ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು; ಜುಲೈ 2ರಂದು ಘೋಷಣೆ ಸಾಧ್ಯತೆ

Date:

ರಾಜ್ಯ ಬಿಜೆಪಿಯಲ್ಲಿ ಪ್ರತಿಪಕ್ಷದ ನಾಯಕ ಯಾರು ಎಂಬ ಪ್ರಶ್ನೆ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಬಜೆಟ್‌ ಅಧಿವೇಶನ ಜುಲೈ 3ರಿಂದ ಆರಂಭವಾಗಲಿದ್ದು, ಅಷ್ಟರೊಳಗೆ ಪ್ರತಿಪಕ್ಷ ನಾಯಕನನ್ನು ಬಿಜೆಪಿ ಆಯ್ಕೆ ಮಾಡಬೇಕಾಗಿದೆ. ಆದರೆ, ಚುನಾವಣಾ ಸೋಲಿನ ಬಗ್ಗೆ ಒಬ್ಬರ ಮೇಲೊಬ್ಬರು ಆರೋಪ-ಪ್ರತ್ಯಾರೋಪಗಳನ್ನು ಮಾಡುವುದರಲ್ಲಿಯೇ ಬಿಜೆಪಿ ನಾಯಕರು ತಲ್ಲೀನರಾಗಿದ್ದು, ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಸೊಲ್ಲಿಲ್ಲದಂತಾಗಿದೆ.

ಬಿಜೆಪಿ ಮೂಲಗಳ ಪ್ರಕಾರ, ಪ್ರತಿಪಕ್ಷ ನಾಯಕನ ಹುದ್ದೆಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಸನಗೌಡ ಯತ್ನಾಳ್‌ ಮುಂಚೂಣಿಯಲ್ಲಿದ್ದಾರೆ. ಆದರೆ, ಪಕ್ಷದ ಹೈಕಮಾಂಡ್‌ ಇನ್ನೂ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ. ಜುಲೈ 3ರಿಂದ ಅಧಿವೇಶನ ಇರುವುದರಿಂದ ಜುಲೈ 2ರೊಳಗೆ ವಿಪಕ್ಷ ನಾಯಕನ ಆಯ್ಕೆಯಾಗುತ್ತದೆಂಬ ಭರವಸೆಯಲ್ಲಿ ಬಿಜೆಪಿಗರಿದ್ದಾರೆ.

ದೆಹಲಿ ನಾಯಕರು ಬಿಡುವಿಲ್ಲದ ವೇಳಪಟ್ಟಿ ಹೊಂದಿದ್ದಾರೆ. ಹೀಗಾಗಿ, ಈ ಬಗ್ಗೆ ಚರ್ಚೆಗೆ ಸಮಯವಿಲ್ಲದ ಕಾರಣ ವಿಳಂಬವಾಗುತ್ತಿದೆ ಎಂದು ರಾಜ್ಯ ಬಿಜೆಪಿಗರು ಹೇಳಿಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಅಥವಾ ಎರಡು ದಿನಗಳಲ್ಲಿ ಹೆಸರು ಅಂತಿಮವಾಗಲಿದೆ. ಬೊಮ್ಮಾಯಿ ಮತ್ತು ಯತ್ನಾಳ್ ಹೆಸರುಗಳು ಮುಂಚೂಣಿಯಲ್ಲಿದ್ದರೂ, ಸಾಧಕ-ಬಾಧಕಗಳನ್ನು ಪಟ್ಟಿಮಾಡಿಕೊಂಡು ವಿಪಕ್ಷ ನಾಯಕನನ್ನು ಆಯ್ಕೆ ಮಾಡಬೇಕಾಗಿದೆ” ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿರುವುದಾಗಿ ಟಿಎನ್‌ಐಇ ವರದಿ ಮಾಡಿದೆ.

ಏತನ್ಮಧ್ಯೆ, ವಿಧಾನ ಪರಿಷತ್‌ನಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಎಂಎಲ್‌ಸಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಹೆಸರು ಕೇಳಿಬರುತ್ತಿದೆ. ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಾ.ಸಿ.ಎನ್ ಅಶ್ವನಾರಾಯಣ್ ಮತ್ತು ವಿ ಸೋಮಣ್ಣ ಹೆಸರು ಮುಂಚೂಣಿಯಲ್ಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...