ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ: ಸಿಎಂ ಸಿದ್ದರಾಮಯ್ಯ

Date:

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ ಎಂದರು.‌

ಹಾವೇರಿ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆಯಾಗಿದೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ಎಂದ ಸಿ.ಎಂ, ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಸರ್ಕಾರದಲ್ಲಿ ಕ್ರಾಂತಿಕಾರಿ ಪ್ರಗತಿ ಆಗಿದೆ ಎಂದು ಸಚಿವರ ಸಾಧನೆಗೆ ಸಿಎಂ ವೇದಿಕೆಯಲ್ಲೇ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ. ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ. GST ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ದಾಖಲೆಗಳನ್ನು ಮಂಡಿಸಿದರು.

WhatsApp Image 2026 02 14 at 3.37.23 PM

ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ‌ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. 2023-18 ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ “ನುಡಿದಂತೆ ನಡೆದು” ದಾಖಲೆ ಮಾಡಿದ್ದೇವೆ ಎಂದರು.

ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 118000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಖಾತೆಗೆ ಹಾಕಿದ್ದೇವೆ ಎಂದರು.

ಅಮಾರ್ತ್ಯಸೇನ್, ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ವ್ಯಕ್ತಪಡಿಸಿದ್ದ ಸದಾಭಿಪ್ರಾಯಗಳನ್ನು ಮುಖ್ಯಮಂತ್ರಿಗಳು ಓದಿ ವಿವರಿಸಿ,
ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದರು.

ಕೇಂದ್ರಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ. ನಮ್ಮ ಸರ್ಕಾರ 1000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಾವು ಎಲ್ಲ ಜಾತಿ ಧರ್ಮ ಭಾಷೆಯ ಜನರಿಗೆ ಸೇರಿದಂತಹ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರ ನಂಬಿಕೆಯಿರಿಸಿದೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಅವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ. ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದರು.

WhatsApp Image 2026 02 14 at 4.14.33 PM

ಸರ್ಕಾರ ನಿನ್ನೆಗೆ ಒಂದು ಸಾವಿರ ದಿನ ಪೂರೈಸಿದ್ದು, ಈ ಸಾವಿರ ದಿನಗಳಲ್ಲಿ ನಮ್ಮ ಸಾಧನಾ ಸಮಾವೇಶ ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು,ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಮತ್ತೊಮ್ಮೆ ತಿಳಿಸುತ್ತೇನೆ ಎಂದು ಪುನರುಚ್ಚರಿಸಿದರು.

ಕೇಂದ್ರ ಸರ್ಕಾರ, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಜಿಎಸ್‌ಟಿ ಸಂಗ್ರಹಣೆಯಲ್ಲಿ ಕೊರತೆಯಾಗಿದ್ದು, ರಾಜ್ಯಕ್ಕೆ 12 – 15 ಸಾವಿರ ಕೋಟಿ ನಷ್ಟವಾಗಿದೆ. ನಮಗೆ ಬರುವ ನ್ಯಾಯಯುತ ಪಾಲು ಸಿಗುತ್ತಿಲ್ಲ. ಜೆಜೆಎಂ ನಲ್ಲಿ 15 ಸಾವಿರ ಕೋಟಿ ಇನ್ನೂ ಕೊಟ್ಟಿಲ್ಲ. ಈ ಅನುದಾನ ನೀಡಿದರೆ, ರಾಜ್ಯದ ಬಹಳಷ್ಟು ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತವೆ. ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ಪರಿಶೀಲಿಸಿ, ಜಿಲ್ಲೆಯ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

“ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ” ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿದ ಅಧಿಕಾರಿಗಳನ್ನೂ ಗುರುತಿಸಿ ಸನ್ಮಾನಿಸಲಾಯಿತು.

ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಭೈರೇಗೌಡ, ಶಿವಾನಂದ ಪಾಟೀಲ್, ಹೆಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ವಿಧಾನ ಪರಿಷತ್ತಿನಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹಾಗೂ 20 ಕ್ಕೂ ಹೆಚ್ಚು ಮಂದಿ ಶಾಸಕರುಗಳು ಮತ್ತು ಮುಖಂಡರುಗಳು, ನಾಯಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...