ಹಾದಿಬೀದಿಯಲ್ಲಿ ಕೊಲೆ, ರಾಜ್ಯವು ಅತ್ಯಾಚಾರಿಗಳ ಆಡುಂಬೋಲವಾಗಿದೆ: ಜೆಡಿಎಸ್‌

Date:

ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಮತ್ತು ಕೊಲೆಗಳು ಹೆಚ್ಚಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನತಾ ದಳ (ಜೆಡಿಎಸ್) “ಹಾದಿಬೀದಿಯಲ್ಲಿ ಕೊಲೆಯಾಗುತ್ತಿದೆ, ರಾಜ್ಯವು ಅತ್ಯಾಚಾರಿಗಳ ಆಡುಂಬೋಲವಾಗಿದೆ” ಎಂದು ಹೇಳಿದೆ.

ರಾಜ್ಯದಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿ ಸುಮಾರು 430 ಕೊಲೆಗಳು ನಡೆದಿದೆ ಮತ್ತು 198 ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿ ಎಕ್ಸ್ ಪೋಸ್ಟ್ ಮಾಡಿರುವ ಜೆಡಿಎಸ್‌ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡುಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ” ಎಂದು ಜೆಡಿಎಸ್‌ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಇದನ್ನು ಓದಿದ್ದೀರಾ?  ಲೈಂಗಿಕ ದೌರ್ಜನ್ಯ ಪ್ರಕರಣ | ಮತ್ತೆ ವಿಮಾನ ಟಿಕೆಟ್ ರದ್ದು; ಪ್ರಜ್ವಲ್ ರೇವಣ್ಣರಿಂದ ಕಣ್ಣಾಮುಚ್ಚಾಲೆ ಆಟ

“ರಾಜ್ಯ ಗೃಹ ಇಲಾಖೆ ಎನ್ನುವುದು ಕೆಲಸ ಮಾಡುತ್ತಿದೆಯಾ? ಅಥವಾ ನಿದ್ದೆ ಮಾಡುತ್ತಿದೆಯಾ? ದಯಮಾಡಿ ಹೇಳುವಿರಾ ಪರಮೇಶ್ವರ ಅವರೇ” ಎಂದು ಜೆಡಿಎಸ್‌ ಪ್ರಶ್ನಿಸಿದೆ.

ರಾಜ್ಯದಲ್ಲಿ 2024ರ ಜನವರಿ ತಿಂಗಳಿನಿಂದ ಏಪ್ರಿಲ್‌ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ 430 ಕೊಲೆಗಳು ಮತ್ತು 198 ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ ಎಂದು ವರದಿಯಾಗಿದೆ.

2022ರಲ್ಲಿ ಒಟ್ಟಾಗಿ 537, 2023ರಲ್ಲಿ 609 ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. 2024ರ ನಾಲ್ಕು ತಿಂಗಳ ಅವಧಿಯಲ್ಲೇ 198 ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ಏಪ್ರಿಲ್‌ವರೆಗೆ 2327 ಮಹಿಳೆಯರ ಮೇಲೆ ದೌರ್ಜನ್ಯದ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...