ಬ್ರಿಟನ್‌ | ಗುರುದ್ವಾರ ಪ್ರವೇಶಿಸದಂತೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ತಡೆದ ಖಲಿಸ್ತಾನಿ ಬೆಂಬಲಿಗರು

Date:

ಬ್ರಿಟನ್‌ನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರನ್ನು ಖಲಿಸ್ತಾನಿ ಬೆಂಬಲಿಗರು ಸ್ಕಾಟ್ಲೆಂಡ್‌ನ ಗುರುದ್ವಾರಕ್ಕೆ ಪ್ರವೇಶಿಸದಂತೆ ತಡೆದಿರುವ ದೃಶ್ಯ ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡಿದೆ.

ಖಲಿಸ್ತಾನಿಗಳ‌ ಮುಖಂಡ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಇತ್ತೀಚೆಗೆ ಮಾಡಿದ ಆರೋಪದ ನಡುವೆಯೇ ಈ ಘಟನೆ ನಡೆದಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಖಲಿಸ್ತಾನ್ ಪರ ಕಾರ್ಯಕರ್ತರೊಬ್ಬರು ದೊರೈಸ್ವಾಮಿ ಅವರನ್ನು ಆಲ್ಬರ್ಟ್ ಡ್ರೈವ್‌ನಲ್ಲಿರುವ ಗ್ಲಾಸ್ಗೋ ಗುರುದ್ವಾರಕ್ಕೆ ಪ್ರವೇಶಿಸದಂತೆ ತಡೆಯುತ್ತಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುದ್ವಾರದ ವ್ಯವಸ್ಥಾಪನಾ ಸಮಿತಿಯು ಭಾರತೀಯ ಹೈಕಮಿಷನರ್ ಅವರನ್ನು ಆಹ್ವಾನಿಸಿದ್ದ ಹಿನ್ನೆಲೆಯಲ್ಲಿ ಭೇಟಿ ನೀಡಲು ತೆರಳಿದ್ದ ವೇಳೆ ಈ ಬೆಳವಣಿಗೆ ನಡೆದಿದೆ.

ಅಲ್ಲದೇ, ವಿಡಿಯೋದಲ್ಲಿ ಗುರುದ್ವಾರ ವ್ಯವಸ್ಥಾಪಕ ಸಮಿತಿಯ ಸಿಬ್ಬಂದಿಗೆ ಬೆದರಿಕೆ ಹಾಕುತ್ತಿರುವುದು ಕೂಡ ದಾಖಲಾಗಿದೆ.

ಈ ಬಗ್ಗೆ ಭಾರತವು ತಕ್ಷಣ ಪ್ರತಿಕ್ರಿಯೆ ನೀಡಿಲ್ಲದಿದ್ದರೂ, ಹೈಕಮಿಷನರ್ ಅವರ ಭದ್ರತೆಗೆ ಸಂಬಂಧಿಸಿದ್ದಾಗಿರುವುದರಿಂದ ಪೊಲೀಸ್ ದೂರು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ “ಭಾರತದ ಸರ್ಕಾರಿ ಏಜೆಂಟರು” ಶಾಮೀಲಾಗಿದ್ದಾರೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡೊ ಆರೋಪಿಸಿದ ನಂತರ ಭಾರತ-ಕೆನಡಾ ನಡುವಿನ ಸಂಬಂಧ ಹಳಸಿದೆ. ಟ್ರುಡೊ ಅವರ ಆರೋಪಗಳನ್ನು “ಅಸಂಬದ್ಧ” ಎಂದು ತಿರಸ್ಕರಿಸಿದ್ದ ಭಾರತವು, ಕೆನಡಾ ಭಯೋತ್ಪಾದಕರಿಗೆ ಸುರಕ್ಷಿತ ಆಶ್ರಯ ನೀಡುತ್ತಿದೆ ಎಂದು ಆರೋಪಿಸಿತ್ತು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...