ಛತ್ತೀಸ್‌ಗಢ | ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಎರಡು ಕುಟುಂಬಗಳ ಮೇಲೆ ಹಲ್ಲೆ

Date:

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಕಾರಣಕ್ಕೆ ಎರಡು ಕುಟುಂಗಳ ಮೇಲೆ ಹಲ್ಲೆ ನಡೆಸಿ, ಗ್ರಾಮವನ್ನೇ ತೊರೆಯಲು ಒತ್ತಡ ಹೇರಿದ ಘಟನೆ ಛತ್ತೀಸ್‌ಗಢದ ದಕ್ಷಿಣ ಬಸ್ತಾರ್‌ನ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ.

ಅಬುಜ್‌ಮಾರ್‌ನ ಇಕ್ನಾರ್ ಗ್ರಾಮದಲ್ಲಿ 18 ಮನೆಗಳಿದ್ದು, ಅವುಗಳಲ್ಲಿ ಎರಡು ಕುಟುಂಬಗಳು ಐದು ವರ್ಷಗಳ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿವೆ. ಆದರೆ ಈ ಮತಾಂತರಕ್ಕೆ ಕೆಲವು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಮತಾಂತರವಾಗುವುದು ನಮ್ಮ ವೈಯಕ್ತಿಕ ಆಯ್ಕೆಯಾಗಿದೆ ಎಂದು ಈ ಎರಡೂ ಕುಟುಂಬಗಳು ಹೇಳಿಕೊಂಡಿದೆ.

ಇದನ್ನು ಓದಿದ್ದೀರಾ? ಒಡಿಶಾದಲ್ಲಿ ಕ್ರೈಸ್ತರ ಮೇಲೆ ಬಜರಂಗದಳದ ದಾದಾಗಿರಿ: ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರೇ ಗುರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತಾಂತರಗೊಂಡ ಕಾರಣಕ್ಕೆ ಥಳಿಸಿ, ಅವರ ವಸ್ತುಗಳನ್ನು ಮನೆಗಳಿಂದ ಹೊರಹಾಕಲಾಗಿದೆ, ಪಡಿತರವನ್ನು ಎಸೆಯಲಾಗಿದೆ, ಪ್ರಮುಖ ದಾಖಲೆಗಳನ್ನು ಸುಟ್ಟುಹಾಕಲಾಗಿದೆ ಎಂದು ಈ ಕುಟುಂಬಗಳು ಆರೋಪಿಸಿದೆ.

“ನಾವು ಚರ್ಚ್‌ಗೆ ಹೋಗುತ್ತಿದ್ದ ಕಾರಣಕ್ಕೆ ಗ್ರಾಮಸ್ಥರು ನಮ್ಮ ಮೇಲೆ ದಾಳಿ ನಡೆಸಿದ್ದಾರೆ. ನಮ್ಮ ಮನೆಗಳಿಗೆ ಹಾನಿಯಾಗಿದೆ. ನಮ್ಮನ್ನು ಗ್ರಾಮದಿಂದ ಹೊರಹೋಗುವಂತೆ ಹೇಳಲಾಗಿದೆ. ಗ್ರಾಮಸ್ಥರು ಅವರ ನಂಬಿಕೆಯನ್ನು ಪಾಲಿಸುತ್ತಿರುವಾಗ ನಮಗೂ ನಮ್ಮ ನಂಬಿಕೆಯನ್ನು ಪಾಲಿಸಲು ಬಿಡಬೇಕು” ಎಂದು ಮತಾಂತರಗೊಂಡ ಕುಟುಂಬಸ್ಥರು ಹೇಳಿಕೊಂಡಿದ್ದಾರೆ.

ಆದರೆ ಗ್ರಾಮಸ್ಥರು ಮಾತ್ರ ಮತಾಂತರಗೊಂಡ ಕುಟುಂಬಗಳು ಗ್ರಾಮದಲ್ಲಿ ಎಲ್ಲರೂ ಪಾಲಿಸುವ ಸಂಪ್ರದಾಯವನ್ನೇ ಅನುಸರಿಸಬೇಕು ಎಂದು ಎಚ್ಚರಿಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಎಫ್‌ಐಆರ್ ದಾಖಲಿಸಿಲ್ಲ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ನಂತರ ಕ್ರೈಸ್ತರು… ಆನಂತರ?

ಸಂವಿಧಾನದ ವಿಧಿ 25ರ ಅಡಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಇಷ್ಟದ ಧರ್ಮವನ್ನು ಮುಕ್ತವಾಗಿ ನಂಬಲು, ಅನುಸರಿಸಲು ಮತ್ತು ಪ್ರಚಾರ ಮಾಡುವ ಹಕ್ಕಿದೆ. ಹಾಗೆಯೇ ಮತಾಂತರ ಹೊಂದುವ ಹಕ್ಕೂ ಇದೆ. ಹಾಗೆಯೇ ಒಬ್ಬ ವ್ಯಕ್ತಿ ತನ್ನ ಸ್ವಂತ ಇಚ್ಛೆಯಿಂದ, ಯಾವುದೇ ಒತ್ತಡವಿಲ್ಲದೆ ಮತ್ತೊಂದು ಧರ್ಮಕ್ಕೆ ಬದಲಾಗುವುದು ಕಾನೂನುಬದ್ಧವಾಗಿದೆ. ಹಾಗೆಯೇ ಆಮಿಷ ಒಡ್ಡುವುದು, ಬೆದರಿಕೆ ಹಾಕುವುದು ಅಥವಾ ಬಲವಂತವಾಗಿ ಮತಾಂತರ ಮಾಡುವುದು ಕಾನೂನುಬಾಹಿರವಾಗಿದೆ.

ಆದರೆ ತಮ್ಮ ಇಚ್ಛೆಯಂತೆ ಮತಾಂತರವಾದರೂ ಬಿಜೆಪಿ, ಬಜರಂಗದಳದ ನಾಯಕರು ಮತಾಂತರಗೊಂಡ ಕುಟುಂಬದ ಮೇಲೆ ದಾಳಿ ನಡೆಸುವ ಪ್ರಕರಣ ಹೆಚ್ಚಳವಾಗಿದೆ. ಹಾಗೆಯೇ ಮತಾಂತರಗೊಳಿಸಿದ ಸುಳ್ಳು ಆರೋಪದಲ್ಲಿ ಕ್ರೈಸ್ತ, ಮುಸ್ಲಿಂ ಸಮುದಾಯದ ಮೇಲಿನ ದಾಳಿಯೂ ಅಧಿಕವಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...