ಪ್ರಧಾನಿ ಮೋದಿ ಫೋಟೋ ಇರುವ ‘ಸೆಲ್ಫಿ ಪಾಯಿಂಟ್’ ಸ್ಥಾಪನೆಗೆ ವಿವಿ, ಕಾಲೇಜುಗಳಿಗೆ ಸೂಚಿಸಿದ ಯುಜಿಸಿ: ವ್ಯಾಪಕ ಟೀಕೆ

Date:

ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ವು ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹಿನ್ನೆಲೆಯಲ್ಲಿ ಕಾಣುವಂತೆ ‘ಸೆಲ್ಫಿ ಪಾಯಿಂಟ್’ ರಚಿಸಲು ದೇಶದಲ್ಲಿಯ ಎಲ್ಲ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.

ನರೇಂದ್ರ ಮೋದಿಯವರ ಚಿತ್ರಗಳ ಹಿನ್ನೆಲೆಯಲ್ಲಿ ‘ಸೆಲ್ಫಿ ಪಾಯಿಂಟ್’ ಅಥವಾ ತಾಣಗಳನ್ನು ಸ್ಥಾಪಿಸುವಂತೆ ದೇಶದಲ್ಲಿಯ ಎಲ್ಲ ವಿವಿ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿರುವುದಾಗಿ telegraphindia.com ವರದಿ ಮಾಡಿತ್ತು. ಈ ವರದಿಯು ದೇಶದಲ್ಲಿ ಸಂಚಲನ ಸೃಷ್ಟಿಸಿದ್ದು, ಯುಜಿಸಿಯ ಆದೇಶಕ್ಕೆ ವಿಪಕ್ಷಗಳಿ ಟೀಕಾ ಪ್ರಹಾರ ನಡೆಸಿದೆ.

ಟೆಲಿಗ್ರಾಫ್‌ನ ವರದಿಯನ್ನು ಹಂಚಿಕೊಂಡು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, ಸೆಲ್ಫಿ ಗೀಳಿನ ಪ್ರಧಾನಿ ಅವರು ಲೋಕಸಭೆ ಚುನಾವಣೆಯ ಸಮಯದಲ್ಲಿ ಎಷ್ಟು ಅಸುರಕ್ಷಿತರಾಗಿದ್ದಾರೆಂದರೆ ಅವರು ತಮ್ಮ ಅಬ್ಬರದ ಇಮೇಜ್ ಅನ್ನು ಉಳಿಸಲು ಯಾವ ಕಲ್ಲನ್ನು ಕೂಡ ಬಿಡುತ್ತಿಲ್ಲ ಎಂಬುದಕ್ಕೆ ಇದೇ ಸಾಕ್ಷಿ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮೊದಲು ‘ಸೆಲ್ಫಿ ಪಾಯಿಂಟ್‌’ಗಳನ್ನು ಸ್ಥಾಪಿಸುವಂತೆ ಸೇನೆಗೆ ತಿಳಿಲಾಯಿತು. ನಂತರ, ಅವರು ಐಎಎಸ್ ಅಧಿಕಾರಿಗಳು ಮತ್ತು ಇತರ ಹಿರಿಯ ಸರ್ಕಾರಿ ಅಧಿಕಾರಿಗಳನ್ನು ‘ರಥಯಾತ್ರೆ’ ಕೈಗೊಳ್ಳುವಂತೆ ಹೇಳಿದರು. ಇದೀಗ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ‘ಸೆಲ್ಫಿ ಪಾಯಿಂಟ್‌’ ಸ್ಥಾಪಿಸುವಂತೆ ಯುಜಿಸಿಗೆ ಸೂಚಿಸಿದ್ದಾರೆ. ಚಂದ್ರಯಾನ-3ರ ಲ್ಯಾಂಡಿಂಗ್ ವೇಳೆ ನೇರಪ್ರಸಾರ ಸ್ಕ್ರೀನ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಲ್ಯಾಂಡಿಂಗ್ ಅನ್ನೇ ಹೈಜಾಕ್ ಮಾಡಿದರು. ಅದಕ್ಕೂ ಮೊದಲು ಕೋವಿಡ್ ಲಸಿಕೆ ಪ್ರಮಾಣಪತ್ರಗಳಿಗೆ ತಮ್ಮ ಫೋಟೋವನ್ನು ಅಂಟಿಸಿದರು. ಇವೆಲ್ಲವನ್ನು ನೋಡುವಾಗ ಮನುಷ್ಯನ ಪ್ರಚಂಡ ಅಭದ್ರತೆ ಮತ್ತು ಸಿಕೋಫಾನ್ಸಿ ಎಂಬ ಅನಾರೋಗ್ಯದ ಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಕಳೆದ 10 ವರ್ಷಗಳಲ್ಲಿ ಉತ್ತರ ಕೊರಿಯಾದ ಸರ್ವಾಧಿಕಾರಿಗಳನ್ನೂ ಮೀರಿಸಿರುವಂತಹ ಈ ನಡೆಯು ಅಸಹ್ಯಕರ ಸ್ವಯಂ ಪ್ರಚಾರ. ಇದರಿಂದಾಗಿ ದೇಶದ ಜನ ಬೇಸತ್ತಿದ್ದಾರೆ. ಶೀಘ್ರವೇ ಸೂಕ್ತ ಉತ್ತರ ನೀಡಲಿದ್ದಾರೆ’ ಎಂದು ಜೈರಾಮ್ ರಮೇಶ್ ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿದ್ದೀರಾ? ಸುರಂಗ ಘಟನೆ | ಕಾರ್ಮಿಕನ ಕುಟುಂಬದ ದುಸ್ಥಿತಿ ಬಗ್ಗೆ ವರದಿ ಮಾಡಿದ ಪತ್ರಕರ್ತರ ವಿರುದ್ಧ ಎಫ್ಐಆರ್!

