ಸಮಸಮಾಜದ ಕನಸು ನನಸಾಗಲು ಆರ್ಥಿಕ, ಸಾಮಾಜಿಕ ಶಕ್ತಿ ಪ್ರತಿಯೊಬ್ಬರಿಗೂ ಬರಬೇಕು: ಸಿಎಂ ಸಿದ್ದರಾಮಯ್ಯ

Date:

“ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಈಗಾಗಲೇ ಎರಡು ಬಾರಿ ರಾಜ್ಯ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದ್ದು, ಕೇಂದ್ರ ಸರ್ಕಾರ ಈಗ ಪುನಃ ಕೇಳಿರುವ ಸ್ಪಷ್ಟೀಕರಣವನ್ನು ಕೂಡಲೇ ಮಾಹಿತಿ ತರಿಸಿ ಸ್ಪಷ್ಟೀಕರಣ ನೀಡಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904 ನೇ ಜಯಂತ್ಯುತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

“ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕ್ರಮ ವಹಿಸಬೇಕು ಎಂದರು. 96-97 ರಲ್ಲಿಯೇ ದಿವಂಗತ ಶಾಸಕ ನಾರಾಯಣ ರಾವ್ ಎಸ್.ಟಿಗೆ ಸೇರಿಸಲು ಪ್ರಯತ್ನಿಸಿದ್ದರು ಎಂದು ಮರೆಯಬಾರದು” ಎಂದು ಇದೇ ವೇಳೆ ಸಿಎಂ ನೆನಪಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೋಣಿ ನಡೆಸುವುದು ಹಾಗೂ ಮೀನು ಹಿಡಿಯುವ ಕಾಯಕ ಅಂಬಿಗರದ್ದು. ಕಾಯಕದಲ್ಲಿ ಮೇಲು ಕೀಳು ಎಂಬುದಿಲ್ಲ. ಮನುಷ್ಯರ ನಡುವೆ ತಾರತಮ್ಯ ಇರಬಾರದು. ಕಾಯಕವನ್ನು ಆಧರಿಸಿ ಮೇಲು ಕೀಳು ಎಂದು ತಾರತಮ್ಯ ಮಾಡಿದ್ದರ ವಿರುದ್ಧ ಬಸವಾದಿ ಶರಣರು ಹೋರಾಟ ಮಾಡಿದರು” ಎಂದ ಸಿಎಂ “ಈ ಸಾಲಿನಲ್ಲಿ ಅಂಬಿಗರ ಚೌಡಯ್ಯ ಮೊದಲನೇ ಸಾಲಿನಲ್ಲಿ ನಿಲ್ಲುತ್ತಾರೆ. ಅದಕ್ಕೆ ಬಸವಣ್ಣನವರು ಇವರಿಗೆ ನಿಜಶರಣ ಎಂದು ಕರೆದರು” ಎಂದು ಸಿಎಂ ವಿವರಿಸಿದರು.

“ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಹಿಂದೆ ನಮ್ಮ ಅವಧಿಯಲ್ಲಿಯೇ ಮಾಡಲಾಯಿತು. ಆರ್ಥಿಕ ಶಕ್ತಿ ಇಲ್ಲದ ಸಮಾಜ ಮುಖ್ಯ ವಾಹಿನಿಗೆ ಬರಲು ಸಾಧ್ಯವಿಲ್ಲ. ಸಮಸಮಾಜದ ಕನಸು ನನಸಾಗಲು ಆರ್ಥಿಕ, ಸಾಮಾಜಿಕ ಶಕ್ತಿ ಪ್ರತಿಯೊಬ್ಬರಿಗೂ ಬರಬೇಕು. ಬಸವಾದಿ ಶರಣರು ಕಾಯಕ ಮತ್ತು ದಾಸೋಹ ಎಂಬ ಎರಡು ತತ್ವಗಳನ್ನು ನೀಡಿದ್ದಾರೆ. ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಕಾಯಕದಲ್ಲಿ ಎಲ್ಲರೂ ತೊಡಗಿ ಉತ್ಪಾದನೆಯನ್ನು ಎಲ್ಲರೂ ಹಂಚಿಕೊಳ್ಳಬೇಕು ಎನ್ನುವುದು ಇದರ ಅರ್ಥ. ಇನ್ನೊಬ್ಬರ ಗಳಿಕೆಯನ್ನು ಕುಳಿತು ಅನುಭವಿಸಬಾರದು. ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲದಿರುವುದು ಆರ್ಥಿಕ, ಸಾಮಾಜಿಕ ಚಟುವಟಿಕೆ ಇಲ್ಲದಿರುವುದರಿಂದ. ಇದಕ್ಕೆ ಚಾಲನೆ ನೀಡಬೇಕೆಂದು ಬಸವಾದಿ ಶರಣರು ಹೇಳಿದ್ದರು” ಎಂದರು.

“ಅಂಬಿಗರ ಚೌಡಯ್ಯನವರ ಹಾದಿಯಲ್ಲಿ ನಡೆಯುವುದು ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ. ಅವರ ವಿಚಾರಗಳನ್ನು ಜನರಿಗೆ ತಿಳಿಸಲು ಜಯಂತ್ಯುತ್ಸವವನ್ನು ಆಚರಿಸಲಾಗುತ್ತದೆ” ಎಂದರು.

ಇದನ್ನು ಓದಿದ್ದೀರಾ? ರಾಮಮಂದಿರ | ತಪ್ಪನ್ನು ನಾವು ತಪ್ಪು ಅಂತಾನೇ ಹೇಳುತ್ತೇವೆ, ಅದರಲ್ಲಿ ಮುಲಾಜಿಲ್ಲ: ಅವಿಮುಕ್ತೇಶ್ವರಾನಂದ ಸ್ವಾಮೀಜಿ

“ನಮ್ಮ ಮಕ್ಕಳು ಯಾವ ಕಾರಣದಿಂದಲೂ ವಿದ್ಯೆಯಿಂದ ವಂಚಿತರಾಗಬಾರದು. ಸಮಾಜದ ಅಸಮಾನತೆಯನ್ನು ಹೋಗಲಾಡಿಸಬೇಕು. ಪಟ್ಟಭದ್ರ ಹಿತಾಸಕ್ತಿಯ ವಿರುದ್ಧ ನಿಲ್ಲಬೇಕಾಗುತ್ತದೆ. ಬದಲಾವಣೆ ಬಯಸದ ಜನ ಆಗಲೂ ಇದ್ದರು, ಈಗಲೂ ಇದ್ದಾರೆ. ಹಿಂದುಳಿದ ಸಮಾಜದೊಂದಿಗೆ ಸದಾ ಇರುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಅಂಬಿಗರ ಚೌಡಯ್ಯನವರ ಬಗ್ಗೆ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪನವರ ಕವಿತೆಯನ್ನು ಸಿಎಂ ವಾಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...