ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಟಿಎಂಟಿ ಪ್ರತಿಭಟನೆ ತೀವ್ರಗೊಳಿಸಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೂಗ್ಲಿ ಜಿಲ್ಲೆಯ ಸಿಂಗೂರಿನ ರ‍್ಯಾಲಿಯಲ್ಲಿ ಭಾಗವಹಿಸಿದ ನಂತರ ಜನವರಿ 28ರಂದು ದೆಹಲಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ.
ಇದರ ಜತೆಗೆ ಡೈಮಂಡ್ ಹಾರ್ಬರ್‌ನ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಕೂಡಾ ಮಂಗಳವಾರ ಸಂಜೆ ದೆಹಲಿಗೆ ತೆರಳಿದ್ದಾರೆ. ಇಸಿಐ ವಿರುದ್ಧದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಮತಾ ಅವರೊಂದಿಗೆ ಅಭಿಷೇಕ್ ಜತೆಯಾಗಲಿದ್ದಾರೆ. ಟಿಎಂಸಿಯ ಇಬ್ಬರು ಉನ್ನತ ನಾಯಕರೂ ಫೆಬ್ರವರಿ 3ರವರೆಗೆ ದೆಹಲಿಯಲ್ಲಿಯೇ ಇರಲಿದ್ದಾರೆ. ಮಮತಾ ಅವರು ಫೆಬ್ರವರಿಯಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಬೇಕಿತ್ತು. ಆದರೆ ಈಗಲೇ ದೆಹಲಿಗೆ ತೆರಳಲಿದ್ದಾರೆ.
ಇದನ್ನು ಓದಿದ್ದೀರಾ? ಎಸ್‌ಐಆರ್ ವಿಚಾರಣೆ ವೇಳೆ ತೀವ್ರ ಕಿರುಕುಳ ನೀಡಲಾಗಿದೆ: ಪಶ್ಚಿಮ ಬಂಗಾಳ ಸಚಿವೆ ಶಶಿ ಪಂಜಾ ಆರೋಪ
ಈಗಾಗಲೇ ಎಸ್‌ಐಆರ್ ಮೂಲಕ ಪಶ್ಚಿಮ ಬಂಗಾಳದಲ್ಲಿ 58 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಸುಮಾರು 1.5 ಕೋಟಿ ಮತದಾರರಿಗೆ ನೋಟಿಸ್ ನೀಡಲಾಗಿದೆ. ಇದರಿಂದಾಗಿ ತೀವ್ರ ಗೊಂದಲ ಉಂಟಾಗಿದೆ. ಮೂರು ಬಾರಿ ಶಾಸಕರಿಯಾಗಿರುವ, ಪಶ್ಚಿಮ ಬಂಗಾಳದ ಕೈಗಾರಿಕಾ ಸಚಿವೆ ಶಶಿ ಪಂಜಾ ಅವರಿಗೂ ಎಸ್‌ಐಆರ್ ವಿಚಾರಣೆ ಕರೆದಿರುವುದು ಚುನಾವಣಾ ಆಯೋಗದ ವಿರುದ್ಧ ಆಕ್ರೋಶಕ್ಕೆ ಹೆಚ್ಚಿಸಿದೆ.
ಇದರಿಂದಾಗಿ ಇಸಿಐ ಎಸ್‌ಐಆರ್ ಪ್ರಕ್ರಿಯೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಟಿಎಂಸಿ ಸಂಸದರು ಮತ್ತು ಇತರ ಪಕ್ಷದ ನಾಯಕರು ಗುರುವಾರದಿಂದ ಸದನದ ಮುಂದೆ ಧರಣಿ ನಡೆಸುವ ಸಾಧ್ಯತೆಯಿದೆ. ಆದರೆ ಈ ಪ್ರತಿಭಟನಾ ಕಾರ್ಯಕ್ರಮಕ್ಕೆ ಅವಕಾಶ ಇನ್ನೂ ಸಿಕ್ಕಿಲ್ಲ.
ಮುಖ್ಯ ಚುನಾವಣಾ ಅಧಿಕಾರಿ ಜ್ಞಾನೇಶ್ ಕುಮಾರ್ ಅವರಿಗೆ ಹಲವಾರು ಪತ್ರಗಳನ್ನು ಬರೆದಿದ್ದರೂ, ಚುನಾವಣಾ ಆಯೋಗದ ಪ್ರತಿಕ್ರಿಯೆ ತೃಪ್ತವಾಗಿಲ್ಲ. ಆದ್ದರಿಂದಾಗಿ ಬೃಹತ್ ಪ್ರತಿಭಟನೆಗೆ ಟಿಎಂಸಿ ಸಿದ್ಧತೆ ನಡೆಸುತ್ತಿದೆ.





