ದಂಗೆ ಎದ್ದು ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಬೇಕಿದೆ: ಆರ್‌.ಅಶೋಕ್‌ ವಾಗ್ದಾಳಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಇದೆ. ಬಿಜೆಪಿ ಸರ್ಕಾರ ಪೆಟ್ರೋಲ್‌ ದರ ಏರಿಸಿದ್ದಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನೆ ಮಾಡಿದ್ದರು. ಈಗ ಮೂರು ರೂಪಾಯಿ ಹೆಚ್ಚು ಮಾಡಿದ ಕಾಂಗ್ರೆಸ್‌ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಈಗ ಸಿದ್ದರಾಮಯ್ಯ ಎಂದರೆ ನುಂಗಣ್ಣ” ಎಂದು ವ್ಯಂಗ್ಯವಾಡಿದರು.

“ತೈಲ ಬೆಲೆ ಏರಿಯಾದರೆ ಸಿಮೆಂಟ್‌, ತರಕಾರಿ ಎಲ್ಲ ಬೆಲೆಯೂ ಏರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಯಾವ ಬೆಲೆಗಳು ಹೆಚ್ಚಲಿದೆ ಎಂದು ತಿಳಿಸಲಿ. ಗ್ಯಾರಂಟಿ ಯೋಜನೆಗಳೆಂದು ಹೇಳಿ ಎಲ್ಲರಿಗೂ ಒಂದು ಲಕ್ಷ, ಎರಡು ಸಾವಿರ ಕೋಡುತ್ತೇವೆ ಎಂದರು. ರಾಹುಲ್‌ ಗಾಂಧಿ ಇನ್ನೂ ಮುಂದೆ ಹೋಗಿ ಟಕಾಟಕ್‌ ಎಂದು ಹಾಕುತ್ತೇನೆ ಎಂದರು. ಆದರೆ ಟಕಾಟಕ್‌ ಎಂದು ಜೇಬಿಗೆ ಕತ್ತರಿ ಹಾಕಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಸರ್ಕಾರ ಬಸ್‌ ಟಿಕೆಟ್‌ ದರ ಏರಿಕೆ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದು, ಟಿಕೆಟ್‌ ದರ ಶೇ.12 ರಷ್ಟು ಹೆಚ್ಚಿಸಲು ಚರ್ಚೆಯಾಗಿದೆ. ಕಾಫಿ ಟೀ ದರ ಕೂಡ ಹೆಚ್ಚಲಿದೆ. ಕಾಂಗ್ರೆಸ್‌ ಸತ್ತರೆ ತಿಥಿಗೆ ಮಾಡುವ ಉದ್ದಿನ ವಡೆಯ ಬೆಲೆ ಕೂಡ ಹೆಚ್ಚಾಗಲಿದೆ” ಎಂದು ಹೇಳಿದರು.

“ಗ್ಯಾರಂಟಿಗೆ 55,000 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದಿದ್ದರು. ಬಳಿಕ ನಮ್ಮದೇ ಹಣವನ್ನು ದರೋಡೆ ಮಾಡಿ ನಮಗೆ ಮರಳಿ ನೀಡುತ್ತಿದ್ದಾರೆ. ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯ ನಡೆದಿಲ್ಲ, ಶಿಕ್ಷಕರಿಗೆ ಸಂಬಳ ನೀಡಿಲ್ಲ, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಿಲ್ಲ. ಬೆಂಗಳೂರನ್ನು ಬ್ರ್ಯಾಂಡ್‌ ಮಾಡುತ್ತೇನೆಂದು ಹೇಳಿ ಭಾಗ ಮಾಡಲು ಮುಂದಾಗಿದ್ದಾರೆ. ಬೆಂಗಳೂರನ್ನು ಭಾಗ ಮಾಡಿದರೆ ಕಾಂಗ್ರೆಸ್‌ ಕಚೇರಿಯನ್ನು ಜನರು ಭಾಗ ಮಾಡುತ್ತಾರೆ. ಈಗ ಚುನಾವಣೆ ನಡೆದರೆ ಕಾಂಗ್ರೆಸ್‌ ಠೇವಣಿ ಕಳೆದುಕೊಳ್ಳಲಿದೆ. ಲೋಕಸಣೆ ಚುನಾವಣೆಯಲ್ಲಿ 143 ಕ್ಷೇತ್ರ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲೂ ಹೆಚ್ಚು ಮತಗಳು ಬಿಜೆಪಿಗೆ ಬಂದಿದೆ” ಎಂದರು.

