ಮೂವರು ಬಿಜೆಪಿ ಸಂಸದರು ಕಾಂಗ್ರೆಸ್‌ ಸೇರಲು ಬಯಸಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

Date:

ಮೂವರು ಬಿಜೆಪಿ ಸಂಸದರು ಕಾಂಗ್ರೆಸ್‌ ಸೇರಲು ಬಯಸಿದ್ದು, ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಕಲಬುರಗಿ ನಗರಕ್ಕೆ ಬಂದಿರುವ ಅವರು ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

“ಕಾಂಗ್ರೆಸ್‌ ಸೇರುವ ಸಂಸದರು ಯಾರು ಎಂಬುದನ್ನು ಸದ್ಯಕ್ಕೆ ಬಹಿರಂಗಪಡಿಸಲಾಗದು. ಇನ್ನೂ ಹಲವು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಯದೇವ ಆಸ್ಪತ್ರೆಯ ‌ನಿವೃತ್ತ ನಿರ್ದೇಶಕ ಡಾ.ಸಿ ಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ‌ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯಿಸಿ, “ಎಚ್ ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ, ಅವರ ಮನೆಯವರು, ಅವರ ಮಗನ ಸ್ಪರ್ಧೆಯನ್ನೂ ನೋಡಿದ್ದೇವೆ. ಡಿ ಕೆ ಸುರೇಶ್ ಬರೀ ಸಂಸದ ಅಲ್ಲ. ಪಂಚಾಯಿತಿ ಸದಸ್ಯರಾಗಿಯೂ ಕೆಲಸ‌ ಮಾಡಿದ್ದಾರೆ. ಅವರಿಗೆ ಚುನಾವಣೆ ಎದುರಿಸುವುದು ಗೊತ್ತಿದೆ” ಎಂದರು.

“ಸಿ ಎನ್ ಮಂಜುನಾಥ್ ಅವರನ್ನು ನಮ್ಮ ಸರ್ಕಾರವೂ ಜಯದೇವದಲ್ಲಿ ನಿರ್ದೇಶಕರನ್ನಾಗಿ ಮುಂದುವರೆಸಿತ್ತು. ಅವರು ಸ್ಪರ್ಧಿಸಿದರೆ ಸ್ವಾಗತ. ನಮ್ಮ ಗ್ಯಾರಂಟಿಗಳನ್ನು ಬಿಜೆಪಿಯವರು ನಕಲು ಮಾಡಿ ಮೋದಿ ಗ್ಯಾರಂಟಿ ಎಂದು ಕರೆದುಕೊಳ್ಳುತ್ತಿದ್ದಾರೆ” ಎಂದು ಕುಟುಕಿದರು.

ಬಿಜೆಪಿಯ ಡಿ ವಿ ಸದಾನಂದಗೌಡ ಅವರು ಬೆಂಗಳೂರಿನ ಕ್ಷೇತ್ರವೊಂದರಿಂದ ಕಾಂಗ್ರೆಸ್ ಟಿಕೆಟ್ ಮೂಲಕ ಸ್ಪರ್ಧಿಸುವ ಸಾಧ್ಯತೆ ಇದೆಯಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಶಿವಕುಮಾರ್ ಈ ಬಗ್ಗೆ ಯಾವುದೇ ಹೇಳಿಕೆ ನೀಡಲಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...