ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದವರು ‘ವಂದೇ ಮಾತರಂ’ ಬಗ್ಗೆ ಮಾತನಾಡುತ್ತಿದ್ದಾರೆ: ಅಖಿಲೇಶ್ ಯಾದವ್

Date:

“ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದವರು ಈಗ ‘ವಂದೇ ಭಾರತ್’ ಮೌಲ್ಯಗಳ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, “ರಾಷ್ಟ್ರೀಯ ಗೀತೆಯನ್ನು ಇತರರ ಮೇಲೆ ತಮ್ಮ ನಂಬಿಕೆಗಳನ್ನು ಹೇರುವ ಸಾಧನವಾಗಿ ಬಳಸಬಾರದು” ಎಂದು ಪ್ರತಿಪಾದಿಸಿದ್ದಾರೆ.

ಲೋಕಸಭೆಯಲ್ಲಿ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಕುರಿತು ನಡೆದ ಚರ್ಚೆಯಲ್ಲಿ ಭಾಗವಹಿಸಿದ ಯಾದವ್, “ವಂದೇ ಮಾತರಂ ಅನ್ನು ಉತ್ಸಾಹದಿಂದ ಅನುಸರಿಸಬೇಕು. ಏಕೆಂದರೆ ಇದು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜನರನ್ನು ಜತೆಯಾಗಿಸಿದ ಹಾಡು” ಎಂದು ಅಭಿಪ್ರಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ʼವಂದೇ ಮಾತರಂ’ವಿವಾದ; ಪರಿವಾರ- ಪ್ರಧಾನಿ ಪೋಣಿಸಿದ ಸುಳ್ಳುಗಳ ಬೊಂತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಂದೇ ಮಾತರಂ ರಾಜಕೀಯ ಸಾಧನವಲ್ಲ. ಅವರು(ಬಿಜೆಪಿ ನಾಯಕರು) ತಾವೇ ವಂದೇ ಮಾತರಂ ಗೀತೆಯನ್ನು ರಚಿಸಿದಂತೆ ಮಾತನಾಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ ವ್ಯಕ್ತಿಗಳು ‘ವಂದೇ ಮಾತರಂ’ನ ಅರ್ಥವನ್ನು ನಿಜವಾಗಿಯೂ ಹೇಗೆ ಅರ್ಥಮಾಡಿಕೊಳ್ಳಬಹುದು” ಎಂದು ಪ್ರಶ್ನಿಸಿದರು.

“ಇಂದು ವಿಭಜನೆಯನ್ನು ಸೃಷ್ಟಿಸಲು ವಂದೇ ಮಾತರಂ ಅನ್ನು ಬಳಸಲಾಗುತ್ತಿದೆ. ಈ ವ್ಯಕ್ತಿಗಳು ಇನ್ನೂ ಬ್ರಿಟಿಷರು ಬಳಸಿದ ಅದೇ ‘ಒಡೆದು ಆಳುವ’ ನೀತಿಯನ್ನು ಅನುಸರಿಸುತ್ತಿದ್ದಾರೆ. ಆಳುವ ಕಡೆಯಲ್ಲಿರುವವರು ತಮಗೆ ಎಂದಿಗೂ ಸೇರದ ಪ್ರತಿಷ್ಠಿತ ನಾಯಕರನ್ನು ತಮ್ಮ ಸಿದ್ಧಾಂತದವರು ಎಂದು ಬಿಂಬಿಸುವ ಪ್ರಯತ್ನವನ್ನು ಪದೇ ಪದೇ ಮಾಡಿದ್ದಾರೆ” ಎಂದೂ ದೂರಿದರು.

“ಜನರು ಸಂಪೂರ್ಣ ‘ವಂದೇ ಮಾತರಂ’ ಗೀತೆಯನ್ನು ನೆನಪಿಸಿಕೊಳ್ಳದಿರಬಹುದು ಅಥವಾ ಅದರ ಮಹತ್ವವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದಿದ್ದರೂ, ಆ ಎರಡು ಪದಗಳನ್ನು ಉಚ್ಚರಿಸುವುದರಿಂದ ಹೆಮ್ಮೆ ಉಂಟಾಗುತ್ತದೆ. ಗೀತೆ ಜನರ ಹೃದಯದಲ್ಲಿ ಆಳವಾಗಿ ಬೇರೂರಿವೆ. ಬ್ರಿಟಿಷ್ ಆಳ್ವಿಕೆಯಿಂದ ಹೊರಬರಲು ಜನರನ್ನು ಒಗ್ಗೂಡಿಸುವಲ್ಲಿ ವಂದೇ ಮಾತರಂ ನಿರ್ಣಾಯಕ ಪಾತ್ರ ವಹಿಸಿದೆ. ಅದರ 150ನೇ ವರ್ಷದಲ್ಲಿ, ಈ ಗೀತೆಯನ್ನು ಇನ್ನೊಬ್ಬರ ನಂಬಿಕೆಗೆ ವಿರುದ್ಧವಾಗಿ ಹೇರುವ ಅಥವಾ ಇತರರ ಮೇಲೆ ಒತ್ತಡ ಹೇರುವ ಸಾಧನವಾಗಿ ಬಳಸಬಾರದು” ಎಂದು ಒತ್ತಿ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...