ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಸರ್ಕಾರಿ ಕಚೇರಿಗಳಲ್ಲಿ ಇಲ್ಲ: ಆರ್‌ ಅಶೋಕ್

Date:

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಿರುಕುಳ ತಾಳಲಾರದೆ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡರು. ಇದೇ ರೀತಿ ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಸರ್ಕಾರಿ ಕಚೇರಿಗಳಲ್ಲಿ ಇಲ್ಲ ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದರು.

ಚನ್ನಪಟ್ಟಣದಲ್ಲಿ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಹಣ ನೀಡಿದರೆ ಮಾತ್ರ ಇಲ್ಲಿ ಬದುಕಲು ಸಾಧ್ಯ. ಏನೇ ಕೇಳಿದರೂ ಎಸ್‌ಐಟಿ ರಚನೆ ಎಂದು ಹೇಳುತ್ತಾರೆ. ಯಾರು ಸತ್ತರೂ ಎಸ್‌ಐಟಿ ರಚನೆ ಮಾಡುತ್ತಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರ ಪಿಎ ಸೋಮು ಅವರಿಂದಾಗಿ ಅಧಿಕಾರಿ ಸತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಇದಕ್ಕಾಗಿ ಎಸ್‌ಐಟಿ ರಚನೆ ಮಾಡಲಿ. ಅಧಿಕಾರಿಗಳು ಯಾಕೆ ಸಾಯುತ್ತಿದ್ದಾರೆ, ಯಾರು ಎಷ್ಟು ಲಂಚ ಕೇಳುತ್ತಿದ್ದಾರೆ ಎಂದು ಜನರಿಗೆ ತಿಳಿಯಲಿ” ಎಂದು ಆಗ್ರಹಿಸಿದರು.

“ಸಿ.ಪಿ.ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಲು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗಿತ್ತು. ನಾನು ಯಾವುದೇ ಪಕ್ಷದಿಂದಲೂ ಸ್ಪರ್ಧಿಸುತ್ತೇನೆಂದು ಯೋಗೇಶ್ವರ್‌ ಹೇಳಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿ ಎಂದು ಹೇಳಿದಾಗ, ದಿಢೀರನೆ ಮನಸ್ಸು ಬದಲಿಸಿ ಬಿಜೆಪಿಯಿಂದಲೇ ಟಿಕೆಟ್‌ ಬೇಕು ಎಂದು ಪಟ್ಟು ಹಿಡಿದಿದ್ದರು. ಬಿಜೆಪಿಯಿಂದಲೇ ಸ್ಪರ್ಧಿಸುವ ಬಗ್ಗೆ ಚರ್ಚಿಸುವ ಮುನ್ನವೇ ಮ್ಯಾಚ್‌ ಫಿಕ್ಸಿಂಗ್‌ ಆಗಿತ್ತು”‌ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯಿಂದ ಸ್ಪರ್ಧಿಸಲು ತೀರ್ಮಾನಿಸಿದ್ದರೆ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಯಾಕೆ ನೀಡಬೇಕಿತ್ತು? ಇವೆಲ್ಲ ಪೂರ್ವ ನಿಯೋಜಿತ. ಕುಮಾರಸ್ವಾಮಿ ಮೋಸ ಮಾಡಿದ್ದಾರೆಂದು ಯೋಗೇಶ್ವರ್‌ ಆಪಾದನೆ ಮಾಡುತ್ತಿದ್ದಾರೆ. ಇವರೆಲ್ಲರೂ ಮೊದಲೇ ಮಾತಾಡಿಕೊಂಡು ಈಗ ಆರೋಪ ಮಾಡುತ್ತಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ಅತಿರೇಕದ ಮಾತುಗಳೂ, ಕಾಂಗ್ರೆಸ್ಸಿಗರ ಕರುಣಾಜನಕ ಸ್ಥಿತಿಯೂ 

“16 ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದ ಒಂದೇ ಒಂದು ಅಭಿವೃದ್ಧಿ ಕಾಮಗಾರಿಗೆ ಹಿಡಿ ಮಣ್ಣು ಹಾಕಿಲ್ಲ. ಗ್ಯಾರಂಟಿಗಳಿಂದಾಗಿ ಮಣ್ಣು ಹಾಕಲು ಕೂಡ ಹಣವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಇಲ್ಲಿಗೆ ಮೊದಲು ನೀರಾವರಿ ಯೋಜನೆ ತಂದರು. ಬಳಿಕ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ ಹಾಗೂ ಬಸವರಾಜ ಬೊಮ್ಮಾಯಿ ಅನುದಾನ ನೀಡಿದರು. ಚನ್ನಪಟ್ಟಣಕ್ಕೆ ಯೋಗೇಶ್ವರ್‌ ಅವರ ಕೊಡುಗೆ ಏನೂ ಇಲ್ಲ” ಕಿಡಿಕಾರಿದರು.

