ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ರಾಜಿ ಇಲ್ಲ, ಭಾರತದ ದಾಳಿ ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ: ಸಿದ್ದರಾಮಯ್ಯ

Date:

ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಪಹಲ್ಗಾಮ್‌ ಭಯೋತ್ಪಾದನೆ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತ ನಡೆಸಿರುವ ‘ಆಪರೇಷನ್‌ ಸಿಂಧೂರ’ ದಾಳಿಯನ್ನು ನಾವೆಲ್ಲ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣೆಯಲ್ಲಿ ‘ಸಿಂಧೂರ’ ತರ ಕುಂಕುಮ ಧರಿಸಿ, ಕಾವೇರಿ ನಿವಾಸದಲ್ಲಿ ಬುಧವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದರು.

“ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ದೇಶದ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ 26ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ” ಎಂದರು.

“ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಭಾರತ ಸೇಣೆ ಪರಾಕ್ರಮ ಮೆರೆದಿದೆ. ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯ ಅಮೃತಕಾಲದಲ್ಲಿ ದಾಳಿ ಮತ್ತು ದ್ವೇಷಕ್ಕಿದೆ ಮಾರುಕಟ್ಟೆ

“ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್‌ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ. ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ” ಎಂದು ತಿಳಿಸಿದರು.

“ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ. ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ” ಎಂದು ಹೇಳಿದರು.

“ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು” ಎಂದು ಭರವಸೆ ನೀಡಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...