ಗುಜರಾತ್| ರಾಜ್ಯ ಸರ್ಕಾರದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ಪತ್ರ ಬರೆದ ಮೂವರು ಬಿಜೆಪಿ ಶಾಸಕರು!

Date:

ಗುಜರಾತ್ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಬಿಜೆಪಿಯೊಳಗೆ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಬಿಜೆಪಿಯ ಮೂವರು ಶಾಸಕರು ಔಪಚಾರಿಕ ಪತ್ರಗಳ ಮೂಲಕ ತಮ್ಮದೇ ಪಕ್ಷ ಆಡಳಿತವಿರುವ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಮುಗಿದ ತಕ್ಷಣ ಸೂರತ್‌ನ ವರಾಚಾ ಕ್ಷೇತ್ರದ ಶಾಸಕ ಕುಮಾರ್ ಕನಾನಿ ಅವರು ಮೊದಲ ಬಾರಿಗೆ ಸರ್ಕಾರದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಮೇ 14 ರಂದು ಸೂರತ್ ಜಿಲ್ಲಾಧಿಕಾರಿಗೆ ಪತ್ರ ಬರೆದ ಕನನಿ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಪಡೆಯುವ ವ್ಯವಸ್ಥೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ?  ಗುಜರಾತ್ | RTI ಕಾರ್ಯಕರ್ತನ ಹತ್ಯೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ದಿನು ಸೋಲಂಕಿ ಸಹಿತ 6 ಮಂದಿ ಖುಲಾಸೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“10ನೇ ತರಗತಿ ಮತ್ತು 12ನೇ ತರಗತಿ ಫಲಿತಾಂಶ ಹೊರಬಿದ್ದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ ಸೀಮಿತ ಸಂಖ್ಯೆಯ ಟೋಕನ್‌ಗಳನ್ನು ಮಾತ್ರ ವಿತರಿಸಲಾಗಿದ್ದು, ಹಲವರು ಕಂಗಾಲಾಗಿದ್ದಾರೆ. ಕಚೇರಿ ನಿರ್ವಾಹಕರೊಂದಿಗೆ ಏಜೆಂಟರು ಕೆಲಸ ಮಾಡಿದ್ದಾರೆ. ಹಣವನ್ನು ತೆಗೆದುಕೊಂಡು ಎರಡು ಗಂಟೆಯೊಳಗೆ ಪ್ರಮಾಣಪತ್ರಗಳನ್ನು ವ್ಯವಸ್ಥೆ ಮಾಡಿದ್ದಾರೆ” ಎಂದು ಬಿಜೆಪಿ ಶಾಸಕ ಪತ್ರದಲ್ಲಿ ಬರೆದಿದ್ದಾರೆ.

ಈ ನಡುವೆ ಜುನಾಗಢದ ಬಿಜೆಪಿ ಶಾಸಕ ಸಂಜಯ್ ಕೊರ್ಡಿಯಾ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಜುನಾಗಢ್‌ನ ನರಸಿಂಗ್ ಸರೋವರದ ಪ್ರಗತಿ ಮಂದಗತಿಯಿಂದ ಸಾಗುತ್ತಿರುವುದನ್ನು ಬಿಜೆಪಿ ಶಾಸಕ ಪ್ರಶ್ನಿಸಿದ್ದಾರೆ.

“ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಬರೆದ ಪತ್ರದಲ್ಲಿ, ಜುನಾಗಢದ ನರಸಿಂಗ್ ಸರೋವರದ ಕಾಮಗಾರಿಯು ಕಳೆದ ಎರಡು ವರ್ಷಗಳಿಂದ ನಡೆಯುತ್ತಿದೆ ಎಂದು ನಾನು ಉಲ್ಲೇಖಿಸಿದ್ದೇನೆ. ಗಡುವು ಏಪ್ರಿಲ್‌ನಲ್ಲಿ ಆದರೆ ಈವರೆಗೂ ಶೇಕಡ 60ರಷ್ಟೂ ಪೂರ್ಣವಾಗಿಲ್ಲ” ಎಂದು ಸಂಜಯ್ ಕೊರ್ಡಿಯಾ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಗುಜರಾತ್‌ | ಅಹಮದಾಬಾದ್‌ನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

ಜೊತೆಗೆ ಈ ಹಿಂದೆ 2023ರಲ್ಲಿ ಜುನಾಗಡ್ ನದಿ ತೀರದಲ್ಲಿ ನಿರ್ಮಾಣ ಚಟುವಟಿಕೆಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಶಾಸಕ ಆರೋಪಿಸಿದ್ದಾರೆ. ಈ ವಿಷಯದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು.

ಇನ್ನು ಗುಜರಾತ್‌ನ ಮಹುಧಾ ವಿಧಾನಸಭಾ ಕ್ಷೇತ್ರದ ಮತ್ತೊಬ್ಬ ಬಿಜೆಪಿ ಶಾಸಕ ಸಂಜಯ್ ಸಿಂಗ್ ಮಹಿದಾ ಅವರು ಪತ್ರ ಬರೆದಿದ್ದಾರೆ. “ತಾಲೂಕು ಅಭಿವೃದ್ಧಿ ಅಧಿಕಾರಿ ಮನಸೋಇಚ್ಛೆ ಖರೀದಿ ಮಾಡುತ್ತಿದ್ದಾರೆ. ಪ್ರಾಥಮಿಕ ಶಾಲೆಗಳಿಗೆ ಮಂಜೂರು ಮಾಡಿರುವ ಆರ್‌ಒ ಪ್ಲಾಂಟ್‌ಗಳು ಮತ್ತು ವಾಟರ್ ಕೂಲರ್‌ಗಳು ಕಳಪೆ ಗುಣಮಟ್ಟದ್ದಾಗಿವೆ” ಎಂದು ಆರೋಪಿಸಿ ಪತ್ರ ಬರೆದಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...