“ಮೊದಲಿಗೆ ನಾನೇ ಅಭ್ಯರ್ಥಿ ಎಂದು ಡಿ.ಕೆ.ಶಿವಕುಮಾರ್‌ ಹೇಳಿಕೊಂಡರು. ಆದರೆ ಅವರು ಅಭ್ಯರ್ಥಿಯಾಗಲಿಲ್ಲ. ಜಿಲ್ಲಾ ಉಸ್ತುವಾರಿಯ ಹೊಣೆಯನ್ನೂ ವಹಿಸಿಕೊಳ್ಳಲಿಲ್ಲ. ಡಿ.ಕೆ.ಶಿವಕುಮಾರ್‌ ರೈತರ ಬಗ್ಗೆ ಮಾತನಾಡುವುದಾದರೆ ಮೊದಲು ಸಾಲ ಮನ್ನಾ ಮಾಡಲಿ. ರೈತರ ವಿದ್ಯಾಭ್ಯಾಸಕ್ಕೆಂದು ನೀಡಿದ ವಿದ್ಯಾನಿಧಿ ಯೋಜನೆಯನ್ನು ನೀಡಲಿ. ಅದನ್ನು ಬಿಟ್ಟು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಹಣ ಲೂಟಿ ಮಾಡಿದ್ದಾರೆ” ಎಂದು ದೂರಿದರು.

“ಕಾಂಗ್ರೆಸ್‌ ಸರ್ಕಾರ 10 ಕೆಜಿ ಅಕ್ಕಿ ಎಂದು ಘೋಷಿಸಿ ಅದನ್ನು ನೀಡಿಲ್ಲ. 5 ಕೆಜಿ ಅಕ್ಕಿಯನ್ನು ಪ್ರಧಾನಿ ನರೇಂದ್ರ ಮೋದಿ ನೀಡುತ್ತಿದ್ದಾರೆ. ರಾಜ್ಯದ ಎಲ್ಲ ಜಮೀನುಗಳನ್ನು ವಕ್ಫ್‌ ಮಂಡಳಿ ಕಬಳಿಸುತ್ತಿದೆ. ಶಾಲೆ, ದೇವಸ್ಥಾನ ಸೇರಿದಂತೆ ಎಲ್ಲ ಜಾಗಗಳನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ಹಿಂದೂಗಳು ಮಾತ್ರವಲ್ಲದೆ, ಮುಸ್ಲಿಮರು ಕೂಡ ಇದರ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಈ ಕುರಿತು ವಕ್ಫ್‌ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಗೆ ತಿಳಿಸಿದ್ದು, ಇದೇ ತಿಂಗಳ 7 ರಂದು ಸಮಿತಿ ಭೇಟಿ ನೀಡಲಿದೆ” ಎಂದರು.

“ಲೋಕಾಯುಕ್ತದಿಂದ ಸಿದ್ದರಾಮಯ್ಯನವರ ಪತ್ನಿಗೆ ನೋಟಿಸ್‌ ನೀಡಲಾಗಿದೆ. ಮೊದಲಿಗೆ ಆರೋಪಿ 1ಗೆ ನೋಟಿಸ್‌ ನೀಡಬೇಕಿತ್ತು. ಇವೆಲ್ಲವೂ ಒಂದು ನಾಟಕ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ದೂರುದಾರರು ಅಪೀಲು ಮಾಡಿದ್ದಾರೆ. ಆರೋಪಿ 2 ಗೆ ಮೊದಲಿಗೆ ನೋಟಿಸ್‌ ನೀಡಿದ್ದು ಏಕೆಂದು ನಮಗೂ ಅರ್ಥವಾಗುತ್ತಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...