ಗುಜರಾತ್‌ | ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಎಎಪಿ ಮೈತ್ರಿ

Date:

ಸಂಸತ್ತಿನಲ್ಲಿ ದೆಹಲಿಯ ಸುಗ್ರೀವಾಜ್ಞೆಗೆ ವಿರುದ್ಧವಾಗಿ ಕಾಂಗ್ರೆಸ್ ಬೆಂಬಲವನ್ನು ಪಡೆಯುವಲ್ಲಿ ಯಶಸ್ವಿಯಾದ ಎಎಪಿ ಈಗ ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಗುಜರಾತ್‌ ಎಎಪಿ ಘಟಕ ತಿಳಿಸಿದೆ.

ಎಎಪಿಯ ಗುಜರಾತ್ ಘಟಕದ ಮುಖ್ಯಸ್ಥ ಇಸುದನ್ ಗಧ್ವಿ ಅವರು, ಇಂಡಿಯಾ ಒಕ್ಕೂಟದ ಭಾಗವಾಗಿರುವ ಆಪ್‌ ಹಾಗೂ ಕಾಂಗ್ರೆಸ್ ಸೀಟು ಹಂಚಿಕೆ ಸೂತ್ರದ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸಲಿವೆ ಎಂದು ಹೇಳಿದ್ದಾರೆ.

ಇನ್ನು ಗಧ್ವಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಪಕ್ಷವು ಹೈಕಮಾಂಡ್ ನಿರ್ದೇಶನಗಳನ್ನು ಪಾಲಿಸುತ್ತದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಎಪಿ ಮತ್ತು ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟದ ಭಾಗವಾಗಿವೆ. ಈ ಚುನಾವಣಾ ಮೈತ್ರಿ ಗುಜರಾತ್‌ನಲ್ಲಿಯೂ ಜಾರಿಗೆ ಬರಲಿದೆ. ಮೈತ್ರಿಯ ಮಾತುಕತೆಗಳು ಪ್ರಾಥಮಿಕ ಹಂತದಲ್ಲಿದ್ದರೂ, ಮುಂಬರುವ ಲೋಕಸಭೆಯಲ್ಲಿ ಆಪ್ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಹೋರಾಡುವುದು ಖಚಿತ. ಸೀಟು ಹಂಚಿಕೆ ಸೂತ್ರದಡಿಯಲ್ಲಿ ಗುಜರಾತ್‌ನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಈ ಬಾರಿ ಗುಜರಾತ್‌ನಲ್ಲಿ ಬಿಜೆಪಿ ಎಲ್ಲ 26 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ನಾನು ಗ್ಯಾರಂಟಿ ನೀಡುತ್ತೇನೆ”  ಎಂದು ಗಾಧ್ವಿ ಸುದ್ದಿಸಂಸ್ಥೆಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ | ಮಾನವೀಯ ಕ್ರಮಗಳ ಮೇಲ್ವಿಚಾರಣೆಗೆ ಸುಪ್ರೀಂನಿಂದ ಮೂವರು ನಿವೃತ್ತ ಮಹಿಳಾ ನ್ಯಾಯಾಧೀಶರ ಸಮಿತಿ ರಚನೆ

ಹೈಕಮಾಂಡ್ ತೀರ್ಮಾನವೇ ಅಂತಿಮ: ಕಾಂಗ್ರೆಸ್

ರಾಜ್ಯ ಎಎಪಿ ಮುಖ್ಯಸ್ಥರ ಘೋಷಣೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ, ಕೇಂದ್ರ ನಾಯಕತ್ವದ ನಿರ್ದೇಶನಗಳನ್ನು ಪಕ್ಷವು ಅನುಸರಿಸುತ್ತದೆ ಎಂದು ಹೇಳಿದರು.

“ನಾನು ಅವರ ಘೋಷಣೆಯ ಬಗ್ಗೆ ಈಗಷ್ಟೇ ತಿಳಿದುಕೊಂಡಿದ್ದೇನೆ. ಇತರ ಪಕ್ಷಗಳೊಂದಿಗೆ ಸೀಟು ಹಂಚಿಕೆ ಒಪ್ಪಂದಗಳನ್ನು ಕೇಂದ್ರ ನಾಯಕತ್ವವು ಅಂತಿಮಗೊಳಿಸುತ್ತದೆ. ಚುನಾವಣಾ ಪೂರ್ವ ಮೈತ್ರಿಗಳನ್ನು ನಿರ್ಧರಿಸುವುದು ಹೈಕಮಾಂಡ್. ಈ ನಿಟ್ಟಿನಲ್ಲಿ ನಮ್ಮ ರಾಷ್ಟ್ರೀಯ ನಾಯಕರ ನಿರ್ದೇಶನಗಳನ್ನು ಗುಜರಾತ್ ಕಾಂಗ್ರೆಸ್ ಅನುಸರಿಸುತ್ತದೆ ” ಎಂದು ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಹೇಳಿದ್ದಾರೆ.

ಕಳೆದ 2022ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಎಪಿ ಪರಸ್ಪರ ಸೆಣಸಿದ್ದವು. 182 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಪಡೆದರೆ, ಎಎಪಿಯು ಐದು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...