ಭಾರತ-ಪಾಕ್ ಕದನ ವಿರಾಮದ ಬಗ್ಗೆ 13 ಬಾರಿ ‘ತುತ್ತೂರಿ ಊದಿದ’ ಟ್ರಂಪ್; ಪ್ರಧಾನಿ ಪ್ರತಿಕ್ರಿಯೆ ಯಾವಾಗ: ಕಾಂಗ್ರೆಸ್ ಪ್ರಶ್ನೆ

Date:

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ಮಾಡಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 13 ಬಾರಿ ಸಾರ್ವಜನಿಕವಾಗಿ ತುತ್ತೂರಿ ಊದಿದ್ದಾರೆ. ಆದರೆ ಟ್ರಂಪ್ ಹೇಳಿಕೆಗಳ ಬಗ್ಗೆ ನಮ್ಮ ಪ್ರಧಾನಿ ನರೇಂದ್ರ ಮೋದಿ ಯಾವಾಗ ಮಾತನಾಡುವುದು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪಾಕಿಸ್ತಾನ ಮೂಲದ ಭಯೋತ್ಪಾದಕರು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ ಸುಮಾರು 26 ಪ್ರವಾಸಿಗರನ್ನು ಕೊಂದ ಬಳಿಕ ಭಾರತವು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ 100ಕ್ಕೂ ಅಧಿಕ ಉಗ್ರರ ಹತ್ಯೆ ಮಾಡಿದೆ.

ಇದನ್ನು ಓದಿದ್ದೀರಾ? ಭಾರತ ಪಾಕಿಸ್ತಾನ ಕದನ ವಿರಾಮ | ಡೊನಾಲ್ಡ್ ಟ್ರಂಪ್ ನಿಜವಾದ ‘ವಾರ್ ರುಕ್ವಾ ದೀ ಪಾಪಾ’ ಎಂದ ನೆಟ್ಟಿಗರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿ ದಾಳಿ ಪ್ರತಿದಾಳಿಗಳು ನಿರಂತರವಾಗಿ ನಡೆಯುತ್ತಲೇ ಇದ್ದವು. ಯುದ್ಧದ ಸ್ವರೂಪ ಪಡೆಯುತ್ತಿದ್ದಂತೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದ ಮಾಡಿಕೊಂಡಿದೆ. ಆದರೆ ವ್ಯಾಪಾರ ನಿಲ್ಲಿಸುವ ಬೆದರಿಕೆ ಹಾಕಿ ಈ ಒಪ್ಪಂದವನ್ನು ತಾನೇ ಮಾಡಿಸಿರುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಹಲವು ಬಾರಿ ಹೇಳಿದ್ದಾರೆ. ಈ ಹೇಳಿಕೆಯನ್ನು ಭಾರತ ನಿರಾಕರಿಸಿದೆ. ಆದರೂ ಟ್ರಂಪ್ ಬೇರೆ ಬೇರೆ ದೇಶಗಳಿಗೆ ಭೇಟಿ ನೀಡುವಾಗ ಇದೇ ಹೇಳಿಕೆ ಪುನರುಚ್ಚರಿಸಿದ್ದಾರೆ. ಆದರೆ ಪ್ರಧಾನಿ ಮೋದಿ ಮಾತ್ರ ಈ ಹೇಳಿಕೆಗೆ ಪ್ರತ್ಯುತ್ತರ ನೀಡಿಲ್ಲ.

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಇಂದು, ಅಧ್ಯಕ್ಷ ಟ್ರಂಪ್ 79 ವರ್ಷಗಳಿಗೆ ಕಾಲಿಡುತ್ತಿದ್ದಾರೆ. 2025ರ ಮೇ 10ರಿಂದ ಜೂನ್ 13ರ ನಡುವಿನ 34 ದಿನಗಳಲ್ಲಿ ಮೂರು ವಿಭಿನ್ನ ದೇಶಗಳಲ್ಲಿ ಟ್ರಂಪ್ ಅವರು ವಿಭಿನ್ನ ಸಂದರ್ಭಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ಮಾಡಿದ್ದು ತಾನೇ ಎಂದು ಸಾರ್ವಜನಿಕವಾಗಿ ಘೋಷಿಸಿದ್ದಾರೆ” ಎಂದು ಹೇಳಿದ್ದಾರೆ.

“ಟ್ರಂಪ್ ಅವರು ಎರಡೂ ದೇಶಗಳ ಮೇಲೆ ಸಮಾನವಾಗಿ ಹೊಗಳಿಕೆಯ ಸುರಿಮಳೆಗೈಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೇ, ನೀವು ಯಾವಾಗ ಟ್ರಂಪ್ ಅವರ ಈ ಹೇಳಿಕೆ ಬಗ್ಗೆ ಮಾತನಾಡುವುದು” ಎಂದು ಎಕ್ಸ್ ಪೋಸ್ಟ್‌ನಲ್ಲಿ ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾರತ-ಪಾಕ್ ಸಂಘರ್ಷ | ನೀವು ನಿಲ್ಲಿಸದಿದ್ದರೆ ಯಾವುದೇ ವ್ಯಾಪಾರ ಮಾಡಲ್ಲ ಎಂದಿದ್ದೆವು: ಡೊನಾಲ್ಡ್ ಟ್ರಂಪ್

ಇನ್ನು ಜೈರಾಮ್ ರಮೇಶ್ ಅವರು ಟ್ರಂಪ್ ಹೇಳಿಕೆಗಳನ್ನು ನೀಡಿದ ಸಂದರ್ಭಗಳ ಪಟ್ಟಿ ಮತ್ತು ವಿವರಗಳನ್ನೂ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅಮೆರಿಕ ಅಧ್ಯಕ್ಷರ ಹೇಳಿಕೆ ಮತ್ತು ಮಾಧ್ಯಮ ವರದಿಗಳ ಲಿಂಕ್‌ಗಳನ್ನು ಸೇರಿಸಲಾಗಿದೆ.

ಇನ್ನೊಂದು ಟ್ವೀಟ್‌ನಲ್ಲಿ ಜೈರಾಮ್ ಅವರು, “ನಮ್ಮ ದೇಶದಲ್ಲಿ ಅಹಮದಾಬಾದ್ ವಿಮಾನ ದುರಂತ ನಡೆದ ಶೋಕದಲ್ಲಿ ನಾವಿರುವಾಗ ಅಧ್ಯಕ್ಷ ಟ್ರಂಪ್ ಭಾರತ-ಪಾಕಿಸ್ತಾನ ಕದನ ವಿರಾಮ ತಾವೇ ಮಾಡಿಸಿದ್ದು ಎಂದು ಒಂಬತ್ತನೇ ಬಾರಿಗೆ ಹೇಳಿಕೊಂಡಿದ್ದಾರೆ. ವಾಷಿಂಗ್ಟನ್ ಡಿಸಿ ಕೆನೆಡಿ ಸೆಂಟರ್‌ನಲ್ಲಿ ಈ ಭಾಷಣ ಮಾಡಲಾಗಿದೆ. ಆದರೆ ನಮ್ಮ ಪ್ರಧಾನಿ(ಮೋದಿ) ಈ ಹೇಳಿಕೆಗಳ ಬಗ್ಗೆ ತನ್ನ ಮೌನ ಮುಂದುವರೆಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...