‘ಜಿ ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ’: ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಯಶ್ಪಾಲ್ ಸುವರ್ಣ

Date:

  • ಹಿಂದೂ ವಿರೋಧಿ ಸರ್ಕಾರ’ ಎಂದು ಘೋಷಣೆ
  • ವಿವಾದಾತ್ಮಕ ಹೇಳಿಕೆ ನೀಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ

ಉಡುಪಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಪ್ರತಿಭಟನೆಯ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗೃಹಸಚಿವ ಜಿ ಪರಮೇಶ್ವರ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಕ್ಕಳಾಟ ಎಂದಿದ್ದನ್ನು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ‘ಕಳೆದ ಸಾಲಿನಲ್ಲಿ ಅವರು ಸಚಿವರಾಗಿದ್ದಾಗ ಜಿ. ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ. ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರೂ ಇಡುತ್ತಾರೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉಡುಪಿಯ ಬಿಜೆಪಿ ಕಚೇರಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರಕಾರವನ್ನು ‘ಹಿಂದೂ ವಿರೋಧಿ’ ಸರಕಾರವೆಂದು ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ, ಗುಡ್ಡಿ ಸುರೇಶ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯಾವುದೇ ಹಿಡನ್ ಕ್ಯಾಮೆರಾ ಇರಲಿಲ್ಲ, ವಿಡಿಯೋ ಸಾಕ್ಷ್ಯಾಧಾರ ಯಾವುದೂ ಇದುವರೆಗೆ ದೊರಕಿಲ್ಲವೆಂದು ಪೊಲೀಸ್ ಇಲಾಖೆ, ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ತಿಳಿಸಿದ್ದಾರೆ. ಇದೀಗ ಬಿಜೆಪಿ ಈ ವಿಚಾರವನ್ನು ಇಟ್ಟುಕೊಂಡು ಕಾಂಗ್ರೆಸ್ ವಿರುದ್ಧ ಆರೋಪಗಳ ಸುರಿಮಳೆ ಮಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...