ತೆರಿಗೆ ಕಟ್ಟುವವರಿಗೆ ಗೃಹಲಕ್ಷ್ಮಿ ಹಣವಿಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

ಎ‍ಪಿಎಲ್‌ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿರುವವರ ಪೈಕಿ ಯಾರು ಆದಾಯ ತೆರಿಗೆ ಕಟ್ಟುವುದಿಲ್ಲವೋ, ಅಂಥವರು ಗೃಹಲಕ್ಷ್ಮಿ ಯೋಜನೆಗೆ ಅರ್ಹರು. ಅವರಿಗೆ ಯೋಜನೆಯ ಹಣ ಮುಂದೆಯೂ ಬರುತ್ತದೆ. ತೆರಿಗೆ ಕಟ್ಟುವವರನ್ನು ಯೋಜನೆಯಿಂದ ಹೊರಗಿಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ 80 ಸಾವಿರ ಬಿಪಿಎಲ್ ಪಡಿತರ ಚೀಟಿಗಳನ್ನು ಎಪಿಎಲ್ ಚೀಟಿಗಳಾಗಿ ಬದಲಿಸಲಾಗಿದೆ. ಈ ಬದಲಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಎಪಿಎಲ್, ಬಿಪಿಎಲ್ ಪಡಿತರ ಚೀಟಿ ಹೊಂದಿದ ಇಬ್ಬರಿಗೂ ಗೃಹಲಕ್ಷ್ಮಿ ಯೋಜನೆಯಡಿ ಹಣ ದೊರೆಯುತ್ತದೆ” ಎಂದು ಹೇಳಿದ್ದಾರೆ.

ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವನ್ನಪ್ಪಿದ ವಿಷಯದ ಬಗ್ಗೆ ಮಾತನಾಡಿದ ಹೆಬ್ಬಾಳ್ಕರ್, “ಬಿಮ್ಸ್ ಆಸ್ಪತ್ರೆಯ ಎಲ್ಲ ವ್ಯವಸ್ಥೆಗಳಯೂ ಬದಲಾವಣೆ ತರಬೇಕಿದೆ. ಈ ಬಗ್ಗೆ ಮೊದಲಿನಿಂದಲೂ ಹೇಳುತ್ತಿದ್ದೇನೆ. ಮತ್ತೊಮ್ಮೆ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸುತ್ತೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...