ಕುಮಾರಸ್ವಾಮಿ ಕೂಡ ಜೈಲಿಗೆ ಹೋಗುವ ಕಾಲ ಹತ್ತಿರವಿದೆ: ಕಾಂಗ್ರೆಸ್‌ ಶಾಸಕ

Date:

ಕುಮಾರಸ್ವಾಮಿ ಏನೂ ಸಾಚ ಅಲ್ಲ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ರೇವಣ್ಣನಂತೆ ಕುಮಾರಸ್ವಾಮಿ ಕೂಡ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ ಎಂದು ಮಂಡ್ಯ ಜಿಲ್ಲೆಯ ಮದ್ದೂರು ಕಾಂಗ್ರೆಸ್‌ ಕದಲೂರು ಉದಯ್ ಹೇಳಿದ್ದಾರೆ. ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ರಾಧಿಕಾ ಅವರನ್ನ ಕುಮಾರಸ್ವಾಮಿ ಪತ್ನಿಯಂತೆ ನೋಡುತ್ತಿದ್ದಾರಾ? ಮಗಳ ವಯಸ್ಸಿನವರನ್ನ ಪುಸಲಾಯಿಸಿ, ಮಗು ಹುಟ್ಟಿಸಿ ರಸ್ತೆಯಲ್ಲಿ ಬಿಟ್ಟಿದ್ದಾರೆ. ಈ ರೀತಿ ಬಹಳಷ್ಟು ನಡೆದಿರುವ ಸಾಧ್ಯತೆಗಳಿವೆ. ಮುಖ್ಯಮಂತ್ರಿ ಅಗಿದ್ದವರು ಇಂತಹ ನೀಚ ಕೆಲಸ ಮಾಡುತ್ತಾರಾ? ಕುಮಾರಸ್ವಾಮಿ ಏನೂ ಸಾಚ ಅಲ್ಲ ಅಂತ ಅವರ ಆಪ್ತರೇ ಹೇಳುತ್ತಾರೆ. ಕುಮಾರಸ್ವಾಮಿ ಕೂಡ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕೇಳಿದ್ದೇವೆ” ಎಂದು ಹೇಳಿದ್ದಾರೆ.

“ಇಷ್ಟು ದಿ‌ನ ದೂರು ಕೊಡಲು ಯಾರೂ ಧೈರ್ಯ ಮಾಡಿರಲಿಲ್ಲ. ಯಾರಾದರೂ ದೂರು ಕೊಟ್ಟರೆ, ಸರ್ಕಾರ ತನಿಖೆ ನಡೆಸುತ್ತದೆ. ಬೇರೆಯವರನ್ನ ಮುಳುಗಿಸಿದ್ದೇ ಅವರ ಸಾಧನೆ. ಅವರು ಜೀವನದುದ್ದಕ್ಕೂ ಬ್ಲಾಕ್ ಮೇಲ್, ಅಪಪ್ರಚಾರ ಮಾಡುತ್ತಾ ಬಂದಿದ್ದಾರೆ‌” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಜ್ವಲ್ ತನ್ನ ಕೃತ್ಯಗಳನ್ನು ತಾನೇ ವಿಡಿಯೋ ಮಾಡಿಕೊಂಡಿದ್ದ. ಜೆಡಿಎಸ್‌ ಯಾವ ಪುರುಷಾರ್ಥಕ್ಕೆ ಪ್ರತಿಭಟನೆ ಮಾಡುತ್ತಿದೆ. ನೂರಾರು ಹೆಣ್ಣುಮಕ್ಕಳಿಗೆ ಅನ್ಯಾಯ ಆಗಿದೆ. ಸಂತ್ರಸ್ತೆಯರ ಪರ ಜೆಡಿಎಸ್‌ನ ಯಾವ ನಾಯಕರೂ ಧ್ವನಿ ಎತ್ತಿಲ್ಲ. ಇವರ ಮನೆ ಹೆಣ್ಣುಮಕ್ಕಳಿಗೆ ಅನ್ಯಾಯ ಆಗಿದ್ದರೆ ಹೀಗೆ ಮಾಡುತ್ತಿದ್ರಾ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...