ಮಂಡ್ಯದಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ; ಕುಮಾರಸ್ವಾಮಿಗೆ ಡಿಕೆಶಿ ಟಾಂಗ್‌

Date:

ಮಂಡ್ಯದ ಜನ ಸ್ಥಳೀಯರಿಗೆ ಬಿಟ್ಟು ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ. ಇಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪರೋಕ್ಷವಾಗಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು ಸೋಮವಾರ ಹೇಳಿದ್ದಿಷ್ಟು;

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಕುಮಾರಸ್ವಾಮಿ ಅವರು ಹುಟ್ಟಿದ ಮಣ್ಣು ಹಾಸನ ಜಿಲ್ಲೆ ಬಿಟ್ಟು ರಾಮನಗರಕ್ಕೆ ಬಂದಿದ್ದರು. ಈಗ ಮಂಡ್ಯ ಜಿಲ್ಲೆಗೆ ಬಂದಿದ್ದಾರೆ. ನಾವು, ನೀವು ಕೊಟ್ಟ ಅಧಿಕಾರವನ್ನು ಕುಮಾರಸ್ವಾಮಿ ಅವರು ಉಳಿಸಿಕೊಳ್ಳಲಿಲ್ಲ. ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದವರ ಜೊತೆಯೇ ಈಗ ನೆಂಟಸ್ತನ ಬೆಳೆಸಿಕೊಂಡು ಅವರನ್ನು ತಬ್ಬಾಡುತ್ತಿದ್ದಾರೆ” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವೇಗೌಡರನ್ನು ಈ ದೇಶದ ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಎರಡನೇ ಬಾರಿಗೆ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದು ಕಾಂಗ್ರೆಸ್. ಆದರೆ ನಾವು ಅವರಿಗೆ ಮೋಸ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೇಳುತ್ತಾರೆ. ನಾನು ಸರ್ಕಾರವನ್ನು ಉಳಿಸಲು ಯಾವ ರೀತಿಯ ಹೋರಾಟ ಮಾಡಿದೆ ಎಂಬುದನ್ನು ಜಿ.ಟಿ.ದೇವೇಗೌಡ, ಚನ್ನರಾಯಪಟ್ಟಣದ ಬಾಲಕೃಷ್ಣ, ಶಿವಲಿಂಗೇಗೌಡ ಅವರ ಬಳಿ ಕೇಳಿ ತಿಳಿದುಕೊಳ್ಳಲಿ” ಎಂದು ತಿರುಗೇಟು ನೀಡಿದರು.

“ನೀವು ಐದು ವರ್ಷಗಳ ಕಾಲ ಯಾವುದೇ ತೊಂದರೆ ಇಲ್ಲದೇ ಮುಖ್ಯಮಂತ್ರಿಯಾಗಿ ಇರಪ್ಪ ಎಂದು ನಾವು ಅವಕಾಶ ಮಾಡಿಕೊಟ್ಟೆವು. ಆದರೆ ಅದನ್ನು ಬಿಟ್ಟು ನಾನು ಕಿರುಕುಳ, ತೊಂದರೆ ಕೊಟ್ಟೆ ಎಂದು ಹೇಳುತ್ತಿದ್ದಾರೆ. ನಾನು ಕಿರುಕುಳ ಕೊಟ್ಟ ದಿನವೇ ಕುಮಾರಸ್ವಾಮಿ ಅವರು ಬಿಜೆಪಿ ಸೇರಬಹುದಿತ್ತಲ್ಲವೇ? ಯಾಕೆ ಸೇರಲಿಲ್ಲ? ಸರ್ಕಾರ ಬೀಳುವರೆಗೂ ಅವರು ಸಿಎಂ ಸ್ಥಾನದಲ್ಲಿ ಮುಂದುವರಿದಿದ್ದು ಏಕೆ” ಎಂದು ಪ್ರಶ್ನಿಸಿದರು.

