ಉಡುಪಿ ವಿಡಿಯೋ ಪ್ರಕರಣ | ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೂ ಎಫ್‌ಐಆರ್ ದಾಖಲು

Date:

  • ಮಲ್ಪೆ ಪೊಲೀಸ್ ಠಾಣೆಯಲ್ಲಿ ಎರಡು ಸ್ವಯಂಪ್ರೇರಿತ ದೂರು ದಾಖಲು
  • ಸುಳ್ಳು ಸುದ್ದಿ ಹಬ್ಬಿಸಿ, ಸೌಹಾರ್ದತೆಗೆ ಧಕ್ಕೆಗೆ ಯತ್ನಿಸಿದವರ ವಿರುದ್ಧ ಕೂಡ ಎಫ್‌ಐಆರ್

ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲು ಮೊಬೈಲ್ ಇಟ್ಟ ಪ್ರಕರಣ ರಾಜ್ಯದಲ್ಲಿ ರಾಜಕೀಯ ಚರ್ಚೆಗೆ ವೇದಿಕೆಯೊದಗಿಸಿದೆ. ಬಿಜೆಪಿ ಮತ್ತು ಹಿಂದುತ್ವವಾದಿಗಳು ಘಟನೆಗೆ ಕೋಮು ಬಣ್ಣ ಬಳಿಯುತ್ತಿದ್ದಾರೆ. ಇದೆಲ್ಲದರ ನಡುವೆ, ಉಡುಪಿಯ ಮಲ್ಪೆ ಪೊಲೀಸರು ಸ್ವಯಂ ಪ್ರೇರಿತವಾಗಿ ಒಟ್ಟು ಎರಡು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಒಂದು ಘಟನೆಯ ಸತ್ಯಾಸತ್ಯತೆ ಪರಿಶೀಲಿಸಲು ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಹಾಗೂ ಸುಳ್ಳು ಸುದ್ದಿ ಹಬ್ಬಿಸಿ ಕೋಮು ದ್ವೇಷ ಉಂಟು ಮಾಡಿ ಸೌಹಾರ್ದತೆಗೆ ಭಾದಕವಾಗುವ ಕೃತ್ಯದ ಎಸಗಿದವರ ವಿರುದ್ಧವೂ ದೂರು ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಉಡುಪಿ ಜಿಲ್ಲಾ ಪೊಲೀಸರು, ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡೀಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆಯಲ್ಲಿರುತ್ತವೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿಯ ಕಾಲೇಜಿನಲ್ಲಿ ನಡೆದಿದ್ದೇನು? ಬಿಜೆಪಿ ನಾಯಕರು ಹೇಳುತ್ತಿರುವುದೇನು? ಇಲ್ಲಿದೆ ವಿವರ

ಈ ಘಟನೆಗೆ ಸಂಬಂಧಿಸಿದಂತೆ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಮೂಲಕ ವಿಡಿಯೋ ಚಿತ್ರೀಕರಿಸಿ ಫಾರ್ವರ್ಡ್ ಮಾಡಿರುತ್ತಾರೆ ಎಂದು ಎಡಿಟ್ ಮಾಡಿದ ವಿಡಿಯೋ One India Kannada ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಆಗಿದೆ. ಅದನ್ನು ಕಾಲು ಸಿಂಗ್‌ ಚೌಹಾಣ್ ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಆಕ್ಷೇಪಾರ್ಹ ಸುಳ್ಳುಸುದ್ದಿ ಹಬ್ಬಿಸುತ್ತಿರುವುದು ಕಂಡು ಬಂದಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮು ದ್ವೇಷ ಉಂಟು ಮಾಡಿ ಸೌಹಾರ್ದತೆಗೆ ಭಾದಕವಾಗುವ ಕೃತ್ಯದ ಅಡಿಯಲ್ಲಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿದ್ದೇವೆ ಎಂದು ಉಡುಪಿ ಪೊಲೀಸರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...