ತುಮಕೂರು | ಕಾಂಗ್ರೆಸ್‌ ಮುಖಂಡನ ಮೇಲೆ ಗುಬ್ಬಿ ಶಾಸಕ ಶ್ರೀನಿವಾಸ್ ಹಲ್ಲೆ; ಪ್ರಕರಣ ದಾಖಲು

Date:

ತುಮಕೂರಿನ ಪಿಡಬ್ಲ್ಯೂಡಿ ಕಚೇರಿಯಲ್ಲಿ ಟೆಂಡರ್ ಅಕ್ರಮ ಖಂಡಿಸಿ ಧರಣಿ ಕುಳಿತಿದ್ದ ಗುತ್ತಿಗೆದಾರ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾ‌ರ್ ಮೇಲೆ ಗುಬ್ಬಿ ಶಾಸಕ ಶ್ರೀನಿವಾಸ್ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಟೆಂಡರ್‌ ಕರಾರು ಮಾಡಿಕೊಡದ ಪಿಡಬ್ಲೂಡಿ ಕಚೇರಿಯ ಇಂಜಿನಿಯ‌ರ್ ಧೋರಣೆ ಖಂಡಿಸಿ ರವಿಕುಮಾರ್ ಶುಕ್ರವಾರ ಆಹೋರಾತ್ರಿ ಧರಣಿ ನಡೆಸುತ್ತಿದ್ದರು. ರಾತ್ರಿ 10.30ರ ಸುಮಾರಿಗೆ ಧರಣಿ ಸ್ಥಳಕ್ಕೆ ಏಕಾಏಕಿ ನುಗ್ಗಿದ ಶಾಸಕರು ಮತ್ತು ಅವರ ಬೆಂಬಲಿಗರು ರವಿಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರಿಗೆ ದೂರು ನೀಡಿರುವ ರವಿಕುಮಾರ್, ತಮಗೆ ಶಾಸಕರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಥಳಿಸಿದ್ದಾರೆ. ಕಾರಿನಲ್ಲಿ ಕೂರಿಸಿಕೊಂಡು ಕಿಡ್ನಾಪ್ ಮಾಡಲು ಯತ್ನಿಸಿದರು. ಗಲಾಟೆ ಬಿಡಿಸಲು ಬಂದ ಪೊಲೀಸ್ ಸಿಬ್ಬಂದಿ ಮೇಲೆಯೂ ಹಲ್ಲೆ ಮಾಡಲಾಗಿದೆ. ಸ್ಥಳದಲ್ಲಿದ್ದ ಖುರ್ಚಿಗಳನ್ನೆಲ್ಲ ಪುಡಿ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...