನನಗೂ ಮನವಿ ಮಾಡಿದ್ದರು. ಸಿಎಂ ಜೊತೆ ಚರ್ಚಿಸಿ, ನಿರ್ಧಾರ ಮಾಡುವುದಾಗಿ ಭರವಸೆ ನೀಡಿದ್ದೆ‌. ನಿನ್ನೆ ಮುಖ್ಯಮಂತ್ರಿಯವರು ಸಿಐಡಿಗೆ ವಹಿಸಿದ್ದಾರೆ” ಎಂದರು.

ನೀಟ್ ಅಕ್ರಮದ ಬಗ್ಗೆ ನರೇಂದ್ರ ಮೋದಿಯವರು ಮೌನ ವಹಿಸಿರುವ ಕುರಿತು ಮಾತನಾಡಿ, “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ದೇಶದಲ್ಲಿ ಮಕ್ಕಳ ಭವಿಷ್ಯ ಹಾಳಾಗುತ್ತಿದೆ ಎಂಬುದನ್ನು ಹೇಳಿದ್ದಾರೆ. ಆದರೆ, ಪ್ರಧಾನಿ ಮೋದಿಯವರಿಗೆ ಈ ಬಗ್ಗೆ ಏನು ಅನ್ನಿಸಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಏನಾದರೂ ಅಂತಿಮ ನಿರ್ಧಾರ ಕೈಗೊಳ್ಳಬೇಕಲ್ಲವೇ? ಮರುಪರೀಕ್ಷೆ ನಡೆಸುವುದು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕಲ್ಲವೇ? ಇದೆಲ್ಲವನ್ನು ಪ್ರಧಾನಿ ಮಂತ್ರಿಯವರಾಗಲಿ ಅಥವಾ ಸಂಬಂಧಪಟ್ಟ ಮಂತ್ರಿಗಳಾಗಲಿ ಜವಾಬ್ದಾರಿಯುತವಾಗಿ ತೀರ್ಮಾನ ಪ್ರಕಟಿಸಬೇಕು. ಎಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳಿಗೆ ಪ್ರವೇಶ ಆರಂಭವಾಗಬೇಕಿತ್ತು. ಮಕ್ಕಳು ಗೊಂದಲದಲ್ಲಿದ್ದು, ಇದರಿಂದ ಅವರ ಭವಿಷ್ಯ ಏನಾಗಬೇಕು” ಎಂದು ಪ್ರಶ್ನಿಸಿದರು‌.

“ಹಿರಿಯ ಶಾಸಕರಿಗೆ ಸ್ಥಾನಕ್ಕೆ ಒತ್ತಾಯದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಂಪುಟ ಪುನರ್‌ರಚನೆ ಬಗ್ಗೆ ನಾನು ಏನೂ ಹೇಳಲು ಹೋಗುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಎಲ್ಲವೂ ಹೈಕಮಾಂಡ್‌ಗೆ ಬಿಟ್ಟಿದ್ದು” ಎಂದರು.

ತುಮಕೂರು ಬಂದ್ ಕುರಿತು ಪ್ರತಿಕ್ರಿಯಿಸಿ, ಹೇಮಾವತಿ ಕೆನಾಲ್‌ ಸಂಬಂಧಿಸಿದಂತೆ ನೀರಾವರಿ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಸಭೆ ನಡೆಸಿದ್ದರು. ನೀರಾವರಿ ತಜ್ಞರೊಂದಿಗೆ ಚರ್ಚಿಸಿ ವಿಚಾರ ತಿಳಿಸಲಾಗಿತ್ತು. ನೀರಿನ ಹಂಚಿಕೆಯಲ್ಲಿ ಯಾರಿಗೂ ತೊಂದರೆ ಆಗುವುದಿಲ್ಲ ಎಂದು ಸಭೆಯಲ್ಲಿ ಡಿಸಿಎಂ ಅವರು ಭರವಸೆ ನೀಡಿದ್ದರು. ಆಗ ಎಲ್ಲರು ಒಪ್ಪಿಕೊಂಡಿದ್ದು, ತೊಂದರೆಯಾಗುವುದಿಲ್ಲವಾದರೆ ನೀರು ತೆಗೆದುಕೊಂಡು ಹೋಗುವಂತೆ ಎಲ್ಲ ಶಾಸಕರು ತಿಳಿಸಿದ್ದರು. ಈಗ ಪ್ರತಿಭಟನೆ ಮಾರ್ಗವನ್ನು ಹಿಡಿದಿದ್ದಾರೆ. ಈ ಬಗ್ಗೆ ಮುಂದೆ ಏನು ತೀರ್ಮಾನ ತೆಗೆದುಕೊಳ್ಳಬೇಕು ಎಂಬುದನ್ನು ಉಪಮುಖ್ಯಮಂತ್ರಿಯವರಿಗೆ ಚರ್ಚಿಸುತ್ತೇನೆ ಎಂದು ಹೇಳಿದರು‌.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...