ತುಮಕೂರು | ಸಿದ್ದರಾಮಯ್ಯ ಇರುವವರೆಗೂ ನಾನು ಕಾಂಗ್ರೆಸ್‌ನಲ್ಲಿ ಇರುತ್ತೇನೆ: ‌ಶಾಸಕ ಕೆ ಎನ್ ರಾಜಣ್ಣ

Date:

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದು, ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವವರೆಗೆ, ನನ್ನ ಭವಿಷ್ಯದ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಅವರು ಪಕ್ಷದಲ್ಲಿರುವವರೆಗೂ ನಾನು ನನ್ನ ಪ್ರೀತಿ ಮತ್ತು ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂದು ಮಾಜಿ ಸಹಕಾರ ಸಚಿವ ಹಾಗೂ ಶಾಸಕ ಕೆ ಎನ್ ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಮತ್ತು ಕೆ ಎನ್ ರಾಜಣ್ಣ ನಡುವಿನ ರಾಜಕೀಯ ಜಟಾಪಟಿ ಮುಂದುವರೆಯುತ್ತಿದಂತೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಬುಧವಾರ ಈ ರೀತಿಯ ಸ್ಪಷ್ಟತೆ ನೀಡಿದ್ದು, ಸಚಿವ ಸ್ಥಾನದಿಂದ ವಜಾಗೊಂಡ ನಂತರ ರಾಜಣ್ಣ ಬಿಜೆಪಿ ಸೇರುತ್ತಾರೆಂಬ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

“ರಾಹುಲ್ ಗಾಂಧಿ ನಡೆಸುತ್ತಿರುವ ಮತ ಕಳ್ಳತನದ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ. ನನ್ನನ್ನು ಮತ್ತೆ ಸಚಿವರನ್ನಾಗಿ ಮಾಡಬೇಕೆಂದು ಒತ್ತಾಯಿಸಲು ನನ್ನ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಭೇಟಿ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಏಕೆ ಬಿಜೆಪಿ ಸೇರಬೇಕು? ಬಿಜೆಪಿ ಸೇರಲು ಬಯಸುವವರು ಹಾಗೆ ಮಾಡಲಿ. ನಾನು ಯಾವುದೇ ಪಕ್ಷದಿಂದ ಸ್ಪರ್ಧಿಸಿದರೂ ಗೆಲ್ಲುವ ಶಕ್ತಿ ನನಗಿದೆ. ನಾನು ಏಕೆ ಕಾಂಗ್ರೆಸ್ ತ್ಯಜಿಸಲಿ? ಪಕ್ಷ ನನಗೆ ಏನು ಮಾಡಿದೆ? ಪ್ರತಿಯೊಂದು ಕ್ಷೇತ್ರದಲ್ಲಿ(ತುಮಕೂರು ಜಿಲ್ಲೆಯಲ್ಲಿ) ಯಾರನ್ನಾದರೂ ಆಯ್ಕೆ ಮಾಡುವ ಅಥವಾ ಸೋಲಿಸುವ ಶಕ್ತಿ ನನಗಿದೆ” ಎಂದು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.

“ರಾಜಣ್ಣ ಅವರು ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದು, ಕೇಸರಿ ಪಕ್ಷಕ್ಕೆ ಸೇರುತ್ತಾರೆ. ರಾಜಣ್ಣ ಅವರ ಮಗ ಎಂಎಲ್‌ಸಿ ರಾಜೇಂದ್ರ ಅವರು ತಮ್ಮ ತಂದೆಯವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದರ ಹಿಂದೆ ಪಿತೂರಿ ಇದೆ” ಎಂದು ಬಾಲಕೃಷ್ಣ ಮಂಗಳವಾರ ಆರೋಪಿಸಿದ್ದರು.

“ರಾಜಣ್ಣ ಮತ್ತು ರಾಜೇಂದ್ರ ಅವರು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಮೇಲೆ ಹೊರೆ ಹಾಕುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕಾರವಾರ | ಭಾರತೀಯ ಸೇನೆ ಸೇರಲು ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ

“ರಾಹುಲ್ ಗಾಂಧಿ ಅವರನ್ನು ಪರೋಕ್ಷವಾಗಿ ಟೀಕಿಸುವ ಮೂಲಕ ರಾಜಣ್ಣ ಕೋಪಗೊಂಡರು, ಎಐಸಿಸಿ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೂ ಟೀಕಿಸಿದರು ಮತ್ತು ಅದಕ್ಕೆ ಬೆಲೆ ತೆತ್ತರು” ಎಂದು ಹೇಳಿದರು.

ಇದರ ನಡುವೆ ಮಾಜಿ ಸಂಸದ ಡಿ ಕೆ ಸುರೇಶ್ ಬುಧವಾರ ರಾಜಣ್ಣ ರಾಷ್ಟ್ರೀಯ ನಾಯಕರಾಗಿದ್ದಾರೆಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...