ದಲಿತರ ಹಣ ನುಂಗಿದ ಮುಖ್ಯಮಂತ್ರಿ

“ದಲಿತರ 187 ಕೋಟಿ ರೂಪಾಯಿ ನುಂಗಿ ಸಚಿವ ಬಿ.ನಾಗೇಂದ್ರ ಔಟ್‌ ಆಗಿದ್ದಾರೆ. ಇನ್ನು ಎರಡನೇ ವಿಕೆಟ್‌ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿದೆ. ಸಚಿವ ನಾಗೇಂದ್ರ 20 ಪರ್ಸೆಂಟ್‌ ಜೇನು ಕಿತ್ತಿದ್ದು ಮಾತ್ರ, ಆದರೆ 80 ಪರ್ಸೆಂಟ್‌ ಜೇನನ್ನು ಸಿಎಂ ಸಿದ್ದರಾಮಯ್ಯ ಹೊಡೆದಿದ್ದಾರೆ. ಈ ಹಣ ತೆಲಂಗಾಣಕ್ಕೆ ಹೋಗಿ, ಬಳಿಕ ಬಾರ್‌ಗಳಿಗೆ ಹೋಗಿದೆ. ದಲಿತರ ಉದ್ಯಮಗಳಿಗೆ, ಅಂಗಡಿಗಳಿಗೆ, ಅವರ ಮಕ್ಕಳ ಸ್ಕಾಲರ್‌ಶಿಪ್‌ಗೆ ಈ ಹಣ ಕೊಡಬೇಕಿತ್ತು. ಚೆಕ್‌ನಲ್ಲೇ ಹಗಲು ದರೋಡೆ ಮಾಡಿದ್ದಾರೆ. ಇದರಿಂದಾಗಿ ನಿಷ್ಠಾವಂತ ಅಧಿಕಾರಿ ಸತ್ತಿದ್ದಾರೆ” ಎಂದು ಆರೋಪಿಸಿದರು.

“ಜನರು ಕಲುಷಿತ ನೀರು ಕುಡಿದು ಸಾಯುತ್ತಿದ್ದರೂ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ. ಸರ್ಕಾರಿ ಆಸ್ಪತ್ರೆಗೆ ಔಷಧಿ ಖರೀದಿಗೆ, ಶಾಲೆಗೆ ಪುಸ್ತಕ ಕೊಡಲು ಹಣವಿಲ್ಲ. ಇದಕ್ಕಾಗಿಯೇ ತೈಲ ಬೆಲೆ ಏರಿಕೆ ಮಾಡಿ ಹಣ ಲೂಟಿ ಮಾಡಲಾಗುತ್ತಿದೆ” ಎಂದು ದೂರಿದರು.

ಬಂಡವಾಳ ಬಯಲು ಮಾಡುತ್ತೇವೆ

“ಕಾಂಗ್ರೆಸ್‌ ಸರ್ಕಾರದ ದುರಾಡಳಿತದ ವಿರುದ್ಧ ಹಾಗೂ ಸರ್ಕಾರದ ಬಂಡವಾಳ ಬಯಲು ಮಾಡಲು ಬಿಜೆಪಿ ಇನ್ನಷ್ಟು ಹೋರಾಟ ಮಾಡಲಿದೆ. ಸಿಎಂ ಸಿದ್ದರಾಮಯ್ಯ ರಾಜ್ಯದ ಆರ್ಥಿಕತೆಯನ್ನು ದಿವಾಳಿಯಾಗಿಸಿದ್ದಾರೆ. ಸಾಲ ಪಡೆಯಲು ಬಿಬಿಎಂಪಿ ಕಚೇರಿಗಳನ್ನು ಅಡಮಾನ ಇಡಲು ಮುಂದಾಗಿದ್ದಾರೆ. ಹೀಗೆಯೇ ಬಿಟ್ಟರೆ ವಿಧಾನಸೌಧವನ್ನೂ ಅಡ ಇಡುತ್ತಾರೆ” ಎಂದು ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...