ಈ ಬಗ್ಗೆ ಪ್ರಮುಖ ಶಿಕ್ಷಣ ಸಂಸ್ಥೆಯೊಂದರ ಅಧ್ಯಾಪಕರೋರ್ವರು ಮಾತನಾಡಿದ್ದು, ‘ಕೇಂದ್ರ ಸರಕಾರವು ಪ್ರತಿಯೊಂದೂ ಸಾಮಾನ್ಯ ಸಾಧನೆಯನ್ನು ಅದ್ಭುತವೆಂದು ಬಿಂಬಿಸುತ್ತಿದೆ ಮತ್ತು ಅದರ ಹೆಗ್ಗಳಿಕೆಯನ್ನು ಪ್ರಧಾನಿಯವರಿಗೆ ಸಲ್ಲಿಸುತ್ತಿದೆ. ಈಗ ನಡೆಯುತ್ತಿರುವುದು ಆರಾಧನಾ ವ್ಯಕ್ತಿತ್ವವನ್ನು ನಿರ್ಮಿಸುವ ಪೂರ್ಣ ಪ್ರಮಾಣದ ಪ್ರಚಾರ. ಇದಕ್ಕಾಗಿ ಸರಕಾರವು ಈ ಚಟುವಟಿಕೆಗಳಿಗೆ ಸಂಬಂಧವೇ ಇಲ್ಲದ ಸಾರ್ವಜನಿಕ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಸರಕಾರ ಅಥವಾ ಯುಜಿಸಿ ಇಂತಹ ಪ್ರಚಾರವನ್ನು ಉತ್ತೇಜಿಸುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ’ ಎಂದು ತಿಳಿಸಿದ್ದಾರೆ.

ಯುಜಿಸಿ ಆದೇಶದಲ್ಲಿ ಏನಿದೆ?
ಯುಜಿಸಿ ತನ್ನ ಪತ್ರದಲ್ಲಿ ಸೆಲ್ಪಿ ತಾಣಗಳನ್ನು ಸೃಷ್ಟಿಸಿ ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಳ್ಳಲು ಮತ್ತು ಅವುಗಳನ್ನು ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲು ವಿದ್ಯಾರ್ಥಿಗಳು ಮತ್ತು ಸಂದರ್ಶಕರನ್ನು ಉತ್ತೇಜಿಸುವಂತೆ ಆಗ್ರಹಿಸಿದೆ.

ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಅವರು ಈ ಕುರಿತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಕಳುಹಿಸಿದ್ದು, ‘ವಿವಿಧ ಕ್ಷೇತ್ರಗಳಲ್ಲಿ ಯುವಕರ ಶಕ್ತಿ ಮತ್ತು ಉತ್ಸಾಹವನ್ನು ಬಳಸಿಕೊಳ್ಳಲು ಒಂದು ಅನನ್ಯ ಅವಕಾಶ’ ಎಂದು ಹೇಳಿದ್ದಾರೆ.

modi selfie point

‘ನಿಮ್ಮ ಸಂಸ್ಥೆಯೊಳಗೆ ಸೆಲ್ಫಿ ಪಾಯಿಂಟ್ ಸ್ಥಾಪಿಸುವ ಮೂಲಕ ನಮ್ಮ ದೇಶವು ಮಾಡಿದ ಅದ್ಭುತ ಪ್ರಗತಿಯನ್ನು ನಾವು ಆಚರಿಸೋಣ ಮತ್ತು ಪ್ರಸಾರ ಮಾಡೋಣ. ವಿವಿಧ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳ ಬಗ್ಗೆ ವಿಶೇಷವಾಗಿ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಹೊಸ ಉಪಕ್ರಮಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದು ಸೆಲ್ಫಿ ಪಾಯಿಂಟ್‌ನ ಉದ್ದೇಶವಾಗಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ.

ಪ್ರತಿ ಸೆಲ್ಫಿ ಪಾಯಿಂಟ್‌ನ್ನು ಕ್ಯಾಂಪಸ್‌ನ ಆಯಕಟ್ಟಿನ ಸ್ಥಳದಲ್ಲಿ ಸ್ಥಾಪಿಸಬೇಕು ಮತ್ತು 3ಡಿ ಲೇಔಟ್ ಹೊಂದಿರಬೇಕು. ಇದು ಶಿಕ್ಷಣದ ಅಂತಾರಾಷ್ಟ್ರೀಕರಣ, ವೈವಿಧ್ಯತೆಯಲ್ಲಿ ಏಕತೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್, ಬಹುಭಾಷಾತೆಯಂತಹ ನಿರ್ದಿಷ್ಟ ವಿಷಯಕ್ಕೆ ಅನುಗುಣವಾಗಿ ರೂಪಿಸಿ ಎಂದು ಯುಜಿಸಿಯ ನಿರ್ದೇಶನ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...