ಎನ್‌ಇಪಿ ರದ್ದು ನಿರ್ಧಾರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Date:

“ಎಸ್‌ಎಸ್‌ಎಲ್‌ಸಿ, ಪಿಯುಸಿಗೆ ಇನ್ನು ಮುಂದೆ ಮೂರು ಪಬ್ಲಿಕ್ ಪರೀಕ್ಷೆಗಳನ್ನು ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತದೆ. ಈ ವ್ಯವಸ್ಥೆ ಎನ್‌ಇಪಿಯಲ್ಲಿಲ್ಲ. ಹಾಗಾಗಿ, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ರದ್ದು ಮಾಡಿರುವ ನಿರ್ಧಾರ ವಾಪಸ್ ತೆಗೆದುಕೊಳ್ಳುವುದಿಲ್ಲ” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ಬಿಜೆಪಿ ಶಾಸಕರೊಬ್ಬರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ನಾವು ಮಾತು ಕೊಟ್ಟಂತೆ ಎನ್‌ಇಪಿ ರದ್ದು ಮಾಡಿದ್ದೇವೆ. ಹಿಂದಿನ ಪಠ್ಯಕ್ರಮ ಜಾರಿ ಮಾಡಿದ್ದೇವೆ. ಬಿಜೆಪಿ ಸರ್ಕಾರ ಮಾಡಿದ ಲೋಪ ಸರಿ ಮಾಡಿದ್ದೇವೆ” ಎಂದರು.

“ಎಸ್‌ಎಸ್‌ಎಲ್‌ಸಿ, ಪಿಯುಸಿಗೆ ನಾವು ಅನುಷ್ಠಾನ ಮಾಡಿರುವ ಮೂರು ಪಬ್ಲಿಕ್ ಪರೀಕ್ಷೆಗಳಿಂದ ಮಕ್ಕಳಿಗೆ ಅನುಕೂಲವಾಗುತ್ತದೆ. ಈ ವ್ಯವಸ್ಥೆ ಎನ್‌ಇಪಿಯಲ್ಲಿ ಇಲ್ಲ. ಕೆಪಿಎಸ್ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ. ರಾಜ್ಯ ಶಿಕ್ಷಣ ನೀತಿಯ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುತ್ತೇವೆ. ಇದಕ್ಕಾಗಿ ಸಮಿತಿ ನೇಮಕ ಮಾಡಲಾಗಿದೆ. ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನ ಸೃಷ್ಟಿ ಮಾಡುವ ಪಾಲಿಸಿಯನ್ನಾಗಿ ಎಸ್‌ಇಪಿ ಜಾರಿ ಮಾಡುತ್ತೇವಿ. ಎನ್‌ಇಪಿ ರದ್ದು ನಿರ್ಧಾರ ವಾಪಸ್ ಇಲ್ಲವೇ ಇಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಎನ್‌ಇಪಿ ರದ್ದು ನಿರ್ಧಾರ ವಾಪಸ್ ಇಲ್ಲವೇ ಇಲ್ಲ” ಎಂಬ ಮಧು ಬಂಗಾರಪ್ಪ ಸ್ಪಷ್ಟ ನಿಲುವಿಗೆ ಬಿಜೆಪಿ ಶಾಸಕರಿಂದ ವಿರೋಧ ವ್ಯಕ್ತವಾಯಿತು.

ಈ ಬಗ್ಗೆ ಪ್ರತಿಕ್ರಿಯಿಸಿದ ಸದಸ್ಯ ವೈ.ಎ ನಾರಾಯಣಸ್ವಾಮಿ, “ಸಿಬಿಎಸ್‌ಇ ಬೋರ್ಡ್‌ಗೆ ಎಸ್‌ಇಪಿ ಅನ್ವಯ ಆಗುತ್ತಾ? ಬೇರೆ ಬೇರೆ ರಾಜ್ಯಗಳಲ್ಲಿ ಎನ್‌ಇಪಿ ಇದ್ದು, ನಮ್ಮ ರಾಜ್ಯದಲ್ಲಿ ಎಸ್‌ಇಪಿ ಇದ್ದರೆ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಮ್ಮ ಮಕ್ಕಳಿಗೆ ಅನ್ಯಾಯ ಆಗುತ್ತದೆ. ರಾಜ್ಯ ಸರ್ಕಾರವು ದುರುದ್ದೇಶದಿಂದ ಎನ್‌ಇಪಿ ರದ್ದು ಮಾಡುವುದು ಸರಿಯಲ್ಲ. ಎನ್‌ಇಪಿಯ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ರೂಪಿಸಲಾಗುತ್ತದೆ. ಸಿಬಿಎಸ್‌ಇ ಖಾಸಗಿ ಶಾಲೆಗಳಲ್ಲಿ ಎಸ್‌ಇಪಿ ಅನುಷ್ಠಾನ ಮಾಡುವ ತಾಕತ್ ಕಾಂಗ್ರೆಸ್ ಸರ್ಕಾರಕ್ಕೆ ಇದೆಯಾ?” ಎಂದು ಸವಾಲು ಹಾಕಿದರು.

ಈ ವೇಳೆ ಹಲವು ಸದಸ್ಯರು ಎನ್‌ಇಪಿ ಚರ್ಚೆಯಲ್ಲಿ ಮಾತನಾಡುವ ಉತ್ಸಾಹ ತೋರಿದ್ದರಿಂದ್ದ ಚರ್ಚೆಯನ್ನು ಮಂಗಳವಾರ (ಡಿ.12ಕ್ಕೆ) ಮುಂದೂಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...