ಸಚಿವರ, ಶಾಸಕರ ಮೌಲ್ಯಮಾಪನ ಇಲ್ಲ, ಸೋಲಿನ ಆತ್ಮಾವಲೋಕನ ನಡೆಯುತ್ತೆ: ಎಂ ಬಿ ಪಾಟೀಲ್‌

Date:

ಲೋಕಸಭಾ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಶನಿವಾರ ಹೇಳಿದರು.

ಬೆಂಗಳೂರಿನ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, “ಕಳೆದ ಒಂದು ವರ್ಷದಲ್ಲಿ ರಾಜ್ಯ ಸರಕಾರವು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ನಾವು ಕಂಡುಕೊಳ್ಳಲಿದ್ದೇವೆ. ಗೆಲ್ಲಬಹುದಾಗಿದ್ದ ಕೆಲವು ಕ್ಷೇತ್ರಗಳು ಕೈಜಾರಿರುವುದು ನಮಗೆ ಗೊತ್ತಾಗಿದೆ” ಎಂದರು.

“ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ. ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರ ಏನಿರಬೇಕು ಎಂದಷ್ಟೇ ಚಿಂತಿಸಲಾಗುವುದು” ಎಂದು ಅವರು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿದ್ದಾರೆ. ಕಳೆದ ಎರಡು ಬಾರಿಗಿಂತ ಈ ಸಲ ಬಿಜೆಪಿ ಬಲ ಕುಂದಿದೆ. ಹೀಗಾಗಿ ಈ ಸಲ ಅವರ ಸರಕಾರ ಎಷ್ಟು ದಿನ ಇರುತ್ತದೋ ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶಕುಮಾರ್ ತರಹದ ವ್ಯಕ್ತಿಯನ್ನು ಇಟ್ಟುಕೊಂಡು ಸರಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ” ಎಂದು ಅವರು ಭವಿಷ್ಯ ನುಡಿದರು.

“ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಾಸ್ಥಾನಗಳಲ್ಲಿ ಬಿಜೆಪಿ ಹೆಚ್ಚಿನ ಕಡೆ ಸೋಲಲಿದೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ಅದೇ ರೀತಿ ಆಗಿದೆ” ಎಂದು ಅವರು ನೆನಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...