ಬಿಜೆಪಿಯ ‘ಏಕ್ ಹೈ ತೊ ಸೇಫ್‌ ಹೈ’ ಘೋಷಣೆಯನ್ನು ರಾಹುಲ್ ಗಾಂಧಿ ವಿವರಿಸಿದ್ದು ಹೀಗೆ

Date:

ಮಹಾರಾಷ್ಟ್ರದಲ್ಲಿ ಇನ್ನೆರಡು ದಿನಗಳಲ್ಲಿ (ನವೆಂಬರ್ 20) ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲಾ ಪಕ್ಷಗಳು ಚುನಾವಣಾ ತಯಾರಿಯನ್ನು ಮಾಡಿಕೊಂಡಿದೆ. ಈ ನಡುವೆ ಮಹಾರಾಷ್ಟ್ರ ಬಿಜೆಪಿಯ ‘ಏಕ್ ಹೈ ತೊ ಸೇಫ್‌ ಹೈ’ (ಜೊತೆಯಾಗಿದ್ದರೆ ಸುರಕ್ಷಿತವಾಗಿರುತ್ತೇವೆ) ಎಂಬ ಘೋಷಣೆಯನ್ನು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ವಿವರಿಸಿದ್ದಾರೆ.

ಮುಂಬೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮೊದಲು ಲಾಕರ್ ಬಾಕ್ಸ್‌ನಿಂದ ಎರಡು ಚಿತ್ರಗಳನ್ನು ಹೊರತೆಗೆದು ಪ್ರದರ್ಶಿಸಿದ್ದಾರೆ. ಒಂದು ಚಿತ್ರದಲ್ಲಿ ಮೋದಿ ಮತ್ತು ಅದಾನಿ ಇದ್ದರೆ, ಇನ್ನೊಂದು ಚಿತ್ರ ಧಾರಾವಿಯದ್ದಾಗಿದೆ. ಈ ಚಿತ್ರವನ್ನು ತೋರಿಸಿ ಏಕ್ ಹೈ ತೊ ಸೇಫ್‌ ಹೈ ಘೋಷಣೆಯನ್ನು ರಾಹುಲ್ ವಿವರಿಸಿದ್ದಾರೆ.

‘ಏಕ್ ಹೈ ತೊ ಸೇಫ್‌ ಹೈ’ ಎಂಬ ಘೋಷಣೆಯಲ್ಲಿ ‘ಏಕ್’ (ಒಂದು) ಅಂದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಆಪ್ತ ವಲಯ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭಾರತದಲ್ಲಿ ತೆವಳುತ್ತಿರುವ ಮೂಲಸೌಕರ್ಯ ಯೋಜನೆಗಳಿಗೆ ಬಾಂದ್ರಾ ಕಾಲ್ತುಳಿತ ತಾಜಾ ನಿದರ್ಶನ: ರಾಹುಲ್ ಗಾಂಧಿ

“ಅವರ ನಾಯಕತ್ವದಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ಮಾತ್ರ ಸುರಕ್ಷಿತರಾಗಿದ್ದಾರೆ. ಆದರೆ ಧಾರಾವಿ ಜನರು ನಿರ್ಲಕ್ಷಿಸಲ್ಪಟ್ಟಿದ್ದಾರೆ” ಎಂದು ಆರೋಪಿಸಿದ್ದಾರೆ. ಹಾಗೆಯೇ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಹಲವು ಪ್ರತಿಜ್ಞೆಗಳನ್ನು ಕೂಡಾ ಮಾಡಿದ್ದಾರೆ.

“ನಾವು ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದುಹಾಕುತ್ತೇವೆ” ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಜಾತಿ ಗಣತಿ ಮುಖ್ಯವಾದುದ್ದು. ಅದು ನಮ್ಮ ಮುಂದಿರುವ ಅತೀ ಪ್ರಮುಖ ಕಾರ್ಯ ಎಂದರು.

ಮುಂಬರುವ ಮಹಾರಾಷ್ಟ್ರ ಚುನಾವಣೆಯನ್ನು ಶ್ರೀಮಂತರು ಮತ್ತು ಹಿಂದುಳಿದವರ ನಡುವಿನ ‘ಸೈದ್ಧಾಂತಿಕ ಕದನ’ ಎಂದು ಬಣ್ಣಿಸಿದ್ದಾರೆ.

ಇದನ್ನು ಓದಿದ್ದೀರಾ? ಆಪ್‌ ತೊರೆದು ಬಿಜೆಪಿ ಸೇರಿದ ಕೈಲಾಶ್​ ಗಹ್ಲೋಟ್

ಇನ್ನು ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, “ಅದಾನಿಗೆ ಏನು ಬೇಕೋ ಅದನ್ನು ಅವರು ಪಡೆಯುತ್ತಾರೆ. ಕಾರ್ಪೋರೇಟ್‌ ವಲಯದ ಬಗ್ಗೆ ಹೆಚ್ಚು ಕಾಳಜಿ ಬಿಜೆಪಿ ನಾಯಕರಿಗಿದೆ” ಎಂದು ದೂರಿದರು.

“ಫಾಕ್ಸ್‌ಕಾನ್ ಮತ್ತು ಏರ್‌ಬಸ್ ಸೇರಿದಂತೆ 7 ಲಕ್ಷ ಕೋಟಿ ರೂ ಯೋಜನೆಗಳನ್ನು ಮಹಾರಾಷ್ಟ್ರದಿಂದ ಗುಜರಾತ್‌ಗೆ ವರ್ಗಾಯಿಸಲಾಗಿದೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಮಹಾ ವಿಕಾಸ್ ಅಘಾಡಿ ಸರ್ಕಾರ ರಚನೆಯಾದರೆ ಜನರ ಹಿತಾಸಕ್ತಿಯನ್ನು ರಕ್ಷಿಸುತ್ತದೆ” ಎಂದು ಭರವಸೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...