1.50 ಕೋಟಿ ರೂ. ಐಟಿ ದಂಡದ ವಿರುದ್ಧ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ: ಹೈಕೋರ್ಟ್‌

Date:

2015–16ರ ಆರ್ಥಿಕ ವರ್ಷದಲ್ಲಿ ಆದಾಯವನ್ನು ಬಹಿರಂಗಪಡಿಸದೇ ಇದ್ದಿದ್ದಕ್ಕಾಗಿ ಆದಾಯ ತೆರಿಗೆ ಇಲಾಖೆಯು ವಿಧಿಸಿದ್ದ 1.50 ಕೋಟಿ ರೂ. ದಂಡದ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಆದಾಯ ತೆರಿಗೆ ಕಾಯ್ದೆಯಡಿಯಲ್ಲಿ ಕಾನೂನು ಸಮಯ ಮಿತಿಯೊಳಗೆ ದಂಡದ ಆದೇಶ ಹೊರಡಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೆಂಥಿಲ್‌ಕುಮಾರ್ ರಾಮಮೂರ್ತಿ ವಿಚಾರಣೆ ನಡೆಸಿದ್ದಾರೆ. “ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 275 (1) (ಎ) ಅಡಿಯಲ್ಲಿ ಸಮಯ ಮಿತಿಯೊಳಗೆ ದಂಡ ವಿಧಿಸಿ ಇಟಿ ಇಲಾಖೆ ಆದೇಶ ಹೊರಡಿಸಿದೆ. ಇದರಲ್ಲಿ ಹಸ್ತಕ್ಷೇಪ ಮಾಡುವುದು ವ್ಯವಸ್ಥೆ ದೌರ್ಬಲ್ಯಕ್ಕೆ ಕಾರಣವಾಗುತ್ತದೆ” ಎಂದು ಹೇಳಿದ್ದು, ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಆದಾಗ್ಯೂ, “ದಂಡದ ವಿರುದ್ಧ ಎತ್ತಲಾದ ಇತರ ಆಧಾರಗಳನ್ನು ನಾವು ಪರಿಶೀಲಿಸಿಲ್ಲ ಎಂದಿರುವ ನ್ಯಾಯಾಧೀಶರು, “ಸಮಯ ಮಿತಿಯನ್ನು ಹೊರತುಪಡಿಸಿ ಇತರ ಆಧಾರದ ಮೇಲೆ ಮೇಲ್ಮನವಿ ಪ್ರಾಧಿಕಾರದ ಮುಂದೆ ದಂಡ ಆದೇಶವನ್ನು ಅರ್ಜಿದಾರರು ಪ್ರಶ್ನಿಸಬಹುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಟ್ರಂಪ್–ಮೋದಿ ಒಪ್ಪಂದ | ಇದು ಪರಸ್ಪರ ಸಹಕಾರವೋ ಅಥವಾ ಅಮೆರಿಕದ ಒತ್ತಡದ ಹೇರಿಕೆಯೋ?

2015ರಲ್ಲಿ ವಿಜಯ್ ಮತ್ತು ಎಸ್‌ಕೆಟಿ ನಿರ್ಮಾಪಕರ ಕಚೇರಿಯಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದ್ದರು. ಶೋಧದ ಸಮಯದಲ್ಲಿ, ಅಧಿಕಾರಿಗಳು ನಿರ್ಮಾಪಕರಿಂದ 16 ಕೋಟಿ ರೂ.ಗಳ ಚೆಕ್ ಪಾವತಿಯ ಜೊತೆಗೆ 4.93 ಕೋಟಿ ರೂ.ಗಳ ನಗದು ರಶೀದಿಯನ್ನು ತೋರಿಸುವ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಆ ಚೆಕ್‌ ಮತ್ತು ನಗದು ರಶೀದಿಗಳನ್ನು ಆದಾಯ ಘೋಷಣೆಯಲ್ಲಿ ಬಹಿರಂಗಪಡಿಸಲಾಗಿಲ್ಲವೆಂದು ಹೇಳಿದ್ದ ಐಟಿ ಇಲಾಖೆ, 2022ರ ಜೂನ್ 30ರಂದು ವಿಜಯ್‌ಗೆ 1.50 ಕೋಟಿ ರೂ.ಗಳ ದಂಡವನ್ನು ವಿಧಿಸಿತ್ತು.

ದಂಡದ ಆದೇಶವನ್ನು ವಿಜಯ್ ಪ್ರಶ್ನಿಸಿದ್ದರು. ಅವರ ಅರ್ಜಿಯನ್ನು ಆದಾಯ ತೆರಿಗೆ ಆಯುಕ್ತರು (ಮೇಲ್ಮನವಿ) ಅನುಮತಿಸಿದ್ದರು. ನಂತರ, ಇಟಿ ಇಲಾಖೆಯು ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ ಮೊರೆಹೋಗಿತ್ತು. ನ್ಯಾಯಮಂಡಳಿಯು ಇಲಾಖೆಯ ಮೇಲ್ಮನವಿಯನ್ನು ಅನುಮತಿಸಿ. ದಂಡದ ಆದೇಶವನ್ನು ಅಂಗೀಕರಿಸಿತ್ತು. ಬಳಿಕ, ವಿಜಯ್ ಅವರು 2022ರಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆರಂಭದಲ್ಲಿ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ದಂಡದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದೀಗ, ಅವರನ್ನು ಅರ್ಜಿಯನ್ನು ವಜಾಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...