“ರಾಮನಗರ ನನ್ನ ಕರ್ಮಭೂಮಿ ಎಂದಿದ್ದ ಕುಮಾರಸ್ವಾಮಿ ಅವರು ಈಗ ಮಂಡ್ಯ ನನ್ನ ಕರ್ಮಭೂಮಿ ಎಂದು ಇಲ್ಲಿಗೆ ಬಂದಿದ್ದಾರೆ. ರಾಮನಗರ ಅವರನ್ನು ಸಂಸದ, ಶಾಸಕ, ಮುಖ್ಯಮಂತ್ರಿ ಮಾಡಿತು. ಅವರ ತಂದೆಯವರನ್ನೂ ಮುಖ್ಯಮಂತ್ರಿ, ಪ್ರಧಾನಮಂತ್ರಿ ಮಾಡಿತು. ಈಗ ರಾಮನಗರ ಬಿಟ್ಟು, ಮಂಡ್ಯ ಸ್ವಾಭಿಮಾನ, ಕರ್ಮಭೂಮಿ ಎಂದು ಇಲ್ಲಿಗೆ ಬಂದಿದ್ದಾರೆ” ಎಂದರು.

ಕುಮಾರಸ್ವಾಮಿ ಅವರೇ ನಿಮ್ಮ ಹುಟ್ಟೂರು ಹಾಸನ, ಗೆದ್ದಿದ್ದು ರಾಮನಗರ, ಆದರೆ ಈಗ ಮಂಡ್ಯ. ನಿಮ್ಮ ಕೈ ಹಿಡಿದ ರಾಮನಗರ ಜಿಲ್ಲೆಯ ಮತದಾರರ ಬಗ್ಗೆಯೇ ನಿಮಗೆ ಕಾಳಜಿ ಇಲ್ಲ. ಇನ್ನು ಮಿಕ್ಕವರ ಬಗ್ಗೆ ಕಾಳಜಿ ಇದೆ ಎಂದು ಜನ ಹೇಗೆ ನಂಬುವುದು? ನಿಮ್ಮ ಭಾಮೈದನನ್ನು ಬಿಜೆಪಿಯಿಂದ ನಿಲ್ಲಿಸಿದ್ದೀರಿ. ಈಗ ನಿಮ್ಮ ಪಕ್ಷ ಎಲ್ಲಿದೆ? ನಿಮ್ಮ ಕುಟುಂಬದವರನ್ನೇ ಬಿಜೆಪಿಯಿಂದ ನಿಲ್ಲಿಸಿದ ಮೇಲೆ ಜೆಡಿಎಸ್ ಎಲ್ಲಿದೆ. ಜೆಡಿಎಸ್ ಕಾರ್ಯಕರ್ತರು ಏಕೆ ನಿಮ್ಮ ಜೊತೆ ಇರಬೇಕು. ನಿಮ್ಮ ಜೊತೆ ಇರಲು ಯಾರಿಗೂ ಇಷ್ಟವಿಲ್ಲ. ಜನತಾದಳದ ಕಾರ್ಯಕರ್ತರಿಗೆ ಅಭಯ ನೀಡುತ್ತೇನೆ. ಡಿ.ಕೆ.ಶಿವಕುಮಾರ್ ನಿಮ್ಮ ರಕ್ಷಣೆಗೆ ಎಂದಿಗೂ ಇರುತ್ತಾನೆ” ಎಂದು ಹೇಳಿದರು.

“ಸಿ.ಎಸ್.ಪುಟ್ಟರಾಜು ನನಗೆ ಟಿಕೆಟ್ ಸಿಗುತ್ತದೆ ಎಂದು ಕಾಯುತ್ತಾ ಕುಳಿತಿದ್ದ, ಈಗ ಪುಟ್ಟರಾಜು ಕತೆ ಗೋವಿಂದ. ದೇವೆಗೌಡರು ಪ್ರಧಾನಿಗಳಾಗಿದ್ದ ವೇಳೆ 17 ಜನ ಸಂಸದರು ಇದ್ದರು. ಕುಮಾರಸ್ವಾಮಿ ಅವರು ಒಬ್ಬರು ಬಿಟ್ಟು ಮಿಕ್ಕವರೆಲ್ಲಾ ಕಾಂಗ್ರೆಸ್- ಬಿಜೆಪಿ ಸೇರಿದರು. ಇದರ ಬಗ್ಗೆ ದೇವೇಗೌಡರು ಮತ್ತು ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿಕೊಂಡು ಜಾತ್ಯಾತೀತ ತತ್ವವನ್ನು ನೀರಿನಲ್ಲಿ ತೇಲಿ ಬಿಟ್ಟರು. ಆ ಮೂಲಕ ಸೈದ್ಧಾಂತಿಕವಾಗಿ ಬದುಕಿಯೂ ಸತ್ತಂತೆ” ಎಂದು ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...