ಲೋಕಸಭೆ ಚುನಾವಣೆ | 15 ದಿನದಲ್ಲೇ ಉದ್ಧವ್ ಠಾಕ್ರೆ ಮೋದಿ ಸರ್ಕಾರ ಸೇರ್ಪಡೆ: ಅಮರಾವತಿ ಶಾಸಕ

Date:

ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದ 15 ದಿನಗಳಲ್ಲಿಯೇ ಶಿವಸೇನೆ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೋದಿ ಸರ್ಕಾರವನ್ನು ಸೇರಲಿದ್ದಾರೆ ಎಂದು ಅಮರಾವತಿಯ ಸ್ವತಂತ್ರ ಶಾಸಕ ರವಿ ರಾಣಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೋದಿ ಅವರು ಮತ್ತೆ ಪ್ರಧಾನಿಯಾದ 15 ದಿನಗಳ ನಂತರ, ಉದ್ಧವ್ ಠಾಕ್ರೆ ಮೋದಿ ಸರ್ಕಾರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಯಾಕೆಂದರೆ ಮುಂಬರುವ ಯುಗ ಮೋದಿ ಮತ್ತು ಉದ್ಧವ್ ಠಾಕ್ರೆ ಅವರಿಗೆ ತಿಳಿದಿದೆ” ಎಂದಿದ್ದಾರೆ.

ಇನ್ನು ಜೂನ್ 4ರಂದು ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಒಳಗೊಂಡಿರುವ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕರು ರಕ್ತದೊತ್ತಡದ ಔಷಧಗಳು ಮತ್ತು ವೈದ್ಯರನ್ನು ತಮ್ಮೊಂದಿಗೆ ಇಟ್ಟುಕೊಳ್ಳಬೇಕು ಎಂದು ರವಿ ರಾಣಾ ಲೇವಡಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಅಂತ್ಯಗೊಳ್ಳುತ್ತಿದೆ ಮೋದಿ-ಶಾ ‘ಬ್ರಾಂಡ್’ ರಾಜಕಾರಣ; ಅದಕ್ಕೆ ಮಹಾರಾಷ್ಟ್ರವೇ ಸಾಕ್ಷಿ

ಅಮರಾವತಿಯ ಹಾಲಿ ಸಂಸದ ರವಿ ರಾಣಾ ಅವರ ಪತ್ನಿ ನವನೀತ್ ರಾಣಾ ಅವರು ಆಡಳಿತಾರೂಢ ಬಿಜೆಪಿ ಟಿಕೆಟ್‌ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. 2019ರಲ್ಲಿ, ನವನೀತ್ ರಾಣಾ ಅದೇ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದಾರೆ.

ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪತ್ನಿ ನವನೀತ್ ರಾಣಾ ಎರಡು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ರಾಣಾ, ಸಮಾಜದ ಎಲ್ಲಾ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿರುವುದರಿಂದ ನವನೀತ್ ಮತ್ತೆ ಸಂಸದರಾಗಲಿದ್ದಾರೆ ಎಂದರು.

ಅಮರಾವತಿಯಲ್ಲಿ ನವನೀತ್ ರಾಣಾ ಅವರು ಕಾಂಗ್ರೆಸ್ ಶಾಸಕ ಬಲ್ವಂತ್ ವಾಂಖೆಡೆ ಮತ್ತು ಪ್ರಹಾರ್ ಜನಶಕ್ತಿ ಪಕ್ಷದ ದಿನೇಶ್ ಬಬ್ ವಿರುದ್ಧ ಕಣಕ್ಕಿಳಿದಿದ್ದಾರೆ. ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾಗಿದ್ದಾಗ ಏಪ್ರಿಲ್ 2022ರಲ್ಲಿ ಹನುಮಾನ್ ಚಾಲೀಸಾ ಪಠಣದ ಬಗ್ಗೆ ರಾಣಾ ದಂಪತಿಗಳು ಎಂವಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...