ಅಘೋಷಿತ ತುರ್ತು ಪರಿಸ್ಥಿತಿ ಆರಂಭವಾಗಿ 11 ವರ್ಷ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Date:

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹನ್ನೊಂದು ವರ್ಷಗಳಾಗಿದ್ದು, “ಅಘೋಷಿತ ತುರ್ತು ಪರಿಸ್ಥಿತಿ ಆರಂಭವಾಗಿ 11 ವರ್ಷ” ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಹನ್ನೊಂದು ವರ್ಷಗಳಲ್ಲಿ ‘ಅಚ್ಛೇ ದಿನ’ ಎಂಬ ಭರವಸೆಯು ದುಃಸ್ವಪ್ನವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪೋಸ್ಟ್ ಮಾಡಿದ್ದಾರೆ. “2014 ಮಾರ್ಚ್ 24. ಈ ಹನ್ನೊಂದು ವರ್ಷಗಳಲ್ಲಿ ಬೃಹತ್ ಭರವಸೆಗಳನ್ನು ನೀಡಿದರು. ಆದರೆ ಎಲ್ಲವೂ ಪೊಳ್ಳಾಯಿತು. ‘ಅಚ್ಛೇ ದಿನ’ ಎಂಬುದು ಈಗ ದುಃಸ್ವಪ್ನ ಎಂಬುದು ಈ ಹನ್ನೊಂದು ವರ್ಷದಲ್ಲಿ ಸಾಬೀತಾಗಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅಘೋಷಿತ ತುರ್ತು ಪರಿಸ್ಥಿತಿ | ಅಂಬೇಡ್ಕರ್ ರಚಿತ ಸಂವಿಧಾನ ನಾಶಕ್ಕೆ ಬಿಜೆಪಿ ಪಿತೂರಿ: ಶರದ್ ಪವಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಯುವಕರಿಗೆ, ರೈತರಿಗೆ, ಮಹಿಳೆಯರಿಗೆ, ಹಿಂದುಳಿದ ವರ್ಗ, ಅರ್ಥವ್ಯವಸ್ಥೆ, ವಿದೇಶಾಂಗ ನೀತಿ, ಪ್ರಜಾಪ್ರಭುತ್ವದ ಸ್ಥಿತಿ ಹೇಗಿದೆ ಎಂಬುದನ್ನೂ ಖರ್ಗೆ ಅವರು ಒಂದೊಂದೇ ವಾಕ್ಯದಲ್ಲಿ ವಿವರಿಸಿದ್ದಾರೆ.

“ಯುವಜನರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಭರವಸೆ ನೀಡಲಾಗಿತ್ತು. ಆದರೆ ವಾಸ್ತವದಲ್ಲಿ ಕೋಟ್ಯಾಂತರ ಉದ್ಯೋಗಿಗಳು ಕಡಿಮೆಯಾಗಿದೆ. ರೈತರ ಆದಾಯ ದ್ವಿಗುಣಗೊಳ್ಳಲಿಲ್ಲ. ಜೊತೆಗೆ ರೈತರು ಕೇಂದ್ರದ ದಾಳಿಗೆ ಗುರಿಯಾಗಬೇಕಾಗಿದೆ” ಹೇಳಿದರು.

“ಮಹಿಳೆಯರಿಗೆ ಹೆಸರಿಗೆ ನೀಡುವ ಮೀಸಲಾತಿಗೂ ಷರತ್ತುಗಳು ವಿಧಿಸಲಾಗುತ್ತದೆ. ಮಹಿಳೆಯರಿಗೆ ಭದ್ರತೆಯೂ ಇಲ್ಲ. ದುರ್ಬಲ ವರ್ಗಗಳಾದ ಎಸ್‌ಸಿ/ಎಸ್‌ಟಿ/ಒಬಿಸಿ/ಅಲ್ಪಸಂಖ್ಯಾತರು ಭೀಕರ ದೌರ್ಜನ್ಯಗಳಿಗೆ ಒಳಗಾಗುತ್ತಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಆರ್ಥಿಕತೆ ವಿಚಾರಕ್ಕೆ ಬಂದಾಗ ಈ ಹನ್ನೊಂದು ವರ್ಷಗಳಲ್ಲಿ ಹಣದುಬ್ಬರ ಉತ್ತುಂಗಕ್ಕೆ ಏರಿದೆ. ನಿರುದ್ಯೋಗ ಏರಿಕೆಯಾಗಿದೆ. ಅನುಬೋಗ ಸ್ಥಗಿತವಾಗಿದೆ. ಮೇಕ್ ಇನ್ ಇಂಡಿಯಾ ವಿಫಲವಾಗಿದೆ. ಅಸಮಾನತೆ ಉತ್ತುಂಗಕ್ಕೇರಿದೆ” ಎಂದು ದೂರಿದ್ದಾರೆ.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ: ಮಾಜಿ ಸಚಿವ ಬಿ.ಸಿ ನಾಗೇಶ್‌

“ವಿಶ್ವಗುರು ಆಗುವ ಭರವಸೆಯನ್ನು ಕೇಂದ್ರದ ಮೋದಿ ಸರ್ಕಾರ ನೀಡಿದೆ. ಆದರೆ ಎಲ್ಲಾ ದೇಶಗಳೊಂದಿಗಿನ ಸಂಬಂಧವನ್ನು ಹಾಳು ಮಾಡಿಕೊಂಡಿದೆ. ಪ್ರಜಾಪ್ರಭುತ್ವದ ಪ್ರತಿಯೊಂದು ಸ್ತಂಭದ ಮೇಲೆ ಆರ್‌ಎಸ್‌ಎಸ್‌ ದಾಳಿ ನಡೆಸುತ್ತಿದೆ. ಇಡಿ/ಸಿಬಿಐ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸಂಸ್ಥೆಗಳ ಸ್ವಾಯತ್ತತೆ ನಾಶವಾಗಿದೆ” ಎಂದು ಆರೋಪಿಸಿದ್ದಾರೆ.

“140 ಕೋಟಿ ಜನಸಂಖ್ಯೆಯ ಪ್ರತಿಯೊಂದು ವರ್ಗವೂ ತೊಂದರೆಗೀಡಾಗಿದೆ. 11 ವರ್ಷಗಳಲ್ಲಿ ಕಮಲದ ಚಿಹ್ನೆ ಈ ರೀತಿಯಾಗಿದೆ” ಎಂದು ಹನ್ನೊಂದು ವರ್ಷಗಳ ಅವಧಿಯನ್ನು ಕಾಂಗ್ರೆಸ್ ವಿವರಿಸಿದೆ.

ಇನ್ನು ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರೂ ಪೋಸ್ಟ್ ಮಾಡಿದ್ದಾರೆ. “ಇಂದು 2025ರ ಮೇ 26.ಅಘೋಷಿತ ತುರ್ತು ಪರಿಸ್ಥಿತಿ ಆರಂಭವಾಗಿ 11 ವರ್ಷ” ಎಂದು ಹೇಳಿದ್ದಾರೆ.

2014ರ ಮೇ 26ರಂದು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅದಾದ ಬಳಿಕ ಕಳೆದ ವರ್ಷ ಜೂನ್ 9ರಂದು ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...