ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ: ಸಿದ್ದರಾಮಯ್ಯ ಕಿವಿ ಮಾತು

Date:

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.

“ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ನೀವು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತೀರಿ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು ಜನರ ಕಷ್ಟ ಸುಖಗಳಿಗೆ ಸ್ಪಂದಿಸಿ” ಎಂದು ಸೂಚಿಸಿದರು.

“ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ. ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ. ಜನರ ಅಭ್ಯದಯ ನಮ್ಮ ಗುರಿ ಆಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? 6,195 ಶಾಲಾ ಶೌಚಾಲಯ ನಿರ್ಮಾಣ ಗುರಿ; 2,367 ಶೌಚಾಲಯ ಪೂರ್ಣ: ಸಚಿವ ಪ್ರಿಯಾಂಕ್‌ ಖರ್ಗೆ

“ಬಲಾಡ್ಯರು ದುರ್ಬಲರ ಮೇಲೆ ದೌರ್ಜನ್ಯ ನಡೆಸದಂತೆ ಎಚ್ಚರಿಕೆ ವಹಿಸಿ. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಿ. ಸಣ್ಣ ಪುಟ್ಟ ರೆವಿನ್ಯೂ ಸಮಸ್ಯೆಗಳಿಗೆ ಜನರು ಸಿಎಂ ಬಳಿಗೆ ಬರುತ್ತಾರೆ ಎಂದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೇ ಪರಿಗಣಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಶಿವಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕಂದಾಯ ಸಚಿವ ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕಂದಾಯ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆ ಆಯುಕ್ತರಾದ ಪಿ.ಸುನಿಲ್ ಕುಮಾರ್, ಸಂಘದ ಉಪಾಧ್ಯಕ್ಷರಾದ ಚನ್ನಬಸಪ್ಪ ಅವರು ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...