ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ ಪ್ರಶ್ನೆಯೇ ಇಲ್ಲ: ಸಚಿವ ದಿನೇಶ್ ಗುಂಡೂರಾವ್

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೊಳ್ತಮಜಲು ಎಂಬಲ್ಲಿ ಅಮಾಯಕ ಯುವಕ ಅಬ್ದುಲ್ ರಹಿಮಾನ್ ಅವರ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ ಪ್ರಶ್ನೆಯೇ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಪ್ರಕರಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, “ಯಾವುದೇ ಅಹಿತಕರ ಘಟನೆ ನಡೆಯದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ರೀತಿಯ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಅಬ್ದುಲ್ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ” ಎಂದರು.‌

ಬಿಜೆಪಿ ಶವಗಳ ಮೇಲೆ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದ ಸಚಿವರು, “ಪ್ರಚೋದನಾಕಾರಿ ಭಾಷಣಗಳನ್ನ ಮಾಡಿ ಸಮಾಜದಲ್ಲಿ ಕೋಮು ದ್ವೇಷವನ್ನ ಮೂಡಿಸಲಾಗುತ್ತಿದೆ. ಹತ್ಯೆ ಮಾಡುವ ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ ಪ್ರಶ್ನೆಯೇ ಇಲ್ಲ. ಮಂಗಳೂರಿನಲ್ಲಿ ನಡೆದ ಹತ್ಯೆಗಳ ವಿಚಾರದಲ್ಲಿ ನಮ್ಮ ಸರ್ಕಾರ ನಿಸ್ಪಕ್ಷಪಾತವಾದ ತನಿಖೆ ನಡೆಸಿ ಕಾನೂನು ರೀತಿ ಕ್ರಮ ಕೈಗೊಂಡಿದೆ. ಯಾವುದೇ ಭೇದ ಭಾವ ಮಾಡಿಲ್ಲ. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳಿದ್ದರೂ, ಅವರ ಹೆಡೆಮುರಿ ಕಟ್ಟಿ, ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮಾಯಕ ಅಶ್ರಫ್ ಹತ್ಯೆಮಾಡಿದವರನ್ನು ಹಿಡಿದು ಬಂಧಿಸಲಾಗಿದೆ. ರೌಡಿಶಿಟರ್ ಸುಹಾಸ್ ಶೆಟ್ಟಿ ಹತ್ಯೆ ಮಾಡಿದವರನ್ನೂ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇದೀಗ ಅಬ್ದುಲ್ ಅವರ ಪ್ರಕರಣದಲ್ಲೂ ಆರೋಪಿಗಳನ್ನ ಹಿಡಿದು ತರುವಲ್ಲಿ ಪೊಲೀಸರು ಸಕ್ಷಮರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕರಾವಳಿ ಭಾಗದಲ್ಲಿ ಈ ರೀತಿಯ ಪ್ರತಿಕಾರದ ಹತ್ಯೆಗಳನ್ನ ತಡೆಗಟ್ಟಲು ಕೋಮು ನಿಗ್ರಹ ದಳ ರಚಿಸಲಾಗುತ್ತಿದೆ. ಶೀಘ್ರದಲ್ಲಿಯೇ ಆ್ಯಂಟಿ ಕಮ್ಯುನಲ್ ಫೋರ್ಸ್ ತನ್ನ ಕಾರ್ಯ ಪ್ರಾರಂಭಿಸಲಿದೆ. ಕೋಮುವಾದದಿಂದ ಸಮಾಜಗಳಲ್ಲಿ ಮೂಡುತ್ತಿರುವ ಒಡುಕನ್ನು ಹೋಗಲಾಡಿಸಿ ಸೌಹಾರ್ದಯುತವಾದ ಸಹಬಾಳ್ವೆಯ ಶಾಂತಿಯುತ ಸಮಾಜವನ್ನ ನಿರ್ಮಾಣಕ್ಕೆ ಎಲ್ಲರು ಮುಂದಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...