ಆಗಸ್ಟ್ 15: ‘ರಾಷ್ಟ್ರೀಯ ಆಚರಣೆಯ ದಿನ’ ಎಂದು ಘೋಷಿಸಲು ನಿರ್ಣಯ ಮಂಡಿಸಿದ ಅಮೆರಿಕದ ಸಂಸದರು

Date:

ಭಾರತೀಯ-ಅಮೆರಿಕನ್ ಕಾಂಗ್ರೆಸ್ಸಿಗ ಥಾನೇದಾರ್ ನೇತೃತ್ವದಲ್ಲಿ ಅಮೆರಿಕ ಸಂಸದರ ಗುಂಪು ಸಂಸತ್ತಿನ ಕೆಳಮನೆಯಲ್ಲಿ ಆಗಸ್ಟ್‌ 15 ರ ಭಾರತದ ಸ್ವಾತಂತ್ರ್ಯ ದಿನವನ್ನು ವಿಶ್ವದ ಎರಡು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳ ‘ರಾಷ್ಟ್ರೀಯ ಆಚರಣೆಯ ದಿನ’ವೆಂದು ಘೋಷಿಸಲು ನಿರ್ಣಯವನ್ನು ಮಂಡಿಸಿದೆ.

ಪ್ರಜಾಪ್ರಭುತ್ವ ಮೌಲ್ಯಗಳಲ್ಲಿ ಬೇರೂರಿರುವ ಅಮೆರಿಕ ಮತ್ತು ಭಾರತದ ನಡುವಿನ ಬಲವಾದ ಪಾಲುದಾರಿಕೆಯು ಜಾಗತಿಕ ಪ್ರಜಾಪ್ರಭುತ್ವವನ್ನು ಮುಂದುವರಿಸಲು ಮತ್ತು ಎಲ್ಲ ರಾಷ್ಟ್ರಗಳಿಗೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಇವೆರೆಡು ರಾಷ್ಟ್ರಗಳು ಉತ್ತೇಜಿಸುತ್ತದೆ ಎಂಬ ನಂಬಿಕೆಯನ್ನು ನಿರ್ಣಯದಲ್ಲಿ ವ್ಯಕ್ತಪಡಿಸಲಾಗಿದೆ.

ಭಾರತೀಯ-ಅಮೆರಿಕನ್ ಕಾಂಗ್ರೆಸ್ಸಿಗರಾದ ಬಡಿ ಕಾರ್ಟರ್ ಮತ್ತು ಬ್ರಾಡ್ ಶರ್ಮನ್ ನಿರ್ಣಯದ ಸಹಪ್ರಾಯೋಜಕರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಂದರ್ಶನದಲ್ಲಿ ‘ದಲಿತ’ ಪದ ಬಳಕೆ: ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌ ದಾಖಲು

ಅಮೆರಿಕ ಮತ್ತು ಭಾರತ ಸಾಮಾನ್ಯ ಹಿತಾಸಕ್ತಿಗಳ ಆಧಾರದ ಮೇಲೆ ಉನ್ನತ ಹಂತದ ನಂಬಿಕೆ, ಪರಸ್ಪರ ತಿಳುವಳಿಕೆ ಮತ್ತು ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಬಹುತ್ವ, ಕಾನೂನಿನ ನಿಯಮ ಮತ್ತು ಮಾನವ ಹಕ್ಕುಗಳ ಗೌರವದ ಬಗ್ಗೆ ಬದ್ಧತೆಯನ್ನು ಹೊಂದಿವೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಭಾರತೀಯ-ಅಮೆರಿಕನ್ನರು ಸರ್ಕಾರಿ ಅಧಿಕಾರಿಗಳು, ಮಿಲಿಟರಿ ಸಿಬ್ಬಂದಿ ಮತ್ತು ಕಾನೂನು ಜಾರಿ ಅಧಿಕಾರಿಗಳಾಗಿ ದೇಶದಲ್ಲಿ ಸೇವೆ ಸಲ್ಲಿಸುತ್ತಿದ್ದು, ಅಮೆರಿಕ ಸಂವಿಧಾನವನ್ನು ಎತ್ತಿಹಿಡಿಯುತ್ತಾರೆ. ಅಲ್ಲದೆ ರಾಷ್ಟ್ರದ ಶ್ರೀಮಂತ ವೈವಿಧ್ಯತೆಗೆ ಹೆಚ್ಚಿನ ಕೊಡುಗೆ ನೀಡುತ್ತಿದ್ದಾರೆ. ಆಗಸ್ಟ್‌ 15 ರ ದಿನವನ್ನು ಭಾರತೀಯ ಜನರೊಂದಿಗೆ ಆಚರಿಸಲು ಮತ್ತು ಎರಡು ರಾಷ್ಟ್ರಗಳಲ್ಲಿ ಜನ್ಮತಾಳಿದ ಪ್ರಜಾಪ್ರಭುತ್ವದ ತತ್ವಗಳನ್ನು ವಿಶ್ವಾದ್ಯಂತ ಪಸರಿಸಲು ಇದು ಸಹಕಾರಿಯಾಗಿದೆ ಎಂದು ನಿರ್ಣಯ ಹೇಳಿದೆ.

ಪ್ರಧಾನಿ ಮೋದಿ ಅವರು ಅಮೆರಿಕ ಕಾಂಗ್ರೆಸ್ ಅನ್ನು ಎರಡು ಬಾರಿ ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ. ತಮ್ಮ ಭಾಷಣದಲ್ಲಿ ಮಹಿಳಾ ಸಬಲೀಕರಣ ಮತ್ತು ಉಕ್ರೇನ್ ಯುದ್ಧ ಸೇರಿದಂತೆ ಹಲವಾರು ವಿಷಯಗಳ ಕುರಿತು ಅವರು ಮಾತನಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...