ಮೈಕ್ರೋ ಫೈನಾನ್ಸ್‌ಗಳ ಹಾವಳಿ | ರೈತರ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ: ಮುಖ್ಯಮಂತ್ರಿ ಚಂದ್ರು

Date:

ರಾಜ್ಯದಲ್ಲಿ ಇತ್ತೀಚಿನ ಮೈಕ್ರೋ ಫೈನಾ‌ನ್ಸ್‌ಗಳ ವಸೂಲಿ ದಂಧೆಗಳಿಗೆ ರಾಜ್ಯದ ರೈತರು ಆತ್ಮಹತ್ಯೆ ಮಾರ್ಗವನ್ನು ಹಿಡಿದಿರುವುದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಹೊರಬೇಕು ಹಾಗೂ ಕೂಡಲೇ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, “ಅಕ್ರಮ ಕಂಪನಿಗಳು ಸ್ಥಳೀಯ ರಾಜಕಾರಣಿಗಳು ಹಾಗೂ ಪೊಲೀಸ್ ಇಲಾಖೆಯ ಕೃಪಾಕಟಾಕ್ಷದಿಂದಾಗಿ ರೈತಾಪಿ ಮಕ್ಕಳ ಮೇಲೆ ಯಾವುದೇ ಆರ್ ಬಿ ಐ ನಿಯಮಾವಳಿಗಳು ಹಾಗೂ ಈ ನೆಲದ ಕಾನೂನುಗಳನ್ನು ಉಲ್ಲಂಘಿಸಿ ಅಕ್ರಮ ವಸೂಲಿ, ಬೆದರಿಕೆ, ಅಪಮಾನ ದಂತಹ ಕ್ರಿಮಿನಲ್ ಮಾರ್ಗಗಳಿಂದ ಚಕ್ರ ಬಡ್ಡಿ ವಸೂಲಿ ಮಾಡುತ್ತಿರುವುದು ರಾಜ್ಯದಲ್ಲಿ ಪೊಲೀಸ್ ಇಲಾಖೆ ವೈಫಲ್ಯಗೊಂಡಿರುವುದರ ಸಂಕೇತವಾಗಿದೆ” ಎಂದು ಆರೋಪಿಸಿದ್ದಾರೆ.

“ಸ್ಥಳೀಯ ಸಹಕಾರಿ ಸಂಸ್ಥೆಗಳು ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಹಣಕಾಸು ನೆರವು ನೀಡದೆ ಕೇವಲ ಪ್ರಭಾವಿಗಳ- ಸ್ಥಳೀಯ ಶಾಸಕರುಗಳ ಬಿಗಿ ಮುಷ್ಟಿಯಲ್ಲಿ ಸಿಲುಕಿಕೊಂಡಿವೆ. ಮತ್ತೊಂದು ಕಡೆ ಸರ್ಕಾರದಿಂದ ರೈತಾಪಿ ವರ್ಗಗಳಿಗೆ ಬೆಳೆ ನಷ್ಟ ಪರಿಹಾರಗಳಿಗೆ ಪರಿಣಾಮಕಾರಿಯಾದಂತಹ ಯೋಜನೆಗಳು ತಲುಪದೇ ಅನಿವಾರ್ಯವಾಗಿ ರೈತರು ಸಾಲಕ್ಕಾಗಿ ಇಂತಹ ಅಕ್ರಮ ಫೈನಾನ್ಸ್ ಕಂಪನಿಗಳ ಮೊರೆ ಹೋಗಿ ತಮ್ಮ ಜೀವಗಳನ್ನೇ ಬಲಿ ಕೊಡುವಂತಹ ವಾತಾವರಣ ಹಾಗೂ ಸಂದರ್ಭಗಳು ರಾಜ್ಯದಲ್ಲಿ ಸೃಷ್ಟಿಯಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಪೊಲೀಸ್ ಇಲಾಖೆ ಹಾಗೂ ಕೇಂದ್ರದ ಜಾರಿ ನಿರ್ದೇಶನಾಲಯ ಕಣ್ಮುಚ್ಚಿ ಕುಳಿತಿರುವುದು ಬೇಸರದ ಸಂಗತಿಯಾಗಿದೆ. ಆರಂಭದಲ್ಲಿ ಈ ಕಂಪನಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದಲ್ಲಿ ಈಗಾಗಲೇ ಆತ್ಮಹತ್ಯೆಗೆ ಶರಣಾಗಿರುವ ನೂರಾರು ರೈತರ ಜೀವವನ್ನು ಉಳಿಸಬಹುದಾಗಿತ್ತು. ಆದರೆ ಹಲವು ತಿಂಗಳುಗಳಿಂದ ಸರ್ಕಾರ ಹಾಗೂ ವಿಪಕ್ಷಗಳು ಇಲ್ಲಸಲ್ಲದ ರಾಜಕೀಯ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡು ಇಂದು ನೂರಾರು ರೈತರ ಆತ್ಮಹತ್ಯೆಗೆ ತಾವುಗಳೇ ನೇರ ಹೊಣೆ ಹೊರಬೇಕು” ಎಂದು ಆಗ್ರಹಿಸಿದ್ದಾರೆ.

ಈ ಕೂಡಲೇ ಕಾನೂನಿನ ಬಿಗಿ ಕುಣಿಕೆಯನ್ನು ಹಣಕಾಸು ಕಂಪನಿಗಳ ವಿರುದ್ಧ ಪ್ರಯೋಗಿಸಬೇಕು ಹಾಗೂ ಕೇಂದ್ರದ ಜಾರಿ ನಿರ್ದೇಶನಾಲಯಕ್ಕೆ ಕ್ರಮ ತೆಗೆದುಕೊಳ್ಳಲು ಶೀಘ್ರ ಶಿಫಾರಸ್ಸು ಮಾಡಿ ಮುಂಬರುವ ದಿನಗಳಲ್ಲಿ ರೈತರ ಆತ್ಮಹತ್ಯೆಗಳನ್ನು , ಶೋಷಣೆಗಳನ್ನು ತಪ್ಪಿಸಬೇಕು” ಎಂದು ಮುಖ್ಯಮಂತ್ರಿ ಚಂದ್ರು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...