ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯ ತಲುಪಿದೆ: ಚಲುವರಾಯಸ್ವಾಮಿ

Date:

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆ ಮೂಂದೂಡಿರುವ ಹಿನ್ನಲೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ, ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯುವುದು ಹಾಗೂ ಮುಂದಿನ ನಡೆಗಳ ನಿರ್ಧಾರ ಕೈಗೊಳ್ಳುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ನಾಗಮಂಗಲ ಜಲಸೂರು ರಸ್ತೆ ಕಾಮಗಾರಿ ವೀಕ್ಷಣೆ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಇಂದು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಪರ ಆದೇಶ ಬರೋ ಆಶಾಭಾವನೆ ಇತ್ತು. ಸುಪ್ರೀಂಕೋರ್ಟ್ ವಿಚಾರಣೆ ಯನ್ನು ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಬಿಡಲು ಕಷ್ಟವಾಗುತ್ತದೆ. ಈ ಹಿನ್ನಲೆ ಕಾವೇರಿ ನದಿ ನೀರು ಪ್ರಾಧಿಕಾರದ ಮುಂದೆ ರಾಜ್ಯದ ಸಂಕಷ್ಟ ಪರಿಸ್ಥಿತಿಯನ್ನು ವಿವರಿಸುವ ಪ್ರಯತ್ನವನ್ನು ಮತ್ತೆ ನಮ್ಮ ವಕೀಲರ ಮೂಲಕ ಮುಂದುವರೆಸುತ್ತೇವೆ” ಎಂದರು.

“ಕೆಆರ್‌ಎಸ್‌ ಅಣೆಕಟ್ಟಿನಲ್ಲಿ ಸದ್ಯ ಸಂಗ್ರಹವಾಗಿರುವ ನೀರು ಕುಡಿಯೋದಕ್ಕೆ ಮಾತ್ರ ಲಭ್ಯವಾಗಿದ್ದು, ರೈತರ ಬೆಳೆಗಳಿಗೂ ನೀರು ಬಿಡದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯ ತಲುಪಿದ್ದು, ಈ ಬಗ್ಗೆ ಪ್ರಾಧಿಕಾರದ ಗಮನ ಸೆಳೆಯುವ ಪ್ರಯತ್ನ ಮುಂದುವರೆಸುತ್ತೇವೆ” ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...