ಸರ್ಕಾರ ತೆಗೆದವರು- ತೆಗೆಸಿಕೊಂಡವರು ಅಪ್ಪಿಕೊಂಡಿದ್ದಾರೆ: ಯೋಗೀಶ್ವರ್-ಹೆಚ್‌ಡಿಕೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Date:

ರಾಮನಗರ ಜಿಲ್ಲೆಯ ರಾಜಕಾರಣದಲ್ಲಿ ಅವಕಾಶವಾದ ರಾಜಕಾರಣದ ಅಪ್ಪುಗೆಯನ್ನು ಮಾಡಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಸ್ವಯಂಘೋಷಿತ ಬಿಜೆಪಿ ನಾಯಕ ಸಿ.ಪಿ.ಯೋಗೀಶ್ವರ್ ಏಕವಚನದಲ್ಲಿ ಪರಸ್ಪರ ನಿಂದಿಸಿಕೊಳ್ಳುತ್ತಿದ್ದವರು ಈಗ ಒಂದಾಗುತ್ತಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು, ಯೋಗೀಶ್ವರ್-ಹೆಚ್‌ಡಿಕೆ ಜನರಿಗೆ ಪುಕ್ಕಟೆ ಮನರಂಜನೆಯನ್ನು ನೀಡುತ್ತಿದ್ದು, ತಮ್ಮ ರಾಜಕೀಯದ ಅಸ್ತಿತ್ವಕ್ಕಾಗಿ ಒಬ್ಬರ ಹೆಗಲ ಮೇಲೆ ಇನ್ನೊಬ್ಬರು ಕೈ ಹಾಕುತ್ತಿದ್ದಾರೆ. ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ರವರನ್ನು ಟೀಕಿಸುತ್ತಿದ್ದಾರೆ ಎಂದರು.

2022ರ ಅಕ್ಟೋಬರ್‌ನಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಮಗಾರಿಗಳ ಶಂಕುಸ್ಥಾಪನೆಯ ಸಂದರ್ಭದಲ್ಲಿ ಯೋಗೀಶ್ವರ್-ಹೆಚ್‌ಡಿಕೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಜೆಡಿಎಸ್ ಕಾರ್ಯಕರ್ತರು ಯೋಗೀಶ್ವರ್ ಕಾರಿನ ಮೇಲೆ ಮೊಟ್ಟೆ ಎಸೆದು ಅಡ್ಡಿಪಡಿಸಿದ್ದನ್ನು ಬಸವರಾಜ ಬೊಮ್ಮಾಯಿಯವರೇ ಖಂಡಿಸಿದ್ದರು. ಇದೇ ಯೋಗೀಶ್ವರ್ ಬಿಜೆಪಿ ನಾಯಕ ಅಮಿತ್ ಷಾರವರನ್ನು ಗೂಂಡಾ ಎಂದು ಕರೆದ ಆಡಿಯೋ ಸದ್ದು ಮಾಡಿತ್ತು. ಕುಮಾರಸ್ವಾಮಿ ಹೊಂದಾಣಿಕೆ ರಾಜಕೀಯ ಕುರಿತು ಹಲವು ಬಾರಿ ಆರೋಪ ಮಾಡಿ, ಜೋಕರ್ ಎಂದು ಕರೆದಿದ್ದರು. ಯೋಗೀಶ್ವರ್‌ರವರನ್ನು ಒಬ್ಬ ಬಚ್ಚಾ ಎಂದು ಕರೆದು, ನೀಚತನದಲ್ಲಿ ಮಂತ್ರಿ ಆಗಿದ್ದಾನೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದರು. ಈಗ ರಾಜಕೀಯ ಅಸ್ತಿತ್ವಕ್ಕಾಗಿ ಈಗ ಇಬ್ಬರೂ ಪರಸ್ಪರ ಅಪ್ಪಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ. ನಾವು ಮೊದಲಿನಿಂದಲೂ ಜೆಡಿಎಸ್ ಬಿಜೆಪಿ ಬಿ ಟೀಮ್ ಎಂದು ಹೇಳುತ್ತಿದ್ದೆವು. ಈಗಾ ಬಿಜೆಪಿ ಬಿ ಟೀಂ ಎಂದು ತೋರಿಸಿಕೊಟ್ಟಿದ್ದಾರೆ ಎಂದರು.

ಬಿಎಸ್ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಬಸವರಾಜ ಬೊಮ್ಮಾಯಿ ಅವರಿಗೆ ವಿಶ್ರಾಂತಿ ಕೊಡಲು ಕುಮಾರಸ್ವಾಮಿ ಅವರಿಗೆ ರೆಡ್ ಕಾರ್ಪೆಟ್ ಹಾಕಲಾಗಿದೆ. ಸಿಪಿ ಯೋಗೀಶ್ವರ್, ಕುಮಾರಸ್ವಾಮಿ ಅವರು ಒಳ್ಳೆ ಜೋಡಿಗಳಾಗಿ ಹೊರ ಹೊಮ್ಮಿದ್ದಾರೆ. ಒಂದಾಗಿ ಸೈದ್ದಾಂತಿಕವಾಗಿ ಪಕ್ಷ ಕಟ್ಟಿದ್ದಾರೆ ರಾಜಕಾರಣ ಮಾಡಿದರೆ ನಾವು ಬೇಡ ಅನ್ನುವುದಿಲ್ಲ. ಆದರೆ ಪದೇ ಪದೆ ಡಿಕೆ ಶಿವಕುಮಾರ್, ಡಿಕೆ ಸುರೇಶ್ ವಿಚಾರ ಮಾತಾನಾಡುವುದು ಸರಿ ಅಲ್ಲ ಎಂದರು.

ಸರ್ಕಾರ ತೆಗೆದವರು ಮತ್ತು ತೆಗೆಸಿಕೊಂಡವರು ಒಬ್ಬರಿಗೊಬ್ಬರು ಅಪ್ಪಿಕೊಂಡು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತೆಗೆಯುವ ಮಾತನಾಡುತ್ತಿದ್ದಾರೆ. ಬಿಜೆಪಿ ನಾಯಕರ ಅಶ್ಲೀಲ ಸಿಡಿಗಳನ್ನು ಬಳಸಿಕೊಂಡು ಯೋಗೀಶ್ವರ್ ಬ್ಲಾಕ್‌ಮೇಲ್ ಮೂಲಕ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿದ್ದಾರೆ ಎಂದು ಯತ್ನಾಳ್, ರೇಣುಕಾಚಾರ್ಯ ಮತ್ತು ಇತರೆ ನಾಯಕರು ಆರೋಪ ಮಾಡಿದ್ದರು. ಸಿಪಿ ಯೋಗೀಶ್ವರ್ ಅವರಂತ ಅವಕಾಶವಾದಿ ರಾಜಕಾರಣಿ ಯಾರು ಇಲ್ಲ ಎಂದು ಕಾಂಗ್ರೆಸ್ ನಾಯಕ ರಮೇಶ್ ಬಾಬು ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ರಾಮಚಂದ್ರಪ್ಪ ಮತ್ತು ಜಿ.ಸಿ.ರಾಜು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...