ಮಹಾರಾಷ್ಟ್ರ | ಎಲ್ಲಡೆ ವೈರಲ್‌ ಆಗುತ್ತಿರುವ ಬಿಜೆಪಿ ಉಪಾಧ್ಯಕ್ಷನ ಅಶ್ಲೀಲ ವಿಡಿಯೋ?

Date:

ಮಹಾರಾಷ್ಟ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಕಿರಿಟ್ ಸೋಮಯ್ಯ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸ್ಥಳೀಯ ಮಾರಾಠಿ ನ್ಯೂಸ್ ಚಾನಲ್‌ಗಳಲ್ಲಿ ಪ್ರಸಾರವಾಗಿದೆ.

ಈ ವಿಷಯ ಮಹಾರಾಷ್ಟ್ರ ರಾಜಕೀಯದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿದೆ. ವಿರೋಧಿಗಳು ವಿಡಿಯೋ ಕಿರಿಟ್ ಸೋಮಯ್ಯ ಅವರದ್ದೇ ಎನ್ನುತ್ತಿದ್ದರೆ, ಈ ವಿಡಿಯೋ ನನ್ನದಲ್ಲ. ನನ್ನ ಹೆಸರಿನಲ್ಲಿ ತಿರುಚಿದ ವಿಡಿಯೋಗಳನ್ನು ಬಿತ್ತರಿಸಲಾಗಿದೆ ಎಂದು ಸೋಮಯ್ಯ ಚಾನಲ್‌ ವಿರುದ್ಧ ಆರೋಪಿಸಿದ್ದಾರೆ.

ನಾನು ಯಾವುದೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿಲ್ಲ. ವಿಡಿಯೋ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿ ಕ್ರಮ ಜರುಗಿಸಬೇಕು ಎಂದು ಮಹಾರಾಷ್ಟ್ರದ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರಿಗೆ ಟ್ವೀಟ್ ಮೂಲಕ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋದಲ್ಲಿರುವಂತೆ ಕಿರಿಟ್ ಸೋಮಯ್ಯ ಮಹಿಳೆಯೊಬ್ಬರ ಜೊತೆ ಅಶ್ಲೀಲವಾಗಿ ಮಾತನಾಡುತ್ತಾ ಅಶ್ಲೀಲ ಹಾವಭಾವ ಪ್ರದರ್ಶಿಸುತ್ತಾ, ಬೆತ್ತಲೆ ದೇಹ ಪ್ರದರ್ಶನ ಮಾಡಿರುವುದು ತೋರುತ್ತದೆ.

ಕಿರಿಟ್ ಸೋಮಯ್ಯ ಒಂದು ಬಾರಿ ಶಾಸಕ ಹಾಗೂ ಎರಡು ಅವಧಿಗೆ ಬಿಜೆಪಿಯಿಂದ ಲೋಕಸಭೆ ಸದಸ್ಯರಾಗಿದ್ದರು. ಪ್ರತಿಪಕ್ಷ ಮಹಾ ವಿಕಾಸ್‌ ಅಘಾಡಿ ಘಟನೆಯ ಬಗ್ಗೆ ತನಿಖೆಗೆ ಒತ್ತಾಯಿಸಿದೆ. ಏಕನಾಥ್‌ ಶಿಂಧೆ ನೇತೃತ್ವದ ಬಿಜೆಪಿ – ಶಿವಸೇನೆ – ಎನ್‌ಸಿಪಿ ಸರ್ಕಾರವು ಬೆಳವಣಿಗೆಯ ಬಗ್ಗೆ ಇಲ್ಲಿಯವರೆಗೂ ಪ್ರತಿಕ್ರಿಯೆ ನೀಡಿಲ್ಲ.

ಈ ಸುದ್ದಿ ಓದಿದ್ದೀರಾ? ಬೀದರ್ | ಮಂಜುರಾದರೂ ಅಲೆಮಾರಿಗಳಿಗೆ ದಕ್ಕದ ನಿವೇಶನ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿಶಾಪ

ಮುಂಬೈ ಕಾಂಗ್ರೆಸ್ ಅಧ್ಯಕ್ಷೆ ಪ್ರೊ. ವರ್ಷಾ ಗಾಯಕ್ವಾಡ್, “ಮರಾಠಿ ಸುದ್ದಿ ವಾಹಿನಿಯೊಂದು ಬಹಿರಂಗಪಡಿಸಿದ ಸೋಮಯ್ಯನವರ ವಿಡಿಯೋದಿಂದ ಬೇಸರವಾಗಿದೆ. ಈ ವ್ಯಕ್ತಿ ಸಾರ್ವಜನಿಕ ಜೀವನದಲ್ಲಿ ಒಳ್ಳೆಯ ವ್ಯಕ್ತಿಯಂತೆ ನಟಿಸುತ್ತಾರೆ. ಆದರೆ ಮಾಡುವುದೆಲ್ಲವೂ ಅನಾಚಾರ. ಒಂದು ಕಡೆ ಅವರ ಪಕ್ಷದವರು ‘ಬೇಟಿ ಬಚಾವೋ ಬೇಟಿ ಪಡಾವೋ’ ಎಂದು ಮಾತನಾಡುತ್ತಿದ್ದರೆ ಮತ್ತೊಂದೆಡೆ ಅವರ ಪಕ್ಷದ ನಾಯಕರು ಅನೈತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಅವರ ‘ಬೇಟಿ ಬಚಾವೋ ಬೇಟಿ ಪಡಾವೋ’ ಘೋಷಣೆ ಹೆಣ್ಣು ಮಕ್ಕಳನ್ನು ಬಿಜೆಪಿಯ ನಾಯಕರಿಂದ ರಕ್ಷಿಸುವುದೇ ಹೊರತು ಬೇರೇನೂ ಇಲ್ಲ ಎಂಬುದು ಪದೇಪದೇ ಸಾಬೀತಾಗಿದೆ. ವಿರೋಧ ಪಕ್ಷದ ನಾಯಕರ ಅಕ್ರಮಗಳನ್ನು ಬಿಜೆಪಿ ಯಾವಾಗಲೂ ಖಂಡಿಸುತ್ತದೆ. ಈಗ ಅದು ತನ್ನದೇ ಆದ ಒಬ್ಬರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆಯೇ ಅಥವಾ ಇಲ್ಲವೇ?” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...