ಚಾಮರಾಜನಗರಕ್ಕೆ ನಾನು ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ: ಸಿಎಂ ಸಿದ್ದರಾಮಯ್ಯ

Date:

ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟು ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಾಮರಾಜನಗರ ಜಿಲ್ಲೆಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

“ಅಧಿಕಾರ ಮತ್ತು ಸಂಪತ್ತು ಸಮಾಜದ ಎಲ್ಲರಲ್ಲೂ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ. ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿಗಳನ್ನು ಕೊಟ್ಟಿದೆ. ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಏಕೈಕ ಸರ್ಕಾರ ನಮ್ಮದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಐದು ಗ್ಯಾರಂಟಿಗಳಿಗೆ ನಾಲ್ಕೂವರೆ ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ರಾಜ್ಯದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 45 ಸಾವಿರದಿಂದ 50 ಸಾವಿರ ರೂಪಾಯಿ ಕೊಡುತ್ತಿದ್ದೇವೆ. ಇದನ್ನು ಬಿಜೆಪಿ ಯಾಕೆ ವಿರೋಧಿಸುತ್ತಿದೆ? ನಾಡಿನ ಜನರಿಗೆ ಸರ್ಕಾರದ ಸವಲತ್ತುಗಳು ಸಿಗಬಾರದಾ” ಎಂದು ಪ್ರಶ್ನಿಸಿದರು.

“ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳ, ನಾಲ್ಕೂವರೆ ಕೋಟಿ ಜನಕ್ಕೆ ಈ ವರ್ಷ 36000 ಕೋಟಿ ಹಣ ಕೊಟ್ಟಿದ್ದೇವೆ. ಮುಂದಿನ ವರ್ಷಕ್ಕೆ 59000 ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ. ರಾಜ್ಯದ ಜನರ ಅಭಿವೃದ್ಧಿ ಕಾರ್ಯಗಳಿಗೆ ಒಂದು ಲಕ್ಷ ಇಪ್ಪತ್ತು ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಘೋಷಿಸಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರ ಗಮನ ಬೇರೆಡೆಗೆ ಸೆಳೆಯಲು ‘ಸಿಎಎ’ ಮುಂದೆ ಮಾಡಿದ ‘ಮೋಶಾ’

ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ

“ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಡನಂಬಿಕೆ ಜಿಲ್ಲೆಯ ಜನರಿಗೆ ಮಾಡುವ ಅವಮಾನ. ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ” ಎಂದರು.

ಮನುವಾದ ನಮ್ಮೆಲ್ಲರ ಶತ್ರು: ಎಚ್ಚರ

“ಸಂವಿಧಾನ ಬದಲಾಯಿಸುತ್ತೇವೆ ಎನ್ನುತ್ತಿರುವ ಮನುವಾದಿಗಳು ಮತ್ತು ಮನುವಾದ ನಮ್ಮ ನಿಮ್ಮೆಲ್ಲರ ಶತ್ರು. ಇವರಿಗೆ ಸಂವಿಧಾನ ಬದಲಾಯಿಸಲು ಅವಕಾಶ ಆಗದಂತೆ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನನಗೆ ಶಕ್ತಿ ತುಂಬಿ” ಎಂದು ವಿನಂತಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸೇರಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು ಮತ್ತು ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...