ಕೇಂದ್ರದ ವಸತಿ ಯೋಜನೆಯಲ್ಲೂ ಅಲ್ಪಸಂಖ್ಯಾತರಿಗೆ 15% ಮೀಸಲಾತಿ ಇದೆ: ಸಚಿವ ಜಮೀರ್ ಅಹಮದ್

Date:

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ 15%ರಷ್ಟು ಮೀಸಲಾತಿ ಒದಗಿಸುವ ನಿರ್ಧಾರವು ಈಗ ಕೈಗೊಂಡ ತೀರ್ಮಾನವಲ್ಲ. 2019ರಲ್ಲಿ ಎಚ್‌.ಡಿ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದಾಗ ಸಂಪುಟ ಉಪ ಸಮಿತಿ ರಚಿಸಲಾಗಿತ್ತು. ಆ ಉಪ ಸಮಿತಿಯು 15% ಮೀಸಲಾತಿ ಶಿಫಾರಸ್ಸು ಮಾಡಿತ್ತು ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ 15%ರಷ್ಟು ಮೀಸಲಾತಿ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ, ಕೇಂದ್ರದ ಮಾದರಿಯನ್ನೇ ಅನುಸರಿಸಿ ಮೀಸಲಾತಿ ನೀಡಲು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ.

“2019ರಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು. ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ.10 ರಷ್ಟು ಮೀಸಲಾತಿ ಪ್ರಮಾಣವನ್ನು ಶೇ.15ಕ್ಕೆ ಹೆಚ್ಚಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿವೆ. ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು. 2021 ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಕೂಡ ಶೇ.15 ರಷ್ಟು ಮೀಸಲಾತಿ ಜಾರಿಗೊಳಿಸಬೇಕೆಂದು ತಿಳಿಸಿತ್ತು. ಇದೆಲ್ಲ ವಾಸ್ತವ ಅಂಶ ತಿಳಿಯದೆ ಪ್ರತಿಪಕ್ಷಗಳು ಅನಗತ್ಯ ಟೀಕೆ ಮಾಡುತ್ತಿವೆ. ಇದು ಅವರಿಗೆ ಶೋಭೆ ತರುವುದಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...