206 ಮಂದಿ ಸೀನ್ ಆಫ್ ಕ್ರೈಂ ಅಧಿಕಾರಿಗಳನ್ನು ನೇಮಕ ಮಾಡಿಕೊಂಡ ಪೊಲೀಸ್ ಇಲಾಖೆ

Date:

ಅಪರಾಧ ನಡೆದ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂರಕ್ಷಿಸಿ, ಸಂಗ್ರಹಿಸಿ, ವೈಜ್ಞಾನಿಕವಾಗಿ ತನಿಖೆ ನಡೆಸಲು ತನಿಖಾಧಿಕಾರಿಗಳಿಗೆ ನೀಡಲು ಸಹಾಯ ಮಾಡುವ ಸೀನ್ ಆಫ್ ಕ್ರೈಂ ಅಧಿಕಾರಿಗಳನ್ನು
ರಾಜ್ಯ ಪೊಲೀಸ್ ಇಲಾಖೆಗೆ ನೇಮಕ ಮಾಡಲಾಗಿದೆ.

ರಾಜ್ಯದಲ್ಲಿ ಪ್ರಥಮ ಬಾರಿಗೆ 206 ಮಂದಿ ಸೀನ್ ಆಫ್ ಕ್ರೈಂ ಅಧಿಕಾರಿಗಳನ್ನು ನೇಮಕ ಮಾಡಿಕೊಂಡಿದ್ದು, ಇವರು ವಿಧಿ ವಿಜ್ಞಾನ ವಿಷಯದಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ತಿಳಿಸಿದ್ದಾರೆ.‌

ಅಪರಾಧ ನಡೆದ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂರಕ್ಷಿಸಿ, ಸಂಗ್ರಹಿಸಿ, ವೈಜ್ಞಾನಿಕವಾಗಿ ಪ್ಯಾಕ್ ಮಾಡಲು ತನಿಖಾಧಿಕಾರಿಗಳಿಗೆ ನೇಮಕಗೊಂಡಿರುವ ಅಧಿಕಾರಿಗಳು ಸಹಾಯ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೀನ್ ಆಫ್ ಕ್ರೈಂ ಅಧಿಕಾರಿಗಳಿಗೆ ಈಗಾಗಲೇ ಅವರಿಗೆ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್ಎಸ್ಎಲ್) ಎನ್ಎಫ್ಎಸ್‌ಯು ಗುಜರಾತ್, ಕೆಪಿಎ ಬಾಂಬ್ ಪತ್ತೆ ದಳ, ಶ್ವಾನದಳ, ಸಿಐಡಿ, ಫೋರೆನ್ಸಿಕ್ ಮೆಡಿಸಿನ್ ಮುಂತಾದ ಕಡೆಗಳಲ್ಲಿ ತರಬೇತಿ ನೀಡಲಾಗಿದೆ. ಸೀನ್ ಆಫ್ ಕ್ರೈಂ ಅಧಿಕಾರಿಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿದ್ದು ಜಿಲ್ಲೆಯ ಡಿಪಿಒ ಕಚೇರಿಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಕೃತ್ಯ ನಡೆದ ಸ್ಥಳಕ್ಕೆ ತ್ವರಿತವಾಗಿ ಭೇಟಿ ನೀಡುತ್ತಾರೆ.

ಈ ಸುದ್ದಿ ಓದಿದ್ದೀರಾ? ಯತೀಂದ್ರ ಸ್ಪರ್ಧಿಸುವುದಿಲ್ಲ, ಸಿದ್ದರಾಮಯ್ಯ ಕೂಡ ಇದನ್ನೇ ಹೇಳಿದ್ದಾರೆ: ಸಚಿವ ಕೆ.ವೆಂಕಟೇಶ್

ರಾಜ್ಯದಲ್ಲಿ 13 ಮೊಬೈಲ್ ಫೋರೆನ್ಸಿಕ್ ವ್ಯಾನ್‌ಗಳಿದ್ದು ವಿಶೇಷವಾಗಿ ಪ್ರಯೋಗಾಲಯದಂತಹ ಪರಿಸರವನ್ನಾಗಿ ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ 16 ಬಗೆಯ ಕಿಟ್‌ಗಳು ಇದ್ದು ಅವುಗಳನ್ನು ವಿವಿಧ ರೀತಿಯ ಕ್ರೈಂ ಸೀನ್‌ಗಳಾದ ಕೊಲೆ, ಅತ್ಯಾಚಾರ, ಸ್ಪೋಟ, ಬೆಂಕಿ ಅವಘಡ, ಅಪಘಾತ, ಮಾದಕ ವಸ್ತುಗಳ ಕೇಸುಗಳಲ್ಲಿ ಬಳಸಬಹುದಾಗಿದೆ. ಇದಲ್ಲದೆ ಕೆನೋಪಿ, ಜನರೇಟರ್, ಲೈಟ್‌ಗಳು, ಇರುವುದರಿಂದ ಹೊರಾಂಗಣದ ಕ್ರೈಂ ಸೀನ್‌ಗಳಲ್ಲಿ ಹೆಚ್ಚಿನ ಅವಧಿಯವರೆಗೆ ಕೆಲಸಮಾಡಲು ಸಹಾಯವಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...