ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಏಳು ಮಂದಿ ಮಾಜಿ ಸಿಎಂಗಳು

Date:

ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಸೇರಿದಂತೆ ಏಳು ಮಾಜಿ ಮುಖ್ಯಮಂತ್ರಿಗಳು ಇಂದು ಪ್ರಮಾಣ ವಚನ ಸ್ವೀಕರಿಸುವ ಮೂಲಕ ನೂತನ ಕೇಂದ್ರ ಸಚಿವ ಸಂಪುಟದ ಭಾಗವಾಗಿದ್ದಾರೆ.

ಮೋದಿ ಅವರು 2014ರಲ್ಲಿ ಮೊದಲ ಸಲ ಪ್ರಧಾನಿಯಾಗುವುದಕ್ಕೂ ಮುನ್ನ ಗುಜರಾತ್ ಮುಖ್ಯಮಂತ್ರಿಯಾಗಿ 15 ವರ್ಷ ಸರ್ಕಾರ ನಡೆಸಿದ್ದರು.

ಇತರ ಆರು ಮಾಜಿ ಮುಖ್ಯಮಂತ್ರಿಗಳೆಂದರೆ ಎಚ್ ಡಿ ಕುಮಾರಸ್ವಾಮಿ (ಕರ್ನಾಟಕ), ಶಿವರಾಜ್ ಸಿಂಗ್ ಚೌಹಾಣ್ (ಮಧ್ಯಪ್ರದೇಶ), ರಾಜನಾಥ್ ಸಿಂಗ್(ಉತ್ತರ ಪ್ರದೇಶ), ಮನೋಹರ್ ಲಾಲ್ ಖಟ್ಟರ್(ಹರಿಯಾಣ), ಸರ್ಬಾನಂದ ಸೋನೋವಾಲ್(ಅಸ್ಸಾಂ) ಮತ್ತು ಜೀತನ್ ರಾಮ್ ಮಾಂಝಿ(ಬಿಹಾರ) ಅವರು ಇಂದು ಕೇಂದ್ರ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪೈಕಿ ಐವರು ಮಾಜಿ ಮುಖ್ಯಮಂತ್ರಿಗಳು ಭಾರತೀಯ ಜನತಾ ಪಕ್ಷದವರಾಗಿದ್ದು, ಹೆಚ್ ಡಿ ಕುಮಾರಸ್ವಾಮಿ ಮತ್ತು ಮಾಂಝಿ ಬಿಜೆಪಿಯ ಮಿತ್ರಪಕ್ಷಗಳಾದ ಜೆಡಿಎಸ್ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾವನ್ನು ಪ್ರತಿನಿಧಿಸುತ್ತಾರೆ.

ಎರಡು ಪೂರ್ಣ ಅವಧಿಯ ನಂತರ ಕೇಂದ್ರದಲ್ಲಿ ಹೊಸ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭಕ್ಕೆ ವಿದೇಶಿ ಗಣ್ಯರೂ ಸೇರಿದಂತೆ, ಸಾವಿರಾರು ಜನರು ಸಾಕ್ಷಿಯಾದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಬಳಿಕ ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಗೆ ಮೋದಿ ಪಾತ್ರರಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...