ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ‘ರೋಡ್​ ಶೋ’ ಇರಲ್ಲ : ಶೋಭಾ ಕರಂದ್ಲಾಜೆ ಸ್ಪಷ್ಟನೆ

Date:

  • ಪ್ರಧಾನಿ ಭೇಟಿಯ ವೇಳೆ ಬಿಜೆಪಿಯಿಂದ ರೋಡ್‌ ಶೋ ಆಯೋಜನೆಗೆ ಸಿದ್ಧತೆ ಎಂದು ಸುದ್ದಿ
  • ‘ವಿಮಾನ ನಿಲ್ದಾಣದಲ್ಲಿ ಸ್ವಾಗತವಷ್ಟೇ ಇರಲಿದೆ’ ಎಂದ ಕೇಂದ್ರ ಸಚಿವೆ

ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಬರುತ್ತಿದ್ದಾರೆ. ಆದರೆ ಯಾವುದೇ ರೀತಿಯ ರೋಡ್​ ಶೋ ಆಯೋಜಿಸಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವುದೇ ರೀತಿ ರೋಡ್ ಶೋ ಆಯೋಜಿಸಿಲ್ಲ. ಗ್ರೀಸ್ ಪ್ರವಾಸವನ್ನು ಮುಗಿಸಿ ನಾಳೆ ಬೆಳಗ್ಗೆ ನೇರವಾಗಿ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸ್ವಾಗತವಷ್ಟೇ ಇರಲಿದೆ ಎಂದು ತಿಳಿಸಿದರು.

‘ಇಸ್ರೋಗೆ ಭೇಟಿ ನೀಡಿ, ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಆ ಬಳಿಕ ಇಸ್ರೋ ಹಮ್ಮಿಕೊಂಡಿರುವ ಆದಿತ್ಯ ಯೋಜನೆಯ ಬಗ್ಗೆಯೂ ಮಾತುಕತೆ ನಡೆಸಲಿದ್ದಾರೆ. ಇದನ್ನು ಹೊರತುಪಡಿಸಿ ಯಾವುದೇ ರೋಡ್ ಶೋ ಆಯೋಜಿಸಿಲ್ಲ. ಬೆಂಗಳೂರಿನ ಕಾರ್ಯಕರ್ತರು ಪ್ರಧಾನಿಗೆ ಸ್ವಾಗತ ಕೋರಲಿದ್ದಾರೆ’ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಿ ಬೆಂಗಳೂರು ಭೇಟಿಯ ವೇಳೆ ಬಿಜೆಪಿ ವತಿಯಿಂದ ರೋಡ್‌ ಶೋ ಆಯೋಜನೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಹರಿದಾಡಿದ ಬೆನ್ನಲ್ಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...