ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ: ಕೋಲಾರ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ

Date:

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶೌಚಗುಂಡಿಗೆ ಮಕ್ಕಳನ್ನ ಇಳಿಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ರಾಜ್ಯ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಸ್ವಚ್ಛಗೊಳಿಸಿ ಅಮಾನವೀಯ ಕೃತ್ಯ ಎಸಗಿರುವ ಆರೋಪ ಶಿಕ್ಷಕರ ಮೇಲೆ ಕೇಳಿಬಂದಿದೆ.

ಯಶವಂತಪುರ ಕ್ಷೇತ್ರದ ಅಂಧ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಬೆಳವಣಿಗೆ ನಡೆದಿದ್ದು, ಶಾಲಾ ಮಕ್ಕಳ ಕೈಯಿಂದಲೇ ಶೌಚಾಲಯ ಕ್ಲೀನ್ ಮಾಡಿಸುವುದು ಹೇಯ ಕೃತ್ಯವಾಗಿದೆ ಎಂದು ಸಾರ್ವಜನಿಕರು ಹಾಗೂ ಪೋಷಕರು ಶಾಲಾ ಸಿಬ್ಬಂದಿ ವಿರುದ್ಧ ಕಿಡಿಕಾರಿರುವುದು ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದಿನಿಂದಲೂ ಈ ಶಾಲೆಯ ಶಿಕ್ಷಕರು ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ಪೋಷಕರಿಗೆ ಇಂದು ಗೊತ್ತಾಗಿದ್ದರಿಂದ ಶಾಲೆಯ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಶಾಲಾ ಶಿಕ್ಷಕರು ಶಾಲೆಗೆ ತಡವಾಗಿ ಬಂದಿದ್ದು ಕೂಡ ಪೋಷಕರು ಕೆಂಗಣ್ಣಿಗೆ ಕಾರಣವಾಯಿತು.

ಇತ್ತೀಚೆಗೆ ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಕೃತ್ಯ ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು. ಇದೀಗ ರಾಜಧಾನಿ ಬೆಂಗಳೂರಿನಲ್ಲೇ ಇಂಥ ಕೃತ್ಯ ನಡೆದಿರುವುದು ಪೋಷಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

andhralli

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ”ಅಂಧ್ರಹಳ್ಳಿ ಶಾಲೆ ಘಟನೆಯ ಬಗ್ಗೆ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಖಂಡಿತವಾಗಿ ಈ ರೀತಿಯ ಘಟನೆ ನಡೆಯಬಾರದು. ಮಕ್ಕಳನ್ನು ಈ ರೀತಿಯಲ್ಲಿ ಶಿಕ್ಷಕರು ಬಳಸಿಕೊಳ್ಳಬಾರದು. ಶಾಲೆಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಈ ನಡುವೆ ಈ ಬೆಳವಣಿಗೆಯ ಬಗ್ಗೆ ಮಾಹಿತಿ ಪಡೆಯಲು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಅಂಧ್ರಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...