ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರವೇ ಸಲಹೆ ನೀಡಿದ್ದು: ಸಂಸದ ತೇಜಸ್ವಿ ಸೂರ್ಯ ಆರೋಪ

Date:

ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಿಎಮ್‌ಆರ್‌ಸಿಎಲ್‌ಗೆ ರಾಜ್ಯ ಸರ್ಕಾರವೇ ಸಲಹೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ನಮ್ಮ ಮೆಟ್ರೋ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಸ್ಪಷ್ಟನೆ ಎಕ್ಸ್‌ ತಾಣದಲ್ಲಿ ತಿರುಗೇಟು ನೀಡಿದ್ದಾರೆ.

“2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ, ವಿದ್ಯುತ್‌ ಬಿಲ್‌, ಆಸ್ತಿ ತೆರಿಗೆ, ಅಬಕಾರಿ ಸುಂಕ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯಾಗಿದೆ. ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಪ್ರಯಾಣದ ದರ ಏರಿಕೆಯ ಒತ್ತಾಯದ ಮೇರೆಗೆ ಮೆಟ್ರೋ ಪರಿಷ್ಕೃತ ದರದ ವರದಿಯನ್ನು ಬಿಡುಗಡೆ ಮಾಡಲಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ನಮ್ಮ ಮೆಟ್ರೋ’ ಪ್ರಯಾಣ ದರ ಏರಿಕೆ | ಕೇಂದ್ರ ಸರ್ಕಾರದ ಸಮಿತಿಯಿಂದಲೇ ದರ ನಿಗದಿ: ಸಿಎಂ ಸ್ಪಷ್ಟನೆ

“ಪ್ರಯಾಣದ ದರ ಏರಿಕೆಯಿಂದ ಬೆಂಗಳೂರಿನ ಜನತೆಗೆ ಉಂಟಾಗುವ ತೊಂದರೆಗಳ ಅರಿತು ಬಿಜೆಪಿ ದರ ಏರಿಕೆಯನ್ನು ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ. ಮುಖ್ಯಮಂತ್ರಿಗಳಿಗೆ ಈ ಸಮಸ್ಯೆ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಪರಿಷ್ಕೃತ ದರಗಳ ಏರಿಕೆಯನ್ನು ಮರು ಪರಿಶೀಲಿಸಿ ನ್ಯಾಯಸಮ್ಮತ ದರ ನಿಗದಿಪಡಿಸಲು ನೆರವಾಗಬೇಕು” ಎಂದು ಆಗ್ರಹಿಸಿದ್ದಾರೆ.

“ಬೆಂಗಳೂರಿನ ಸಂಸದರು ಹಾಗೂ ದರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತೊಡಗಿರುವ ಕೇಂದ್ರ ಸರ್ಕಾರದ ಅಧಿಕಾರಿಗಳು ಬೆಂಗಳೂರಿನ ಜನರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯದಲ್ಲಿ ತಮಗೆ ಸಲಹೆ ಮತ್ತು ಸಹಕಾರ ನೀಡಲು ಸಿದ್ದರಿದ್ದಾರೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...