ಮಾನನಷ್ಟ ಆರೋಪ: ಬಿಜೆಪಿ, ಚುನಾವಣಾ ಆಯೋಗಕ್ಕೆ ನೋಟಿಸ್ ಕಳುಹಿಸಿದ ಟಿಎಂಸಿ

Date:

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಬಿಜೆಪಿ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಮಾನನಷ್ಟ ನೋಟಿಸ್ ಕಳುಹಿಸಿದೆ. ಬಿಜೆಪಿ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಜಾಹೀರಾತನ್ನು ಪ್ರಕಟಿಸಿದ್ದು ಕೋಲ್ಕತ್ತಾ ಹೈಕೋರ್ಟಿನ ಆದೇಶವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ.

ಮೇ 20ರಂದು ಹೈಕೋರ್ಟ್, ಟಿಎಂಸಿಗೆ ಸಂಬಂಧಿಸಿದಂತೆ ಅವಹೇಳನಕಾರಿ ಜಾಹೀರಾತುಗಳನ್ನು ಪ್ರಕಟಿಸದಂತೆ ಮತ್ತು ಜೂನ್ 4ರವರೆಗೆ ಮತ್ತು ಮುಂದಿನ ಆದೇಶದವರೆಗೆ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸದಂತೆ ಬಿಜೆಪಿಗೆ ತಡೆಯಾಜ್ಞೆ ನೀಡಿತ್ತು.

ಇದನ್ನು ಓದಿದ್ದೀರಾ?  ಬಂಗಾಳದಲ್ಲಿ ಇವಿಎಂಗಳ ಮೇಲೆ ಬಿಜೆಪಿ ಟ್ಯಾಗ್; ಟಿಎಂಸಿ ಆರೋಪ; ಚುನಾವಣಾ ಆಯೋಗದ ಉತ್ತರವೇನು? 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಡೆಯಾಜ್ಞೆ ಇದ್ದರೂ ಕೂಡಾ ಬಿಜೆಪಿಯು ಮಂಗಳವಾರ ತನ್ನ ಎಕ್ಸ್‌ ಖಾತೆಯಲ್ಲಿ ಮಾನನಷ್ಟ ಜಾಹೀರಾತು ಪ್ರಕಟಿಸಿದೆ ಎಂದು ಟಿಎಂಸಿ ಪರ ವಕೀಲ ಸೋಹಂ ದತ್ತಾ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಿಂದ ಈ ಉದ್ಧೇಶಪೂರ್ವಕ, ಅವಹೇಳನಕಾರಿ ಜಾಹೀರಾತನ್ನು ಹಿಂತೆಗೆದುಕೊಳ್ಳುವಂತೆ ದತ್ತಾ ಬಿಜೆಪಿಗೆ ತಿಳಿಸಿದ್ದಾರೆ. ಹಾಗೆಯೇ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೂಡಲೇ ಸ್ಪಷ್ಟೀಕರಣವನ್ನು ನೀಡುವಂತೆ ಕೋರಿದ್ದಾರೆ.

ಇದನ್ನು ಓದಿದ್ದೀರಾ?  ಲೋಕಸಭಾ ಚುನಾವಣೆ | ಮಮತಾ ಕೋಟೆಯಲ್ಲಿ ಕೇಸರಿ ತಂತ್ರ-ಕುತಂತ್ರ; ಟಿಎಂಸಿ, ಬಿಜೆಪಿ, ‘ಇಂಡಿಯಾ’ ಹೋರಾಟ

ಮಂಗಳವಾರ ಬಿಜೆಪಿ ಪೋಸ್ಟ್ ಮಾಡಿದ ಜಾಹೀರಾತನ್ನು ‘ಸುಳ್ಳು, ಪರಿಶೀಲಿಸದ ಮತ್ತು ಮಾನಹಾನಿಕರ’ ಎಂದು ಟಿಎಂಸಿ ಹೇಳಿದೆ.

ಇನ್ನು ಟಿಎಂಸಿಗೆ ಸಂಬಂಧಿಸಿದಂತೆ ಅವಹೇಳನಕಾರಿ ಜಾಹೀರಾತುಗಳನ್ನು ಪ್ರಕಟಿಸದಂತೆ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಬಿಜೆಪಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...