ಅನ್ನಭಾಗ್ಯ ಯೋಜನೆ | 10 ಕೆ.ಜಿ ಅಕ್ಕಿಯ ಹಣವನ್ನು ಜನರ ಖಾತೆಗೆ ವರ್ಗಾಯಿಸಿ: ಬಿಜೆಪಿ

Date:

ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆ ಜಾರಿಗೆ ಸಾಕಾಗುವಷ್ಟು ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆ 5 ಕೆ.ಜಿ ಅಕ್ಕಿಗೆ ಹಣ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ, 10 ಕೆ.ಜಿ ಅಕ್ಕಿಯ ಹಣ ನೀಡುವಂತೆ ಬಿಜೆಪಿ ಒತ್ತಾಯಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, “ಮಾನ್ಯ ಸಿದ್ದರಾಮಯ್ಯ ಅವರೇ ಕೊನೆಗೂ 5 ಕೆ.ಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಒಪ್ಪಿಕೊಂಡಿರುವುದಕ್ಕೆ ಧನ್ಯವಾದಗಳು. ನಿಮ್ಮ ಎಟಿಎಂ ಸರ್ಕಾರಕ್ಕೆ ಮರ್ಯಾದೆ, ವಚನಬದ್ಧತೆ ಇರುವುದೇ ಆದರೆ, ನೀವು ಕೊಡಬೇಕಿರುವುದು ಕೇವಲ 5 ಕೆ.ಜಿಯ ಅಕ್ಕಿಯ ಹಣವನ್ನಲ್ಲ, 10 ಕೆ.ಜಿ ಅಕ್ಕಿಯನ್ನು ರಾಜ್ಯ ಸರ್ಕಾರ ಪೂರೈಸಲಿದೆ ಎಂದು ಎದೆ ಬಡಿದುಕೊಂಡಂತೆ, 10 ಕೆಜಿಯ ಸಂಪೂರ್ಣ ಹಣವನ್ನು ಜನರ ಖಾತೆಗಳಿಗೆ ವರ್ಗಾಯಿಸಿ. ಕೊಟ್ಟ ಮಾತು ತಪ್ಪಿ ನಡೆದರೆ ಮೆಚ್ಚಲಾರರು ಕನ್ನಡಿಗರು” ಎಂದು ಕಿಡಿಕಾರಿದೆ.

Screenshot 2023 06 28 154101

ಅಕ್ಕಿ ಬದಲು ಹಣ: ಕೆ ಎಚ್‌ ಮುನಿಯಪ್ಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಕ್ಕಿ ಕೊರತೆಯಿಂದಾಗಿ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಕೊರತೆಯಾಗುವ ಅಕ್ಕಿಯ ಬದಲಾಗಿ ಹಣ ನೀಡಲಾಗುವುದು” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ ಎಚ್‌ ಮುನಿಯಪ್ಪ ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಬಿಗ್ ಬ್ರೇಕಿಂಗ್‌ | ಅನ್ನಭಾಗ್ಯ: ಅಕ್ಕಿ ಬದಲು ಹಣ ನೀಡಲು ಸರ್ಕಾರ ನಿರ್ಧಾರ

“ಅಕ್ಕಿ ಬದಲಾಗಿ ಹಣ ನೀಡುತ್ತೇವೆ. ಒಂದು ಕೆ.ಜಿ ಅಕ್ಕಿಗೆ 34 ರೂ. ನಿಗದಿ ಮಾಡಲಾಗಿದೆ. ಪಡಿತರದಾರರಿಗೆ ತಲಾ ಐದು ಕೆ.ಜಿ ಅಕ್ಕಿ ನೀಡಲಾಗುತ್ತದೆ. ಉಳಿದ ಐದು ಕೆ.ಜಿ ಅಕ್ಕಿಯ ಬದಲಿಗೆ, ಪ್ರತಿ ಕೆ.ಜಿಗೆ 34 ರೂ.ನಂತೆ ಹಣ ನೀಡುತ್ತೇವೆ. ಹಣ ನೀಡುವ ವ್ಯವಸ್ಥೆಯು ಅಕ್ಕಿ ಸಂಗ್ರಹವಾಗುವವರೆಗೂ ಚಾಲ್ತಿಯಲ್ಲಿರುತ್ತದೆ” ಎಂದು ಮಾಹಿತಿ ನೀಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...