‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

Date:

  • ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ
  • ನೀರು ಬಿಡುವುದಕ್ಕಿಂತ ಮೊದಲೇ ಇವರು ಯಾಕೆ ಸಭೆ ಕರೆಯಲಿಲ್ಲ?

ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ ರಾಜ್ಯ ಸರ್ಕಾರದ ಪರಿಸ್ಥಿತಿ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಾಗ ಇವರನ್ನು ಕಳ್ಳರು ಅಂದಿದ್ದೆ, ಈಗ ದಡ್ಡರು ಎನ್ನಬೇಕಿದೆ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಟೀಕಿಸಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, “ಡಿಕೆ ಶಿವಕುಮಾರ್‌ ಕುತಂತ್ರದಿಂದ ರಾಜ್ಯದ ಜನ ಸಮಸ್ಯೆ ಅನುಭವಿಸುವಂತಾಗಿದೆ. ನೀರು ಬಿಟ್ಟ ಮೇಲೆ ಸಭೆ ಮಾಡಿದರೆ ಏನು ಪ್ರಯೋಜನ” ಎಂದು ವಾಗ್ದಾಳಿ ನಡೆಸಿದರು.

“ನೀರು ಬಿಡುವುದಕ್ಕಿಂತ ಮೊದಲೇ ಇವರು ಯಾಕೆ ಸಭೆ ಕರೆಯಲಿಲ್ಲ. ಎಲ್ಲ ರಾಜಕೀಯ ಪಕ್ಷಗಳು, ಸಂಸದರು, ರೈತರ ಸಭೆ ಮಾಡಬಹುದಿತ್ತು. ಕಳ್ಳತನದಲ್ಲಿ ತಮಿಳುನಾಡಿಗೆ ನೀರು ಬಿಟ್ಟರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಜನರ ಜೊತೆ ಇದ್ದೇವೆ ಎಂದು ಈಗ ಹೇಳುತ್ತಿದ್ದಾರೆ. ಇದಕ್ಕಿಂತ ಅನ್ಯಾಯ ಮತ್ತೇನಿದೆ. ರೈತರು, ವಕೀಲರು ಹಾಗೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಂದೆ ಸಿಎಂ ನೀರು ಬಿಟ್ಟಿದ್ದ ಉದಾಹರಣೆ ಇದೆ. ಇವರಿಬ್ಬರು ರಾಜ್ಯದ ಜನರ ಕ್ಷಮೆ ಕೋರಬೇಕು” ಎಂದು ಆಗ್ರಹಿಸಿರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇನ್ನಷ್ಟು ಮದ್ಯದಂಗಡಿಗಳ ಸಿದ್ದು ಕ್ರಮ ಸಮಾಜಘಾತಕ- ಕೈಬಿಡುತ್ತೇವೆಂದು ಆರನೆಯ ‘ಗ್ಯಾರಂಟಿ’ ನೀಡಲಿ

“ರಾಜ್ಯದಲ್ಲಿ ಬರದಿಂದ ಜನ ತತ್ತರಿಸಿ ಹೋಗಿದ್ದಾರೆ. ಎಷ್ಟು ಕಡೆ ಬರ ಬಂದಿದೆ. ಬೆಳೆ ನಷ್ಟ ಎಷ್ಟು ಅಂದು ಸಮೀಕ್ಷೆ ಕೂಡ ಮಾಡಿಲ್ಲ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂಷಿಸುವುದೇ ಇವರ ಕೆಲಸ. ಈಗಲೂ ಎಲ್ಲರನ್ನು ಕರೆದು, ಸಭೆ ಮಾಡಿ, ನಿರ್ಧಾರ ಕೈಗೊಳ್ಳಲಿ” ಎಂದು ಒತ್ತಾಯಿಸಿದರು.

“ಕೇಂದ್ರದ ಬಿಜೆಪಿ ನಾಯಕರೂ ರಾಜ್ಯದ ಬೆಳವಣಿಗೆ ಗಮನಿಸುತ್ತಿದ್ದಾರೆ. ಆದಷ್ಟು ಬೇಗ ವಿರೋಧ ಪಕ್ಷದ ನಾಯಕರ ಆಯ್ಕೆ ಆಗಲಿದೆ. ನಮ್ಮ ತಪ್ಪೇನಾದರೂ ಇದ್ದರೆ ಕರೆದು ಬುದ್ಧಿ ಹೇಳಲಿ. ಕಾಂಗ್ರೆಸ್‌ನವರು ಇದೇ ವಿಚಾರದಲ್ಲಿ ನಮ್ಮನ್ನು ಟೀಕಿಸುತ್ತಿದ್ದಾರೆ. ಸದನದಲ್ಲಿ ಲೇವಡಿ ಮಾಡುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...