ತುಮಕೂರು | ಮಾಜಿ ಸಚಿವ ಮಾಧುಸ್ವಾಮಿಯನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ: ಬಿಜೆಪಿಯಲ್ಲಿ ತಲ್ಲಣ!

Date:

ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಬಿಜೆಪಿ ಮುಖಂಡ ಜೆ ಸಿ ಮಾಧುಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ತುಮಕೂರು ಕ್ಷೇತ್ರದ ಟಿಕೆಟ್​ ವಿ.ಸೋಮಣ್ಣ ಅವರಿಗೆ ನೀಡಿರುವುದರಿಂದ ಆಕ್ರೋಶಗೊಂಡಿರುವ ಜೆಸಿ ಮಾಧುಸ್ವಾಮಿ, “ವಿ. ಸೋಮಣ್ಣ ನಮ್ಮ ಮನೆಗೆ ಬರಬೇಡಿ, ನಾನು ಪರ ಪ್ರಚಾರ ಮಾಡುವುದಿಲ್ಲ” ಎಂದು ಬಹಿರಂಗವಾಗಿಯೇ ಹೇಳಿದ್ದರು.

ಈ ಎಲ್ಲ ಬೆಳವಣಿಗೆಯ ನಡುವೆಯೇ ಇಂದು ಮಾಧುಸ್ವಾಮಿ ಮನೆಗೆ ತುಮಕೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಭೇಟಿ ನೀಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಮೂಲಕ ತುಮಕೂರು ಬಿಜೆಪಿ ಘಟಕದಲ್ಲಿನ ಭಿನ್ನಮತ ಶಮನವಾಗಿಲ್ಲವೆಂಬುವುದು ಎಂಬುದು ಸ್ಪಷ್ಟವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುದ್ದಹನುಮೇಗೌಡ ತಮ್ಮ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಧುಸ್ವಾಮಿ, “ಮುದ್ದಹನುಮೇಗೌಡ ಒಬ್ಬ ಅಭ್ಯರ್ಥಿಯಾಗಿ ನಮ್ಮ ಮನೆಗೆ‌ ಬಂದಿದ್ದಾರೆ. ನಾನು ಮತ್ತು ಅವರು ಒಳ್ಳೆಯ ಸ್ನೇಹಿತರು. ಸ್ನೇಹಿತರು ಅಂತ ಮನೆಗೆ ಬಂದಾಗ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಅಭ್ಯರ್ಥಿ ಆದವರು ಬೆಂಬಲ ಕೇಳಿದ್ದಾರೆ. ನಾವು ಬೇರೆ ಪಕ್ಷದಲ್ಲಿ ಇರುವವರು. ಬೆಂಬಲ ಕೊಡುವುದಕ್ಕೆ ಆಗುತ್ತಾ? ಅದೆಲ್ಲಾ ಚರ್ಚೆ ಮಾಡಿಲ್ಲ” ಎಂದು ಹೇಳಿದರು.

ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಜೆಸಿ ಮಾಧುಸ್ವಾಮಿ ಅವರು ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್​ ಸೇರುತ್ತಾರೆ ಎಂಬ ಸುದ್ದಿ ಹರಿದಾಡಿದ್ದವು. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ತುರುವೇಕೆರೆ ಹೊರವಲಯದಲ್ಲಿರುವ ಮಾಜಿ ಶಾಸಕ ಮಸಾಲ ಜಯರಾಂ ತೋಟದ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಮಾಧುಸ್ವಾಮಿ ಅವರನ್ನು ಸಮಾಧಾನಪಡಿಸಿದ್ದರು. ಇದರೊಂದಿಗೆ ಮಾಧುಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದನ್ನು ತಡೆದಿದ್ದರು. ಆದರೆ ಮಾಧುಸ್ವಾಮಿ ಮುನಿಸು ಮಾತ್ರ ತಣ್ಣಗಾಗಿಲ್ಲ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಜೆಸಿ ಮಾಧುಸ್ವಾಮಿ ಅವರು ರಾಜಕೀಯದಿಂದ ಸ್ವಲ್ಪ ದೂರ ಉಳಿದಿದ್ದರು. ಬಳಿಕ ಬಿಎಸ್​ ಯಡಿಯೂರಪ್ಪ ಅವರ ಒತ್ತಡ ಮೇರೆಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪಿಕೊಂಡರು. ಆದರೆ ವಿ.ಸೋಮಣ್ಣ ಅವರು ಟಿಕೆಟ್​ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಸಹಜವಾಗಿಯೇ ಜೆಸಿ ಮಾಧುಸ್ವಾಮಿ ಅಸಮಾಧಾನಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...