ತುಮಕೂರು | ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಖುಷಿ : ಕೇಂದ್ರ ಸಚಿವ ವಿ. ಸೋಮಣ್ಣ  

Date:

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ನನ್ನಷ್ಟು ಖುಷಿ ಪಡೋರು ಯಾರೂ ಇಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಸಿದ್ದರಾಮಯ್ಯ ಅವರು ಬಹಳ ಆತ್ಮೀಯರು. ಒಟ್ಟಿಗೆ ಕೆಲಸ ಮಾಡಿದ್ದೇವೆ. ಒಂದು ದಿನದ ಹಿಂದಷ್ಟೇ ಮಾತನಾಡಿದ್ದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರ ಕಾನೂನು ಪ್ರಕಾರ ನಡೆಯುತ್ತದೆ. ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ನುರಿತ ರಾಜಕಾರಣಿ. ಈ ವಿಚಾರದಲ್ಲಿ ಏನು ಮಾಡಬೇಕು ಎನ್ನುವುದು ಸಿದ್ದರಾಮಯ್ಯ ಸಾಹೇಬರಿಗೆ ಚೆನ್ನಾಗಿ ಗೊತ್ತಿದೆ” ಎಂದರು.

“ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತೆ, ಸಿದ್ದರಾಮಯ್ಯ ಸಾಹೇಬ್ರು ಸಹ ಅವರೇನು ಮಾಡಬೇಕೋ ಮಾಡ್ತಾರೆ. ಸತ್ಯ, ಕಾನೂನಿಗಿಂತ ನಾವ್ಯಾರು ದೊಡ್ಡವರಲ್ಲ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ದೂರದೃಷ್ಟಿಯ ಬ್ರಹ್ಮಾಸ್ತ್ರ ಏನಿದೆ, ಅದು ಯಾರ್ಯಾರಿಗೆ ಏನಾಗಿದೆ ಅನ್ನೋದಕ್ಕಿಂತ ಹೆಚ್ಚಾಗಿ, ಕಾನೂನು ತನ್ನ ಕೆಲಸವನ್ನು ತಾನು ಮಾಡುತ್ತದೆ” ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, “ನನಗೂ 45 ವರ್ಷ ರಾಜಕೀಯ ಅನುಭವ ಇದೆ. ಒತ್ತಾಯ ಮಾಡೋದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬ್ರು ನುರಿತ ರಾಜಕಾರಣಿ, ಬುದ್ದಿವಂತರಿದ್ದಾರೆ. ನಾನು ಅವರು ಬಹಳ ಆತ್ಮೀಯರಾಗಿ ಕೆಲಸ ಮಾಡಿದ್ದೇವೆ ನಿನ್ನೆಯಷ್ಟೆ ಅವರ ಜೊತೆ ಮಾತನಾಡಿದಾಗ, ಅವರು ಮಾತನಾಡಿದ್ದನ್ನು ನಾನು ಬಹಳ ಆನಂದದಿಂದ ಸ್ವೀಕರಿಸಿದ್ದೇನೆ” ಎಂದು ಹೇಳಿದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...