ನಾವೆಲ್ಲ ಒಂದಾಗಿ ಕಾಂಗ್ರೆಸ್ ಸೊಕ್ಕು ಮುರಿಯುತ್ತೇವೆ: ಬಿ ವೈ ವಿಜಯೇಂದ್ರ ಶಪಥ

Date:

ಮುಂದೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಬರಲಿದೆ. ಇದು ಕಾರ್ಯಕರ್ತರಿಗೆ ಶಕ್ತಿ ತುಂಬುವ ಚುನಾವಣೆ. ಇದನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕಿದೆ. ಎಲ್ಲರೂ ಶ್ರಮ ಹಾಕೋಣ. ವಿಧಾನಸಭಾ ಅಧಿವೇಶನದಲ್ಲೂ ನಾವು ಒಟ್ಟಾಗಿ, ಕಾಂಗ್ರೆಸ್ ಸೊಕ್ಕನ್ನು ಮುರಿಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದ 19 ಜನ ಎನ್‍ಡಿಎ ಸಂಸದರ ಸನ್ಮಾನ, ರಾಜ್ಯದ ಕೇಂದ್ರ ಸಚಿವರ ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, “ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ಬಿಜೆಪಿ-ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ” ಎಂದರು.

“ಕಾಂಗ್ರೆಸ್ ಪಕ್ಷದ ಸಾಕಷ್ಟು ಅಪಪ್ರಚಾರದ ನಡುವೆ, ಆಮಿಷಗಳ ನಡುವೆ ರಾಜ್ಯದ ಜನತೆ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ಆಶೀರ್ವಾದ ಮಾಡಿದ್ದಾರೆ. ಹಿಂದೆ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷ ಈಗ 9 ಸ್ಥಾನ ಗೆದ್ದಿರಬಹುದು. ಆದರೆ, ಮತ್ತೊಂದು ಕಡೆ ರಾಜ್ಯದಲ್ಲಿ 145ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮುನ್ನಡೆ ಸಾಧಿಸಿವೆ. ಕಾಂಗ್ರೆಸ್ ಸಚಿವರಿರುವ ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳು ಲೀಡ್ ಪಡೆದಿದ್ದಾರೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದ ಹಿನ್ನಡೆ

“ಮುಂದಿನ 4 ವರ್ಷ ರಾಜ್ಯದ ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ನಾವು ಹೋರಾಟ ಮಾಡಬೇಕಾಗಿದೆ. ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕರ್ನಾಟಕವು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿತ್ತು. ಆದರೆ, ಕಳೆದ ಒಂದು ವರ್ಷದ ಕಾಂಗ್ರೆಸ್ ದುರಾಡಳಿತದಲ್ಲಿ ರಾಜ್ಯವು ಎಲ್ಲ ಕ್ಷೇತ್ರಗಳಲ್ಲೂ ಹಿನ್ನಡೆ ಸಾಧಿಸುವಂತಾಗಿದೆ” ಎಂದರು.

“ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ವೈಫಲ್ಯವನ್ನು ಮುಚ್ಚಿಡಲು ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಕಾಂಗ್ರೆಸ್ ಶಾಸಕ ನಾಡಗೌಡರು ಅಭಿವೃದ್ಧಿ ಇಲ್ಲದ ಕಾರಣಕ್ಕೆ ನಿವೃತ್ತಿ ಪಡೆಯುವ ಮಾತನಾಡಿದ್ದಾರೆ” ಎಂದು ಹೇಳಿದರು.

“ಗ್ಯಾರಂಟಿ ನೆಪದಲ್ಲಿ ಆದಾಯ ಮೂಲ ಹೆಚ್ಚಿಸಲು ಬೆಲೆ ಏರಿಕೆ ಮಾಡುತ್ತಿದ್ದಾರೆ. ರೈತರು ಬರಗಾಲದಿಂದ ಸಂಕಷ್ಟದಲ್ಲಿದ್ದರೂ, ಕೇಂದ್ರದಿಂದ 3,500 ಕೋಟಿ ಬರ ಪರಿಹಾರ ಕೊಟ್ಟರೂ ಸಹ ರಾಜ್ಯ ಸರಕಾರವು ರೈತರಿಗೆ ಸ್ಪಂದಿಸಿಲ್ಲ. ಆಸ್ತಿ ತೆರಿಗೆ ಹೆಚ್ಚಳ, ನೋಂದಣಿ ಶುಲ್ಕ ಏರಿಕೆ, ಮೋಟಾರು ವಾಹನ ತೆರಿಗೆ ಏರಿಕೆ, ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಹಾಲಿನ ದರ ಜಾಸ್ತಿ ಮಾಡಿದ್ದಾರೆ. ಪೆಟ್ರೋಲ್- ಡೀಸೆಲ್ ದರ ಏರಿಸಿದ್ದಾರೆ. ಕಾಂಗ್ರೆಸ್ ಸರಕಾರ ಬಡವರ ವಿರೋಧಿ, ರೈತ ವಿರೋಧಿ, ಜನಸಾಮಾನ್ಯರಿಗೆ ಬರೆ ಎಳೆಯುವ ಸರಕಾರ ಇದಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...